Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ನೀರಾವರಿ ಸಲಹಾ ಸಮಿತಿ ವೇಳಾಪಟ್ಟಿಯಂತೆ ಕಾಲುವೆಗಳಿಗೆ ನೀರು ಬಿಡುಗಡೆ !!

ಬಳ್ಳಾರಿ,ಮಾ.29 : ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ಅಚ್ಚುಕಟ್ಟು ಪ್ರದೇಶದಲ್ಲಿ ರೈತರು  ಬಿತ್ತನೆ ವಿಳಂಬವಾಗಿ ಮಾಡಿರುವುದರಿಂದ ಹಿಂಗಾರು ಹಂಗಾಮಿಗೆ ನಿಂತಿರುವ ಬೆಳಗಳನ್ನು ಸಂರಕ್ಷಿಸಲು ಜಲಾಶಯದಲ್ಲಿ ಲಭ್ಯವಾಗುವ ನೀರಿನ ಪ್ರಮಾಣವನ್ನು ಅಂದಾಜಿಸಿ ವಿವಿಧ ಕಾಲುವೆಗಳಿಗೆ ಕುಡಿಯುವ ನೀರು ಒಳಗೊಂಡAತೆ ನೀರು ಹರಿಸಲು ನಿರ್ಧರಿಸಲಾಗಿದೆ ಎಂದು ಮುನಿರಾಬಾದ್ ನ ತುಂಗಭದ್ರಾ ಯೋಜನಾ ವೃತ್ತದ ಕನೀನಿನಿ ಅಧೀಕ್ಷಕ ಅಭಿಯಂತರರು ಹಾಗೂ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಎಲ್.ಬಸವರಾಜ ಅವರು ತಿಳಿಸಿದ್ದಾರೆ.

ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರಾದ ಶಿವರಾಜ ಎಸ್. ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ 2024-25ನೇ ಸಾಲಿನ 123ನೇ ತುರ್ತು ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.

*ನೀರು ಹರಿಸುವ ಕಾಲಾವಧಿ:*
ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆ:
ಎಡದಂಡೆ ಕಾಲುವೆಯಡಿ ಲಭ್ಯವಾಗುವ ನೀರಿನಲ್ಲಿ ಏ.01 ರಿಂದ 10 ರವರೆಗೆ ಕುಡಿಯುವ ನೀರು ಒಳಗೊಂಡAತೆ ಹಾಗೂ ನಿಂತ ಬೆಳೆಗಳ ಸಂರಕ್ಷಣೆಗಾಗಿ 3000 ಕ್ಯೂಸೆಕ್ ನಂತೆ ಹರಿಸಲಾಗುವುದು.

ಎಡದಂಡೆ ವಿಜಯನಗರ ಕಾಲುವೆ:
ಏ.11 ರಿಂದ ರಿಂದ ಮೇ 10 ರವರೆಗೆ 150 ಕ್ಯೂಸೆಕ್ ನಂತೆ ವಿತರಣಾ ಕಾಲುವೆ 1 ರಿಂದ 11ಎ ವರೆಗೆ ಅಥವಾ ಈ ಕಾಲುವೆಯಡಿ ನೀರಿನ ಲಭ್ಯತೆಯು ಇರುವವರೆಗೆ ಮಾತ್ರ, ಇದರಲ್ಲಿ ಯಾವುದು ಮೊದಲು ಅದು ಅನ್ವಯಿಸುತ್ತದೆ.

ತುಂಗಭದ್ರಾ ಬಲದಂಡೆ ಕೆಳಮಟ್ಟದ ಕಾಲುವೆ:
ಬಲದಂಡೆ ಕೆಳಮಟ್ಟದ ಕಾಲುವೆಯಡಿ ಲಭ್ಯವಾಗುವ ನೀರಿನಲ್ಲಿ ಏ.01 ರಿಂದ 10 ರ ವರೆಗೆ ಕುಡಿಯುವ ನೀರು ಒಳಗೊಂಡAತೆ ಹಾಗೂ ನಿಂತ ಬೆಳೆಗಳ ಸಂರಕ್ಷಣೆಗಾಗಿ 450 ಕ್ಯೂಸೆಕ್ ನಂತೆ ಹರಿಸಲಾಗುವುದು.

ರಾಯ ಬಸವಣ್ಣ ಕಾಲುವೆ:
ಏ.01 ರಿಂದ ಮೇ 31 ರವರೆಗೆ ಲಭ್ಯವಾಗುವ ನೀರನಲ್ಲಿ 200 ಕ್ಯೂಸೆಕ್ ನಂತೆ ಹರಿಸಲಾಗುವುದು.
ನದಿ ಪೂರಕ: ಸುಮಾರು 90 ಕ್ಯೂಸೆಕ್ ನಂತೆ ನದಿ ಪೂರಕ ಕಾರ್ಖಾನೆ ಒಳಗೊಂಡAತೆ ನೀರು ಹರಿಸಲಾಗುವುದು.

*ರೈತ ಭಾಂದವರಲ್ಲಿ ಮನವಿ:*
ತುಂಗಭದ್ರಾ ಜಲಾಶಯದಲ್ಲಿ ಲಭ್ಯವಿರುವ ನೀರನ್ನು ಹಿಂಗಾರು ಹಂಗಾಮಿನ ಬೆಳೆದು ನಿಂತ ಬೆಳಗಳನ್ನು ಸಂರಕ್ಷಿಸಲು ಹಾಗೂ ಕುಡಿಯುವ ನೀರು ಒಳಗೊಂಡAತೆ ಹರಿಸಲಾಗುವುದು.
ಹಾಗಾಗಿ ರೈತರು ನೀರನ್ನು ಮಿತವ್ಯಯವಾಗಿ ಬಳಸಿ ಅಧಿಕೃತ ಅಚ್ಚುಕಟ್ಟು ಪ್ರದೇಶದಲ್ಲಿ ನಿಗಧಿತ ಬೆಳೆಗಳನ್ನು ಮಾತ್ರ ಬೆಳೆಯಲು ಹಾಗೂ ಸಮರ್ಪಕ ನೀರು ನಿರ್ವಹಣೆಗೆ ಇಲಾಖೆಯೊಡನೆ ಸಹಕರಿಸಬೇಕು ಎಂದು ರೈತ ಭಾಂದವರಲ್ಲಿ ಕೋರಲಾಗಿದೆ.
ರೈತರು ಅನಧಿಕೃತವಾಗಿ ನೀರು ಪಡೆದು ಭತ್ತ, ಇತರೆ ಬೆಳೆಗಳನ್ನು ಬೆಳೆದಲ್ಲಿ ನೀರಾವರಿ ಕಾಯ್ದೆಯನ್ವಯ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?