Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಪಿಎಸ್‌ಐ ನೇಮಕಾತಿ ಅಕ್ರಮ ವರದಿ ಸಲ್ಲಿಕೆ¨

ೆಂಗಳೂರು,ಜ,೨೩: ಪಿಎಸ್‌ಐ ನೇಮಕಾತಿ ಅಕ್ರಮಕ್ಕೆ ಸಂಬAಧಿಸಿದ ವರದಿ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದ್ದು, ಇದನ್ನು ಜಂಟಿ ಅಧಿವೇಶನದಲ್ಲಿ ಸಲ್ಲಿಸಲು ಸಿಎಂ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಬಿ ವೀರಪ್ಪ ನೇತೃತ್ವದ ತನಿಖಾ ವರದಿಯನ್ನು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಲಾಗಿತ್ತು.
ಒಟ್ಟು ೪೭೦ಕ್ಕೂ ಹೆಚ್ಚು ಪುಟಗಳ ವರದಿ ಸಲ್ಲಿಸಿರುವ ತನಿಖಾ ಸಮಿತಿ, ನೇಮಕಾತಿ ವೇಳೆ ಆಗಿರುವ ಲೋಪಗಳ ಬಗ್ಗೆ ಸಂಕ್ಷಿಪ್ತವಾಗಿ ಉಲ್ಲೇಖಿಸಿದೆ. ಪ್ರಕರಣದಲ್ಲಿ ಹಲವು ರಾಜಕಾರಣಿಗಳು ಭಾಗಿಯಾಗಿದ್ದಾರೆಂಬ ಆರೋಪವನ್ನೂ ಮಾಡಲಾಗಿದೆ. ನೋಟಿಸ್ ನೀಡಿದ್ದರೂ ಕೆಲವು ಪ್ರಭಾವಿಗಳು ಗೈರಾದ ಬಗ್ಗೆಯೂ ಉಲ್ಲೇಖಿಸಲಾಗಿದೆ. ವರದಿಯಲ್ಲಿನ್ನ ಅಂಶಗಳನ್ನು ಸದ್ಯದ ಮಟ್ಟಿಗೆ ಗೋಪ್ಯವಾಗಿರಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದೂ ಹೇಳಲಾಗಿದೆ.
ಸಮಿತಿ ಸಲ್ಲಿಸಿದ ವರದಿಯನ್ನು ಕ್ಯಾಬಿನೆಟ್‌ನ ಮುಂದಿಡಲು ಮುಖ್ಯಮಂತ್ರಿಗಳು ಚಿಂತನೆ ಮಾಡಿದ್ದಾರೆ. ಅದಾದ ನಂತರ ವರದಿಯನ್ನು ಜಂಟಿ ಅಧಿವೇಶನದಲ್ಲಿ ಮಂಡಿಸಲು ಅವರು ಯೋಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಪಿಎಸ್‌ಐ ನೇಮಕಾತಿ ಅಕ್ರಮಕ್ಕೆ ಸಂಬAಧಿಸಿ ಮರು ತನಿಖೆಗಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಸಮಿತಿ ರಚಿಸಿತ್ತು. ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು.
ಏನಿದು ಪಿಎಸ್‌ಐ ನೇಮಕಾತಿ ಅಕ್ರಮ?
೫೪೫ ಪಿಎಸ್‌ಐ ಹುದ್ದೆಗಳ ಭರ್ತಿಗಾಗಿ ಕಳೆದ ವರ್ಷದ ಅಕ್ಟೋಬರ್ ೩ ರಂದು ಬೆಂಗಳೂರು ಸೇರಿದಂತೆ ರಾಜ್ಯದ ೭ ಜಿಲ್ಲೆಗಳಲ್ಲಿನ ೯೩ ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಯಲ್ಲಿ ಕೆಲವು ಅಭ್ಯರ್ಥಿಗಳು ಹುದ್ದೆಗಳನ್ನು ಅಕ್ರಮವಾಗಿ ಗಿಟ್ಟಿಸಿಕೊಳ್ಳಲು ಹಣ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ತನಿಖೆ ನಡೆಸಿದಾಗ ಪರೀಕ್ಷಾ ಹಗರಣದಲ್ಲಿ ಹಣದ ಹೊಳೆಯೇ ಹರಿದಿರುವುದು ದೃಢವಾಗಿತ್ತು.
ಪ್ರಕರಣದ ಗಂಭೀರತೆಯನ್ನು ಅರಿತು ಸರ್ಕಾರ ತನಿಖೆಯನ್ನು ಸಿಐಡಿಗೆ ವಹಿಸಿತು. ೫೪೫ ಪಿಎಸ್‌ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ಅಕ್ರಮ ಪ್ರಕರಣದ ಹಿನ್ನೆಲೆ ಪಿಎಸ್‌ಐ ನೇಮಕಾತಿ ವಿಭಾಗದಲ್ಲಿ ಅಧಿಕಾರಿಗಳಿಗಿಂತ ಬ್ರೋಕರ್‌ಗಳಿಗೂ ಹಣದ ಹೊಳೆ ಹರಿದಿತ್ತು. ಬ್ರೋಕರ್‌ಗಳ ಹಂತದಲ್ಲಿಯೂ ಕನಿಷ್ಠ ೧೦ ಲಕ್ಷ, ನೇಮಕಾತಿ ವಿಭಾಗದ ಅಧಿಕಾರಿಗೆ ೩೦-೩೫ ಲಕ್ಷ ತಲುಪುತ್ತಿತ್ತು ಎಂಬ ಅಂಶ ತಿಳಿದುಬಂದಿತ್ತು.
ವಿಚಾರಣೆಗೆ ಹಾಜರಾಗದ ರಾಜಕಾರಣಿಗಳು
ಪ್ರಕರಣಕ್ಕೆ ಸಂಬAಧಿಸಿದAತೆ ಈಗಾಗಲೇ ಕೆಲವು ಪೊಲೀಸ್ ಅಧಿಕಾರಿಗಳ ಬಂಧನವಾಗಿದೆ. ಪ್ರಭಾವಿ ರಾಜಕೀಯ ಮುಖಂಡರೂ ಭಾಗಿಯಾಗಿದ್ದಾರೆ ಎಂಬ ಆರೋಪದಡಿ ಕೆಲವು ರಾಜಕಾರಣಿಗಳಿಗೂ ವಿಚಾರಣಾ ಆಯೋಗ ನೋಟಿಸ್ ನೀಡಿತ್ತು. ಆದರೆ, ಕೆಲವು ಮಂದಿ ರಾಜಕೀಯ ಮುಖಂಡರು ನೋಟಿಸ್ ನೀಡಿದ ಹೊರತಾಗಿಯೂ ವಿಚಾರಣೆಗೆ ಹಾಜರಾಗಿಲ್ಲ ಎಂದು ಹೇಳಲಾಗಿದೆ. ಈ ಬಗ್ಗೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದ ಸಮಿತಿಯ ವರದಿಯಲ್ಲಿಯೂ ಉಲ್ಲೇಖಿಸಲಾಗಿದೆ.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?