Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಅಂತಾರಾಷ್ಟ್ರೀಯ ಸುದ್ದಿ

ಪ್ರಧಾನಿ ಮೋದಿಯಿಂದ ಯುಎಇನಲ್ಲಿ ಮೊದಲ ಹಿಂದೂ ದೇವಾಲಯ ಉದ್ಘಾಟನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರದಿಂದ ಯುನೈಟೆಡ್ ಅರಬ್ ಎಮಿರೇಟ್ಸ್‌ಗೆ ಎರಡು ದಿನಗಳ ಪ್ರವಾಸ ಕೈಗೊಳ್ಳಲಿದ್ದು, ಈ ಯಸಂದರ್ಭದಲ್ಲಿ ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ ಮತ್ತು ಅಬುಧಾಬಿಯಲ್ಲಿ ನಿರ್ಮಾಣವಾಗಿರುವ ಮೊದಲ ಹಿಂದೂ ದೇವಾಲಯವನ್ನು ಉದ್ಘಾಟಿಸಲಿದ್ದಾರೆ.

2015 ರಿಂದ ಯುಎಇಗೆ ಪ್ರಧಾನಿ ಮೋದಿ ಅವರ ಏಳನೇ ಭೇಟಿ ಇದಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಶನಿವಾರ ತಿಳಿಸಿದೆ.

ಮೋದಿ ಮತ್ತು ಅಲ್ ನಹ್ಯಾನ್ ಅವರು ಉಭಯ ದೇಶಗಳ ನಡುವಿನ ಕಾರ್ಯತಂತ್ರದ ಸಹಭಾಗಿತ್ವವನ್ನು ಇನ್ನಷ್ಟು ಗಟ್ಟಿಗೊಳಿಸುವ ಮತ್ತು ವಿಸ್ತರಿಸುವ  ಮಾರ್ಗಗಳನ್ನು ಬಗ್ಗೆ ಚರ್ಚಿಸಲಿದ್ದಾರೆ ಮತ್ತು ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಅಂತರಾಷ್ಟ್ರೀಯ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳುತ್ತಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

"ಆಹ್ವಾನದ ಮೇರೆಗೆ, ಪ್ರಧಾನಿ ಮೋದಿ ಅವರು ದುಬೈನಲ್ಲಿ ನಡೆಯಲಿರುವ ವಿಶ್ವ ಸರ್ಕಾರದ ಶೃಂಗಸಭೆ 2024 ರಲ್ಲಿ ಗೌರವ ಅತಿಥಿಯಾಗಿ ಭಾಗವಹಿಸುತ್ತಾರೆ ಮತ್ತು ಶೃಂಗಸಭೆಯಲ್ಲಿ ವಿಶೇಷ ಭಾಷಣವನ್ನು ಮಾಡುತ್ತಾರೆ" ಎಂದು MEA ತಿಳಿಸಿದೆ.

ಅಬುಧಾಬಿಯ ಮೊದಲ ಹಿಂದೂ ದೇವಾಲಯವಾದ BAPS ಮಂದಿರವನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ ಎಂದು ಎಂಇಎ ಹೇಳಿದೆ.

 

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?