Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಅಂಚೆ ಇಲಾಖೆ: ಫೆ.22 ರಂದು ನೇರ ಸಂದರ್ಶನ

ಬಳ್ಳಾರಿ,ಫೆ.15 :ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿ ಮತ್ತು ಫೀಲ್ಡ್ ಆಫೀಸರ್ ಹುದ್ದೆಗಳ ನಿಯುಕ್ತಿಗೆ ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನ ಏರ್ಪಡಿಸಲಾಗಿದೆ ಎಂದು ಬಳ್ಳಾರಿ ವಿಭಾಗದ ಅಂಚೆ ಅಧೀಕ್ಷಕ ವಿ.ಎಲ್.ಚಿತ್‍ಕೋಟೆ ಅವರು ತಿಳಿಸಿದ್ದಾರೆ.

ನೇರ ಸಂದರ್ಶನವನ್ನು ಫೆ.22 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಕೋಟೆ ಆವರಣದ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರ ಹಾಗೂ ಶೈಕ್ಷಣಿಕ ಪ್ರಮಾಣ ಪತ್ರದ ನಕಲುಗಳೊಂದಿಗೆ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ.

ಅರ್ಹತೆಗಳು:

ಅರ್ಜಿದಾರರು ಕನಿಷ್ಠ 18 ವಯಸ್ಸಿನವರಾಗಿರಬೇಕು, ಗರಿಷ್ಠ ವಯೋಮಿತಿ ಇರುವುದಿಲ್ಲ. ವಿಮಾ ಉತ್ಪನ್ನ ಮಾರಾಟ ಮಾಡುವ ಅನುಭವದೊಂದಿಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಅಭ್ಯರ್ಥಿಯು 5000 ಕ್ಕಿಂತ ಕಡಿಮೆ ಜನಸಂಖ್ಯೆ ಹೊಂದಿರುವ ಪ್ರದೇಶದಲ್ಲಿ  ವಾಸಮಾಡುತ್ತಿದ್ದರೆ ಹತ್ತನೇ ತರಗತಿ ಉತ್ತೀರ್ಣರಾಗಿರಬೇಕು. 5000 ಕ್ಕಿಂತ ಹೆಚ್ಚಿನ ಜನಸಂಖ್ಯೆ ಹೊಂದಿರುವ ಪ್ರದೇಶದಲ್ಲಿ ವಾಸಿಸುತ್ತಿದ್ದರೆ 12ನೇ ತರಗತಿ ಉತ್ತೀರ್ಣರಾಗಿರಬೇಕು. ಇತರೆ ವಿಮಾ ಕಂಪನಿ, ಸಂಸ್ಥೆ, ಸಂಘಗಳ ಏಜೆಂಟ್ ಆಗಿರಬಾರದು.

ನೇರ ಪ್ರತಿನಿಧಿ ಹುದ್ದೆ:

ನೇರ ಪ್ರತಿನಿಧಿ ಹುದ್ದೆಗೆ ನಿರುದ್ಯೋಗಿ, ಸ್ವಯಂ ಉದ್ಯೋಗ ನಿರತ ಯುವಕರು, ಮಾಜಿ ವಿಮಾ ಕಂಪನಿಗಳ ಸಲಹೆಗಾರರು, ಅಂಗನವಾಡಿ ಕಾರ್ಯಕರ್ತೆರು, ಮಹಿಳಾ ಮಂಡಳಿಯ ಕಾರ್ಯಕರ್ತೆಯರು, ಮಾಜಿ ಗ್ರಾಮ ಪಂಚಾಯತ್ ಸದಸ್ಯರು ಅರ್ಹರಾಗಿರುತ್ತಾರೆ.

ಫೀಲ್ಡ್ ಆಫೀಸರ್ ಹುದ್ದೆ:

ಫೀಲ್ಡ್ ಆಫೀಸರ್ ಹುದ್ದೆಗೆ ನಿವೃತ್ತ ಕೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರರು, ನಿವೃತ್ತ ಗ್ರಾಮೀಣ ಅಂಚೆ ಸೇವಕರು ಸರ್ಹರಾಗಿರುತ್ತಾರೆ.

ಸಂದರ್ಶನ ಮೂಲಕ ಆಯ್ಕೆಯಾದ ಅಭ್ಯರ್ಥಿಯು ರಾಷ್ಟ್ರೀಯ ಉಳಿತಾಯ ಪತ್ರ ಅಥವಾ ಕಿಸಾನ್ ವಿಕಾಸ್ ಪತ್ರದ ರೂಪದಲ್ಲಿ 5000 ರೂ.ಗಳನ್ನು ಭದ್ರತಾ ಠೇವಣಿ ಇಡಬೇಕು. ಆಯ್ಕೆಯಾದ ನೇರ ಪ್ರತಿನಿಧಿ, ಫೀಲ್ಡ್ ಆಫೀಸರ್‍ಗಳಿಗೆ ತಮ್ಮ ವ್ಯವಹಾರ ತಕ್ಕಂತೆ ಸೂಕ್ತ ಕಮೀಷನ್ ಇದ್ದು, ನಿಗದಿತ ವೇತನವಿರುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಅಭಿವೃದ್ಧಿ ಅಧಿಕಾರಿ ಮಾರುತಿ.ವಿ.ಯು ಅವರ ಮೊ.9481694420 ಅಥವಾ ಹತ್ತಿರದ ಅಂಚೆ ಕಚೇರಿಗೆ ಭೇಟಿ ನೀಡಬಹುದು ಎಂದು ಬಳ್ಳಾರಿ ವಿಭಾಗದ ಅಂಚೆ ಅಧೀಕ್ಷಕ ವಿ.ಎಲ್.ಚಿತ್‍ಕೋಟೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?