Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಪಕ್ಷಾತೀತವಾಗಿ ಸಮಾಜವನ್ನು ಸಂಘಟಿಸಬೇಕು :ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ರವಿಕುಮಾರ್

ಬಳ್ಳಾರಿ, ಜು. 08 : ಪಕ್ಷಾತೀತವಾಗಿ ಸಮಾಜವನ್ನು ಸಂಘಟಿಸಬೇಕು ಎಂದು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ರವಿಕುಮಾರ್ ಹೇಳಿದರು.ನಗರದ ಹಳೆ ಬಸ್ ಸ್ಟ್ಯಾಂಡ್ ಪಕ್ಕದಲ್ಲಿರುವ ಮರ್ಚೆಟ್ ಹೋಟೆಲ್ ನಲ್ಲಿ ನಡೆದ ದೀಕ್ಷಾ ರಜತ್ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸಮಾಜವನ್ನು ಎಲ್ಲಾ ಪಕ್ಷದ ಸಮಾಜದ ಬಾಂಧವರು ಸೇರಿ ಸಮಾಜ ಸಂಘಟಿಸುವದೊಂದಿಗೆ ದಾಖಲೆ ಬರೆಯುವ ರೀತಿ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರ ದೀಕ್ಷಾ ರಜತ ಮಹೋತ್ಸವ ಜುಲೈ 20 ರಂದು ನಡೆಸಬೇಕು ಎಂದು ತಿಳಿಸಿದರು.

ದೀಕ್ಷಾ ರಜತ್ ಮಹೋತ್ಸವವನ್ನು 25 ಬಗೆಯ ಕಿರು ಕಾರ್ಯಕ್ರಮಗಳನ್ನು ಸಂಘಟಿಸಿ ಅರ್ಥಪೂರ್ಣಗೊಳಿಸೋಣ. ಶ್ರೀಗಳು ತಾಲ್ಲೂಕು, ಜಿಲ್ಲಾ, ರಾಜ್ಯ, ರಾಷ್ಟçಮಟ್ಟದ ಸಂಘಟನೆಯಾಗಲು ಕಾರಣೀಭೂತರಾಗಿದ್ದಾರೆ. ವಿದ್ಯಾವಂತರು ಸಂಘಟನೆಗೆ ಸಮಯ ನೀಡಬೇಕು ಹಾಗೂ ಸಂಘಟನೆಯ ಭಾಗವಾಗಿ ನಿಲ್ಲಬೇಕು ಎಂದು ಹೇಳಿದರು.

ಅಧಿಕಾರಿಗಳು ವೃತ್ತಿಗಂಟಿಕೊಳ್ಳದೆ, ಸ್ವಾರ್ಥಿಗಳಾಗದೇ, ಸಮಷ್ಠಿಯ ಅಭಿವೃದ್ಧಿಗಾಗಿ ನಿಸ್ವಾರ್ಥಿಗಳಾಗಬೇಕು. ಆದಾಯದಲ್ಲಿ ಸ್ವಲ್ಪ ಕುಟುಂಬಕ್ಕೆ, ಸ್ವಲ್ಪ ಸಮಾಜಕ್ಕೆ ಎನ್ನುವ ಭಾವ ಬರಬೇಕು. ರಾಜಕೀಯ ಶಕ್ತಿ ಹೆಚ್ಚಿಸಿಕೊಳ್ಳಬೇಕು, ಇದಕ್ಕೆ ಸಮಾಜದ ಶ್ರೀಗಳು ದಿಕ್ಸೂಚಿಯಾಗಿ ಸಾಗುತ್ತಿದ್ದಾರೆ. ಕೂಲಿ ಕಾರ್ಮಿಕ ಮಕ್ಕಳು ಬಾಲಕಾರ್ಮಿಕರಾಗದೇ ವಿದ್ಯಾವಂತರಾಗಲು ಅವರನ್ನು ಗುರುತಿಸಿ, ಪರಿವರ್ತಿಸಿ ಪ್ರೇರಣೆ ನೀಡಬೇಕು. ಭೋವಿ ನಿಗಮ ಕಟ್ಟ ಕಡೆಯ ಭೋವಿ ವ್ಯಕ್ತಿಯನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶವನ್ನು ಹೊಂದಿದೆ ಎಂದು ತಿಳಿಸಿದರು.

