Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಅಪರಾಧ ಸುದ್ದಿ

ಕೊಪ್ಪಳ : ಎರಡು ಕಡೆ ಕರಡಿ ದಾಳಿ- ಓರ್ವ ಸಾವು, ಮೂವರು ಗಂಭೀರ ಗಾಯ

 

ಕೊಪ್ಪಳ, .18: ಜಿಲ್ಲೆಯ ಕನಕಗಿರಿ ತಾಲೂಕಿನ ರಾಂಪುರ ಗ್ರಾಮದಲ್ಲಿ ಕರಡಿ ದಾಳಿಗೆ ತುತ್ತಾಗಿದ್ದ ವೃದ್ದನೋರ್ವ ಮೃತಪಟ್ಟರೆ, ಇನ್ನು ಒಂದೇ ಕುಟುಂಬದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗ್ರಾಮದ ಹೊರವಲಯದಲ್ಲಿರುವ ಆಂಜನೇಯ ದೇವಸ್ಥಾನಕ್ಕೆ ಕಳೆದ ರಾತ್ರಿ ಕರಡಿ ನುಗ್ಗಿದೆ. ದೇವಸ್ಥಾನದಲ್ಲಿರುವ ದೀಪದ ಎಣ್ಣೆ ಮತ್ತು ಕುಡಿಯುವ ನೀರಿನ ಉದ್ದೇಶದಿಂದ ಕರಡಿ ಬಂದಿದೆ. ಆದ್ರೆ, ದೇವಸ್ಥಾನದೊಳಗೆ ಕರಡಿ ಇದ್ದಿದ್ದನ್ನು ಇಂದು ಮುಂಜಾನೆ ಗಮನಿಸಿದ ಗ್ರಾಮದ ಜನರು, ದೇವಸ್ಥಾನದ ಬಾಗಿಲು ಹಾಕಿ ಕರಡಿಯನ್ನು ಕೂಡಿ ಹಾಕಿದ್ದರು.

ನಂತರ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಕರಡಿ ಹಿಡಿಯುವ ಕಾರ್ಯಾಚರಣೆಗೆ ಮುಂದಾಗಿದ್ದರು. ಆದ್ರೆ, ಇದೇ ಸಮಯದಲ್ಲಿ ದೇವಸ್ಥಾನದ ಕಬ್ಬಿಣದ ಗ್ರಿಲ್ ಮುರಿದು ಹೊರಗೆ ಬಂದ ಕರಡಿ, ಅಲ್ಲಿಂದ ತಪ್ಪಿಸಿಕೊಂಡು ಹೋಗಲು ಮುಂದಾಗಿದೆ. ಈ ಸಮಯದಲ್ಲಿ ದಾರಿಯಲ್ಲಿ ಬಂದಿದ್ದ ವೃದ್ದನ ಮೇಲೆ ಕರಡಿ ದಾಳಿ ಮಾಡಿದೆ. ಘಟನೆಯಲ್ಲಿ ರಾಂಪುರ ಗ್ರಾಮದ ಚನ್ನಪ್ಪ ಮಡಿವಾಳರ(74) ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ವೃದ್ದ ಇಂದು ಮಧ್ಯಾಹ್ನ ಮೃತಪಟ್ಟಿದ್ದಾರೆ.

ಇನ್ನು ರಾಂಪುರ ಗ್ರಾಮದಲ್ಲಿ ಕರಡಿ ದಾಳಿಗೆ ವೃದ್ದ ಬಲಿಯಾಗಲು ಅರಣ್ಯ ಇಲಾಖೆಯ ಅಧಿಕಾರಿಗಳೇ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಗ್ರಾಮಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಯಾವುದೇ ಸಲಕರಣೆಗಳು ಇಲ್ಲದೇ ಬಂದಿದ್ದರು. ಅವರು ಸರಿಯಾಗಿ ಬೋನು ಇಟ್ಟು ಕರಡಿ ಹಿಡದಿದ್ದರೆ ವೃದ್ದನ ಪ್ರಾಣ ಹೋಗುತ್ತಿರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಂದೇ ಕುಟುಂಬದ ಮೂವರ ಮೇಲೆ ಕರಡಿ ದಾಳಿ

