Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆ ಕಾರ್ಯ ಅವಧಿ ವಿಸ್ತರಣೆ

ಬಳ್ಳಾರಿ,ಮೇ 17 : ನ್ಯಾಯಮೂರ್ತಿ ಡಾ. ಹೆಚ್.ಎನ್.ನಾಗಮೋಹನ ದಾಸ್ ಅವರ ಏಕ ಸದಸ್ಯ ವಿಚಾರಣಾ ಆಯೋಗದ ನಿರ್ದೇಶನದಂತೆ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆ ಕಾರ್ಯವು ಪ್ರಸ್ತುತ ಪ್ರಗತಿಯಲ್ಲಿದೆ. ಶಾಸಕರು, ಹಲವು ಸಂಘ-ಸAಸ್ಥೆಗಳು ಸಮೀಕ್ಷೆ ವೇಳೆ ಉದ್ಭವಿಸಿರುವ ಕೆಲವೊಂದು ಸಮಸ್ಯೆಗಳನ್ನು ಸರಿಪಡಿಸಲು ಸಮೀಕ್ಷಾ ದಿನಾಂಕವನ್ನು ವಿಸ್ತರಿಸಬೇಕೆಂದು ಕೋರಿರುವ ಹಿನ್ನಲೆಯಲ್ಲಿ ಸಮೀಕ್ಷಾ ಕಾರ್ಯದ ಅವಧಿಯನ್ನು ಈ ಕೆಳಕಂಡAತೆ ವಿಸ್ತರಿಸಲಾಗಿದೆ.

*ವಿಸ್ತರಣಾ ಅವಧಿ:*
ಮನೆ-ಮನೆ ಭೇಟಿ ನೀಡಿ ಸಮೀಕ್ಷೆಯು ಮೇ 25 ರವರೆಗೆ ವಿಸ್ತರಣೆ. ವಿಶೇಷ ಶಿಬಿರ (ಸಮೀಕ್ಷಾ ಬ್ಲಾಕ್ ವ್ಯಾಪ್ತಿಯಲ್ಲಿ) ಮೇ 26 ರಿಂದ 28 ರವರೆಗೆ 3 ದಿನಗಳ ಕಾಲ. ಆನ್‌ಲೈನ್ ಮೂಲಕ ಮೇ 19 ರಿಂದ 28 ರವರೆಗೆ ಸ್ವಯಂ ಘೋಷಣೆಗೆ ಕಾಲ ನಿಗದಿಪಡಿಸಲಾಗಿದೆ.
ಮೇ 26 ರಿಂದ 28 ರವರೆಗೆ ವಿಶೇಷ ಶಿಬಿರದಲ್ಲಿ ನಡೆಸಬೇಕಾದ ಸಮೀಕ್ಷೆಯಲ್ಲಿ ಗಣತಿದಾರರು ಘೋಷಿತ ಮತಗಟ್ಟೆಗಳಲ್ಲಿ ಖುದ್ದಾಗಿ ಉಪಸ್ಥಿತರಿದ್ದು, ಮನೆ-ಮನೆ ಸಮೀಕ್ಷೆಯಲ್ಲಿ ಒಂದು ವೇಳೆ ಕೈಬಿಟ್ಟು ಹೋದಂತಹ ಪರಿಶಿಷ್ಟ ಜಾತಿಯ ಕುಟುಂಬದವರು ಶಿಬಿರಕ್ಕೆ ಆಗಮಿಸಿದಾಗ ಸುಸೂತ್ರವಾಗಿ ಸಮೀಕ್ಷೆ ನಡೆಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ.ಮಲ್ಲಿಕಾರ್ಜುನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?