ಶ್ರೀಗಳು ನಿಶ್ಯಬ್ದದಂತೆ ನೂರಾರು ಮಕ್ಕಳನ್ನು ದತ್ತು ಪಡೆದು ಶೈಕ್ಷಣಿಕ ಹಾಗೂ ಔದ್ಯೋಗಿಕ ಸೇವೆಯನ್ನು ಮಾಡಿದ್ದಾರೆ. ಸಂಚಾರಿ ಮೂರ್ತಿಗಳು ಅವರ ಪರಿಶ್ರಮದಿಂದ ಭೋವಿ ಸಮಾಜ ಸಂಘಟನಾ ಸಮಾಜವಾಗಿ ಹೊರಹೊಮ್ಮಿದೆ. ಸರ್ಕಾರದಲ್ಲಿ ರಾಜಕಾರಣಿಗಳ ಮಾತಿಗಿಂತ ಶ್ರೀಗಳ ಮಾತಿಗೆ ಹೆಚ್ಚು ಮೌಲ್ಯ. ಸಮಾಜಕ್ಕೆ ಸಾಮಾಜಿಕ ನ್ಯಾಯ ದೊರಕಿಸುವಲ್ಲಿ ಶ್ರೀಗಳ ಸಂಘಟನಾ ಶಕ್ತಿ ಪರಿಣಾಮಕಾರಿಯಾಗಿದೆ. ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಸಚಿವರು, ರಾಜಕೀಯ ಪ್ರಮುಖರು, ಶ್ರೀಗಳ ಬಳಿ ಬರುತ್ತಿದ್ದಾರೆ. ಸಮಾಜದ ಋಣ ತೀರಿಸುವ ಪ್ರಯತ್ನದಲ್ಲಿರುವವನೇ ನಿಜವಾದ ಸಮಾಜದ ನಾಯಕ ಎಂದು ಹೇಳಿದರು.

ಶ್ರೀಗಳ ಜೊತೆ ಪ್ರವಾಸದಲ್ಲಿ ಶ್ರೀಗಳ ಸಹನೆ, ತಾಳ್ಮೆ, ಜಾಣ್ಮೆ, ಚಾಕಚಕ್ಯತೆ, ಚುರುಕತೆ ತಿಳಿದುಕೊಂಡಿದ್ದೇನೆ ಹಾಗೂ ಬದುಕಿನಲ್ಲಿ ಅಳವಡಿಸಿಕೊಳ್ಳುವ ಪ್ರಯತ್ನವನ್ನು ಮಾಡುತ್ತಿದ್ದೇನೆ. ಶ್ರೀಗಳಿಗೆ ತನು ಮನ ಧನ ಸೇವೆಗೆ ತಾಮುಂದು, ನಾಮುಂದು ಎಂಬ ಸ್ಪರ್ಧೆಯಲ್ಲಿ ಸೇವೆ ಮಾಡಬೇಕು ಶ್ರೀಮಠದ ಗುರುಕುಲಕ್ಕೆ ಧವಸ ದಾನ್ಯ ನೀಡುವ ಮೂಲಕ ನಮ್ಮ ಮನೆಗೆ ವಹಿಸುವ ಕಾಳಜಿಯಂತೆ ಶ್ರೀಮಠಕ್ಕೂ ನಾವು ಕಾಳಜಿ ವಹಿಸಬೇಕು ಎಂದು ಹೇಳಿದರು.

