Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಶ್ರೀ ದೊಡ್ಡಬಸವೇಶ್ವರ ಜಾತ್ರೆ ಪ್ರಯುಕ್ತ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ

ಕುರುಗೋಡು :  ಕುರುಗೋಡು ಪಟ್ಟಣದಲ್ಲಿ ಮಾರ್ಚ್ 14ರಂದು ನಡೆಯುವ ಐತಿಹಾಸಿಕ ಶ್ರೀ ದೊಡ್ಡ ಬಸವೇಶ್ವರ ಸ್ವಾಮಿ ಮಹಾರಥೋತ್ಸಕ್ಕೆ ಪಟ್ಟಣದ ಪೋಲೀಸ್ ಠಾಣೆ ಆವರಣದಲ್ಲಿ ಪೋಲೀಸ್ ಇಲಾಖೆ ವತಿಯಿಂದ ಶಾಂತಿ ಸಭೆ ಹಮ್ಮಿಕೊಳ್ಳಲಾಗಿತ್ತು.

ಇತಿಹಾಸ ಪ್ರಸಿದ್ಧ ಶ್ರೀ ದೊಡ್ಡ ಬಸವೇಶ್ವರ ಸ್ವಾಮಿ ರಥೋತ್ಸವ ಪೂರ್ವಭಾವಿ ಸಭೆಯಲ್ಲಿ ಸಿಪಿಐ ವಿಶ್ವನಾಥ್ ಹಿರೇಗೌಡ,ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ವಿಶೇಷ ಹನ್ನೇರಡು ಜನರ ನುರಿತ ಅಪರಾಧ ತಡೆ ಸಿಬ್ಬಂದಿಗಳನ್ನು ನೇಮಿಸಿ ಸೂಕ್ತ ಬಂದೋಬಸ್ತ್ ಮಾಡಲಾಗುವುದು ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಈ ಬಾರಿ ಮಹಿಳೆಯರು ಹಾಗೂ ಮಕ್ಕಳ ಹಿತದೃಷ್ಟಿಯಿಂದ ಹೆಚ್ಚಿನ ಮುಂಜಾಗೃತಾ ಕ್ರಮವಾಗಿ ವ್ಯವಸ್ಥೆ ಮಾಡಲಾಗಿದ್ದು ತೇರು ಇರುವ ಸುತ್ತಮುತ್ತ ಸ್ವಚ್ಛತೆ ಬಗ್ಗೆ ಗಮನಹರಿಸಲಾಗಿದ್ದು ನಮ್ಮ ಸಿಬ್ಬಂದಿ ಕಣ್ಗಾವಲು ಇರಿಸಿ ಸೂಸುತ್ರ ರಥೋತ್ಸವಕ್ಕೆ ವ್ಯವಸ್ಥೆ ಮಾಡಲಾಗಿದೆ, ಅಲ್ಲದೆ ಪಟ್ಟಣದ ನಾಲ್ಕು ಕಡೆಗಳಲ್ಲಿ ಸೂಕ್ಷ್ಮ ಸಿಸಿ ಕ್ಯಾಮೆರಾ ಅಳವಡಿಕೆ ಮಾಡಿ ಟ್ರಾಫಿಕ್ ಆಗದಂತೆ ಊರ ಹೊರಗೆ ಬ್ಯಾರಿಕೇಡ್ ಹಾಕುವ ಮೂಲಕ ವಾಹನಗಳನ್ನು ಅಲ್ಲಿಯೇ ನಿಲ್ಲಿಸಲು ವ್ಯವಸ್ಥೆಗೆ ಸೂಚಿಸಲಾಗಿದೆ ಎಂದು ಹೇಳಿದರು.
ನಂತರ ಪುರಸಭೆ ಅಧ್ಯಕ್ಷ ಶೇಖಣ್ಣ ಮಾತನಾಡಿ ಎಲ್ಲಾರ ಸಹಕಾರದಿಂದ ರಥೋತ್ಸವವನ್ನು ಶಾಂತಿ ರೀತಿಯಿಂದ ಎಳೆಯಲು ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದ್ದು

ಪಟ್ಟಣಕ್ಕೆ ಹೊಂದಿಕೊಂಡಿರುವ ಗ್ರಾಮಗಳ ರಸ್ತೆಗಳ ರೀಪೇರಿ ಭರದಿಂದ ಸಾಗಿದೆ, ಪುರಸಭೆ ವತಿಯಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಧೂಳು ತಡೆಗಟ್ಟಲು ನೀರು ಸಿಂಪಡನೆ ಈಗಾಗಲೇ ಟ್ಯಾಂಕರ್ ಮೂಲಕ ಪ್ರಾರಂಭ ಮಾಡಲಾಗಿದ್ದು ರಥೋತ್ಸವದಲ್ಲಿ ಕುಡಿಯುವ ನೀರು ಹಾಗೂ ಶೌಚಾಲಯ ವ್ಯವಸ್ಥೆ,ಮೂಲಭೂತ ಸೌಕರ್ಯಗಳನ್ನು ಒದಗಿಸಿ ರಥೋತ್ಸವಕ್ಕೆ ಆಗಮಿಸುವ ಲಕ್ಷಾಂತರ ಭಕ್ತರಿಗೆ ಮುಕ್ತವಾಗಿ ದೇವರ ದರ್ಶನ ಪಡೆದು ರಥೋತ್ಸವ ಕಣ್ತುಂಬಿಕೊಳ್ಳಲು ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.

ಈ ವೇಳೆ ಎಸ್ ಐ ಸುಪ್ರೀತ್ ವಿರುಪಕ್ಷಪ್ಪ, ಧಾರ್ಮಿಕ ದತ್ತಿ ಇಲಾಖೆ ಅಧಿಕಾರಿ ಹನುಮಂತಪ್ಪ ಹಾಗೂ ಪುರಸಭೆ ಉಪಾಧ್ಯಕ್ಷ ಚನ್ನಪಟ್ಟಣ ಮಲ್ಲಿಕಾರ್ಜುನ, ವಿವಿಧ ಇಲಾಖೆಗಳ ಅಧಿಕಾರಿಗಳು, ಪುರಸಭೆ ಸದಸ್ಯರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರು ಇದ್ದರು.

 

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?