ಇನ್ನು ಕೊಪ್ಪಳ ತಾಲೂಕಿನ ನಾಗೇಶನಹಳ್ಳಿಯಲ್ಲಿ ಕೂಡ ಕಳೆದ ರಾತ್ರಿ ಒಂದೇ ಕುಟುಂಬದ ಮೂವರ ಮೇಲೆ ಕರಡಿ ದಾಳಿ ನಡೆದಿರುವ ಪ್ರಕರಣ ನಡೆದಿದೆ. ನಾಗೇಶನಹಳ್ಳಿ ಗ್ರಾಮದ ಈರಪ್ಪ, ಹೇಮವ್ವ, ಗೌತಮಿ ಎನ್ನುವವರ ಮೇಲೆ ಕರಡಿ ದಾಳಿ ನಡೆದಿದೆ. ಈರಪ್ಪ ಅವರ ನಿವಾಸ, ಗ್ರಾಮದ ಹೊರವಲಯದಲ್ಲಿರುವ ಕೃಷಿ ಜಮೀನಿನಲ್ಲಿದೆ. ಜಮೀನಿನಲ್ಲಿದ್ದ ತಮ್ಮ ಮನೆಗೆ ಈರಪ್ಪ, ತಮ್ಮ ಕುಟುಂಬದವರನ್ನು ಬೈಕ್ ಮೇಲೆ ಕರೆದುಕೊಂಡು ಹೋಗುತ್ತಿದ್ದಾಗ, ಕರಡಿ ದಾಳಿ ಮಾಡಿದೆ. ಕರಡಿ ದಾಳಿಯಿಂದ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಮೂವರನ್ನು ಕೂಡ ಧಾರವಾಡದ ಎಸ್​ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕುಡಿಯುವ ನೀರು, ಆಹಾರ ಅರಿಸಿಕೊಂಡು ಬರ್ತಿರೋ ಕರಡಿಗಳು

ಕೊಪ್ಪಳ ಜಿಲ್ಲೆಯ ಹಲವಡೆ ಕರಡಿಗಳ ಸಂಖ್ಯೆ ಹೆಚ್ಚಾಗಿದೆ. ಈ ಭಾಗದಲ್ಲಿರುವ ಕಲ್ಲಿನ ಬೆಟ್ಟಗುಡ್ಡಗಳು, ಕರಡಿಗಳ ವಾಸ್ತವ್ಯಕ್ಕೆ ಸೂಕ್ತ ಸ್ಥಳವಾಗಿದೆ. ಹೀಗಾಗಿ ಹೆಚ್ಚಿನ ಕರಡಿಗಳು ಜಿಲ್ಲೆಯಲ್ಲಿ ಕಂಡು ಬರ್ತಿವೆ. ಆದ್ರೆ, ಇದೀಗ ಬೇಸಿಗೆ ಆರಂಭವಾಗಿರೋದರಿಂದ ಅರಣ್ಯದಲ್ಲಿ ಕರಡಿಗಳಿಗೆ ಆಹಾರ ಮತ್ತು ನೀರು ಸಿಗುತ್ತಿಲ್ಲ. ಹೀಗಾಗಿ ಕರಡಿಗಳು ಆಹಾರ ಮತ್ತು ನೀರು ಅರಸಿಕೊಂಡು ಜನವಸತಿ ಪ್ರದೇಶಗಳಿಗೆ ಬರುತ್ತಿವೆ. ಕೆಲವಡೇ ನೀರು ಮತ್ತು ಆಹಾರದ ವ್ಯವಸ್ಥೆ ಮಾಡಲಾಗಿದೆ. ಆದರೂ ಕೂಡ ಕೆಲವೆಡೆ ಕರಡಿಗಳು ಜನವಸತಿ ಪ್ರದೇಶಗಳಿಗೆ ಬರುತ್ತಿವೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ. ಮೃತರ ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ ಪರಿಹಾರ ನೀಡೋದಾಗಿ ಕೂಡ ಹೇಳಿದ್ದಾರೆ.

 

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?