ಭೋವಿ ಅಭಿವೃದ್ಧಿ ನಿಗಮ ಸುಲಿಗೆ ಕೇಂದ್ರವಲ್ಲ, ಸುಧಾರಣಾ ಕೇಂದ್ರವಾಗಿ ಪರಿವರ್ತಿಸುವೆ. ಸೌಲಭ್ಯ ಪಡೆಯದವರಿಗೆ ಸೌಲಭ್ಯ ಕಲ್ಪಿಸಲಾಗುವುದು, ಬಿ.ಜೆ.ಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಅಧ್ಯಕ್ಷರನ್ನು ನೇಮಕ ಮಾಡಲಿಲ್ಲ, ಅಧಿಕಾರಿಗಳ ದರ್ಪದಿಂದ ನಿಗಮದಲ್ಲಿ ಅವ್ಯವಸ್ಥೆಯಾಗಿದೆ. ಎಸ್.ಐ.ಟಿ ತನಿಖೆಯಿಂದ ಸತ್ಯ ತಿಳಿಯುತ್ತದೆ.

ಮಹಾನಗರ ಪಾಲಿಕೆ ಸದಸ್ಯ ಹಾಗೂ ಲಾರಿ ಮಾಲಕರ ಸಂಘದ ಜಿಲ್ಲಾಧ್ಯಕ್ಷರಾದ ಮಿಂಚು ಶ್ರೀನಿವಾಸ ಮಾತನಾಡಿ, ಹಳ್ಳಿ,ಗ್ರಾಮ, ತಾಲೂಕು ವಾಸಿಸುವ ಜನಗಳ ಜಾಗೃತಿಗಾಗಿ ಕಂಕಣಬದ್ಧವಾಗಿ ಸಂಘಟನೆಯನ್ನು ಮಾಡಲು ಸಂಪೂರ್ಣ ಸಮಯವನ್ನು ನೀಡಬೇಕು ಎಂದು ಹೇಳಿದರು.
ಸಂಘ ಜಿಲ್ಲೆಯಿಂದ ತಾಲ್ಲೂಕು, ತಾಲ್ಲೂಕಿನಿಂದ ಗ್ರಾಮಕ್ಕೆ ಕೇಂದ್ರೀಕರಣವಾದಾಗ ಸಂಘಟನೆ ಸಾಮರ್ಥ್ಯ ಹೆಚ್ಚಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಜಾಗೃತಿ ಮೂಡಿಸುವ ಕೆಲಸ ಮಾಡದಿದ್ದರೆ ಸಂಘಟನಾ ಮನೋಭಾವ ಇಲ್ಲದಾಗುತ್ತದೆ ಎಂದು ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರು ತಿಳಿಸಿದರು.ಸಮುದಾಯದ ಜನತೆಗೆ ಸಂಘಟನೆಯನ್ನು ಮೂಡಿಸಿದರೆ ರಾಜಕೀಯವಾಗಿ ತೀಕ್ಷ÷್ಣತೆಯನ್ನು ಬೆಳೆಸಿಕೊಳ್ಳುತ್ತಾರೆ. ಚಿಕ್ಕ ಸಭೆಗಳೇ ಬೃಹತ್ ಸಭೆಗಳಾಗಿ ಹೊರಹೊಮ್ಮುತ್ತವೆ ಹಾಗಾಗಿ ಸಂಘಟನೆಯನ್ನು ನಿರಂತರವಾಗಿ ಸಂಘಟಿಸಬೇಕು ಎಂದು ಹೇಳಿದರು.

