Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ರಾಜಕೀಯ ಪಕ್ಷಗಳು ಚುನಾವಣಾ ಆಯೋಗದ ಮಾರ್ಗಸೂಚಿ ಅನುಸರಿಸಲಿ: ಎಂ.ಎಸ್.ದಿವಾಕರ

ಹೊಸಪೇಟೆ (ವಿಜಯನಗರ) ಮಾರ್ಚ 18: ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾರ್ಚ 18ರಂದು ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆ-2024ಕ್ಕೆ ಮಾರ್ಚ 16ರಿಂದಲೇ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ಏಪ್ರೀಲ್ 12ರಂದು ರಂದು ಅಧಿಸೂಚನೆ ಹೊರಡಿಸಲಾಗುವುದು. ಮೇ 7ರಂದು ಮತದಾನ ಮತ್ತು ಜೂನ್ 4ರಂದು ಮತ ಎಣಿಕೆ ನಡೆಯಲಿದೆ. ಪುರುಷರು ಮತ್ತು ಮಹಿಳೆಯರು ಸೇರಿ ಒಟ್ಟು 11,18,543 ಮತದಾರರು ತಮ್ಮ ಮತಹಕ್ಕನ್ನು ಚಲಾಯಿಸಲು ಅರ್ಹರಿದ್ದಾರೆ ಎಂದು ತಿಳಿಸಿದರು.
ಜಿಲ್ಲೆಯ ಎಲ್ಲಾ ಸರ್ಕಾರಿ ಪ್ರವಾಸಿ ಮಂದಿರಗಳಲ್ಲಿ ರಾಜಕೀಯ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ. ಎಲ್ಲಾ ನಾಮ ನಿರ್ದೇಶನಗೊಂಡಿರುವAತಹ ನಿಗಮ ಮಂಡಳಿಗಳನ್ನು ಹಾಗೂ ಸಮಿತಿಗಳನ್ನು ಸಂಪೂರ್ಣ ಚುನಾವಣೆ ಪ್ರಕ್ರಿಯೆ ಮುಕ್ತಾಯದವರೆಗೆ ಅಮಾನತ್ತಿನಲ್ಲಿಡಲಾಗಿದೆ ಎಂದು ತಿಳಿಸಿದ ಅವರು, ರಾಜಕೀಯ ಪಕ್ಷಗಳು ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಅನುಸರಿಸಬೇಕು ಎಂದು ತಿಳಿಸಿದರು.
ಯಾವುದೇ ಉದ್ದೇಶಿತ ಸಭೆಗೆ ಸಂಬAಧಿಸಿದAತೆ ಧ್ವನಿವರ್ಧಕಗಳು ಅಥವಾ ಇತರೆ ಯಾವುದೇ ಸೌಲಭ್ಯವನ್ನು ಬಳಸಲು ಅನುಮತಿ ಅಥವಾ ಪರವಾನಿಗಿ ಪಡೆಯಬೇಕಾದರೆ ಸಂಬAಧಪಟ್ಟ ಪ್ರಾಧಿಕಾರಕ್ಕೆ ಮುಂಚಿತವಾಗಿ ಅರ್ಜಿ ಸಲ್ಲಿಸಬೇಕು ಮತ್ತು ಅಂತಹ ಅನುಮತಿ ಮತ್ತು ಪರವಾನಿಗೆ ಪಡೆಯಬೇಕು. ಮೆರವಣಿಗೆಯನ್ನು ಆಯೋಜಿಸುವ ಪಕ್ಷ ಅಥವಾ ಅಭ್ಯರ್ಥಿಯು ಮೆರವಣಿಗೆ ಪ್ರಾರಂಭವಾಗುವ ಸಮಯ ಮತ್ತು ಸ್ಥಳ, ಅನುಸರಿಸಬೇಕಾದ ಮಾರ್ಗ ಮತ್ತು ಮೆರವಣಿಗೆ ಕೊನೆಗೊಳ್ಳುವ ಸಮಯ ಮತ್ತು ಸ್ಥಳವನ್ನು ಮುಂಚಿತವಾಗಿ ನಿರ್ಧರಿಸಿ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆಯಬೇಕು. ಒಮ್ಮೆ ಅನುಮತಿ ಪಡೆದ ಮೇಲೆ ಯಾವುದೇ ಕಾರಣಕ್ಕು ಮಾರ್ಗವನ್ನಾಗಲಿ ಅಥವಾ ಕಾರ್ಯಕ್ರಮವನ್ನಾಗಲಿ ಬದಲಾಯಿಸುವಂತಿಲ್ಲ. ಸ್ಥಳೀಯ ಪೊಲೀಸ್ ಮತ್ತು ಚುನಾವಣಾ ಸಿಬ್ಬಂದಿ ನೀಡುವ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎನ್ನುವ ನಿಯಮಗಳನ್ನು ಪಾಲನೆ ಮಾಡಬೇಕು ಎಂದು ತಿಳಿಸಿದರು.