ಜನರು ವಿಧಾನಸಭೆಯ ಹೊರಗೆ ಧ್ವನಿ ಎತ್ತಬೇಕು, ಜನಪ್ರತಿನಿಧಿಗಳು ವಿಧಾನಸಭೆಯ ಒಳಗೆ ಸಮಾಜದ ಧ್ವನಿಯಾದಾಗ ಮಾತ್ರ ಸಂಘಟನೆಯಾದAತೆ ಎನ್ನುವುದನ್ನು ಪ್ರತಿಯೊಬ್ಬರು ಅರಿಯಬೇಕು ಎಂದರು. ಸಂಘಟನೆ ಜನರ ಜೊತೆ ಇರಬೇಕು ಆಗ ಗಟ್ಟಿಯಾಗುತ್ತದೆ ಹಾಗೂ ಜನರ ಜೊತೆ ಸದಾಕಾಲ ಸಧೃಢವಾಗಿ ಉಳಿಯಲು ಮತ್ತು ಬದುಕಲು ಅವಕಾಶ ಒದಗಿಸುತ್ತದೆ. ಕುಟುಂಬದ ಬಗ್ಗೆ ಹೇಗೆ ಸಮಾಲೋಚನೆ ಮಾಡುತ್ತೇವೆಯೋ ಅದೇ ರೀತಿ ಸಮಾಜ ಸಂಘಟನೆಯ ಬಗ್ಗೆ ನಿರಂತರ ಯೋಜನೆ ಮತ್ತು ಸಮಾಲೋಚನೆ ಮಾಡಬೇಕು. ಆರ್ಥಿಕವಾಗಿ ಸಬಲತೆ ಇರುವ ಸಮಾಜಕ್ಕೆ ಗೌರವ ಹೆಚ್ಚು ಹಾಗಾಗಿ ಶಿಕ್ಷಣ, ಆರ್ಥಿಕ ಸಬಲತೆಗೆ ಹೆಚ್ಚು ಮಹತ್ವ ಕೊಡಬೇಕು, ಸಮಾಜಕ್ಕೆ ಅವಶ್ಯಕವಾದ ಹಕ್ಕುಗಳನ್ನು ಪೂರೈಕೆಗೆ ಸದಾಕಾಲ ಸಂಘಟಿತರಾಗಬೇಕು ಎಂದು ಹೇಳಿದರು.

ಸಭೆಯಲ್ಲಿ ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಮೇಶ್ವರ ಸ್ವಾಮೀಜಿ ಸಾನಿಧ್ಯವಹಿಸಿದ್ದರು. ಬಳ್ಳಾರಿ ಭೋವಿ ಸಮಾಜದ ಜಿಲ್ಲಾಧ್ಯಕ್ಷ ವಿ ರಾಮಾಂಜನೇಯಲು, ಪ್ರಧಾನ ಕಾರ್ಯದರ್ಶಿ ವಿ ಗಾದಿಲಿಂಗಪ್ಪ, ಖಚಾಂಚಿ ಟಿ ವೆಂಕಟೇಶ್ವರಲು, ಮಹಾನಗರ ಪಾಲಿಕೆ ಸದಸ್ಯ ಮಿಂಚು ಶ್ರೀನಿವಾಸ, ನಿವೃತ್ತ ನೌಕರ ಮಲ್ಲೆಶ್ ಎಮ್ ಟಿ, ಜಲಾಲ್ ಕುಮಾರ್, ಗೋವಿಂದಪ್ಪ, ಶ್ರೀಮನ್ ನಾರಾಯಣ, ವಿ ಎರ್ರಿಸ್ವಾಮಿ,ಸುವರ್ಣ ವಾಹಿನಿ ಪತ್ರಿಕೆ ಸಂಪಾದಕ ವಿ ರವಿ, ಗೋನಾಳ್ ಹುಲಿಗಪ್ಪ, ಬಂಡಿಹಟ್ಟಿ ರಾಮಾಂಜನೇಯಲು ಹಾಗೂ ತಾಲೂಕು ಅಧ್ಯಕ್ಷರು ಪದಾಧಿಕಾರಿಗಳು ಸಂಘದ ಮುಖಂಡರುಗಳು ಉಪಸ್ಥಿತರಿದ್ದರು

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?