ಮತದಾನದ ದಿನ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಜರುಗಲು ಎಲ್ಲಾ ಸಹಕಾರ ನೀಡಬೇಕು. ಪಕ್ಷದ ಕಾರ್ಯಕರ್ತರಿಂದ ಯಾವುದೇ ಅಡಚಣೆಗಳು ಉಂಟಾಗದAತೆ ಸೂಕ್ತ ಮುನ್ನೆಚ್ಚರಿಕೆಗಳನ್ನು ಸಾಕಷ್ಟು ಮೊದಲೇ ತೆಗೆದುಕೊಳ್ಳಬೇಕು. ಮತಗಟ್ಟೆ ಪ್ರವೇಶಕ್ಕೆ ಅನುಮತಿ ಹೊಂದಿದ ಏಜೆಂಟರುಗಳಿಗೆ ಮಾತ್ರ ಅವಕಾಶವಿರುತ್ತದೆ. ನಿರ್ಬಂಧಿಸಿದ ಪ್ರದೇಶದೊಳಗೆ ಯಾವುದೇ ಚುನಾವಣಾ ಪ್ರಚಾರ ಮಾಡುವಂತಿಲ್ಲ ಎನ್ನುವ ಬೇರೆ ಬೇರೆ ನಿಯಮಗಳನ್ನು ಪಾಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಯಾವುದೇ ಪಕ್ಷ ಅಥವಾ ಅಭ್ಯರ್ಥಿಯು ಅಸ್ತಿತ್ವದಲ್ಲಿರುವ ಭಿನ್ನಾಭಿಪ್ರಾಯಗಳನ್ನು ಉಲ್ಬಣಗೊಳಿಸಬಹುದಾದ ಅಥವಾ ಪರಸ್ಪರ ದ್ವೇಷವನ್ನು ಉಂಟು ಮಾಡುವ ಅಥವಾ ವಿವಿಧ ಜಾತಿಗಳು ಮತ್ತು ಸಮುದಾಯಗಳ ನಡುವೆ ಧಾರ್ಮಿಕ ಅಥವಾ ಭಾಷಿಕ ನಡುವೆ ಉದ್ವಿಘ್ನತೆಯನ್ನು ಉಂಟು ಮಾಡುವ ಯಾವುದೇ ಚಟುವಟಿಕೆಯಲ್ಲಿ ತೊಡಗಬಾರದು. ಚುನಾವಣಾ ಭಾಷಣ ಅಥವಾ ಸುದ್ದಿಗೋಷ್ಠಿಯಲ್ಲಿ ಪರಸ್ಪರ ದ್ವೇಷವನ್ನು ಉಂಟು ಮಾಡುವ ಅಥವಾ ವಿವಿಧ ಜಾತಿಗಳು ಮತ್ತು ಸಮುದಾಯಗಳ ನಡುವೆ ಧಾರ್ಮಿಕ ಅಥವಾ ಭಾಷಿಕ ನಡುವೆ ಉದ್ವಿಘ್ನತೆಯನ್ನು ಉಂಟು ಮಾಡುವ ಹೇಳಿಕೆಗಳ ಮೇಲೆ ನಿರ್ಬಂಧ ವಿಧಿಸಲಾಗಿದೆ. ಮತಗಳನ್ನು ಪಡೆಯಲು ಜಾತಿ ಅಥವಾ ಕೋಮು ಭಾವನೆಗಳ ಆಧಾರದ ಮೇಲೆ ಮನವಿ ಮಾಡಬಾರದು. ಮಸೀದಿಗಳು, ಚರ್ಚ್ಗಳು, ದೇವಾಲಯಗಳು ಅಥವಾ ಇತರೆ ಪೂಜಾ ಸ್ಥಳಗಳನ್ನು ಚುನಾವಣಾ ಪ್ರಚಾರಕ್ಕಾಗಿ ವೇದಿಕೆಯಾಗಿ ಬಳಸಬಾರದು ಎನ್ನುವ ನಿಯಮಗಳನ್ನು ಎಲ್ಲ ರಾಜಕೀಯ ಪಕ್ಷಗಳು ಪಾಲನೆ ಮಾಡಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅನುರಾಧ ಜಿ., ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ, ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ಡಿ.ಶಿವಶಂಕರ, ಕೆ.ಅನಂತ ಪ್ರದ್ಮನಾಭ, ಚಂದ್ರಕಾAತ ಕೆ., ನಿಂಬಗಲ್ ರಾಮಕೃಷ್ಣ, ವಿ.ನಾಗರಾಜ, ಎಂ.ಡಿ.ಜಾವೀದ್ ಹಾಗೂ ಇತರರು ಇದ್ದರು.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?