Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ವಿದ್ಯರ‍್ಥಿಗಳಿಗೆ ಸ್ಕೌಟ್ಸ್ ಮತ್ತು ಗೈಡ್ಸ್ ಸಹಕಾರಿ: ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ

ಸುವರ್ಣವಾಹಿನಿ ಸುದ್ದಿ
ಬಳ್ಳಾರಿ,ಜ.೨೧: ಸ್ಕೌಟ್ಸ್ ಮತ್ತು ಗೈಡ್ಸ್ನ ಸಮಾಜಮುಖಿ ಕೆಲಸಗಳು ಶಾಲಾ ಕಾಲೇಜು ವಿದ್ಯರ‍್ಥಿಗಳಿಗೆ ಸಾಮಾಜಿಕ ಸೇವಾ ಮನೋಭಾವ ಬೆಳೆಸುವಲ್ಲಿ ಸಹಕಾರಿಯಾಗುತ್ತದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಬಳ್ಳಾರಿ ವತಿಯಿಂದ ನಗರದ ವಾಲ್ಮೀಕಿ ಸಮುದಾಯ ಭವನದಲ್ಲಿ ರ‍್ಪಡಿಸಿದ್ದ ೭ ದಿನಗಳ ಜಿಲ್ಲಾ ಮಟ್ಟದ ಸ್ಕೌಟ್ಸ್ ಮಾಸ್ರ‍್ಸ್ ಹಾಗೂ ಗೈಡ್ ಕ್ಯಾಪ್ಟನ್ಸ್ ಗಳ ಮೂಲ ತರಬೇತಿ ಶಿಬಿರವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಕರು ಒಂದು ವಾರ ಪಡೆದಿರುವ ತರಬೇತಿ ಮಕ್ಕಳ ರ‍್ವತೋಮುಖ ಬೆಳವಣಿಗೆಗೆ ಸಾಕ್ಷಿಯಾಗಬೇಕು, ನಿಮ್ಮ ಶಾಲೆಯ ಮಕ್ಕಳ ವಿಕಾಸದ ಜತೆ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಪ್ರಶಸ್ತಿಗಳನ್ನು ಪಡೆಯುವಂತಹ ವಿದ್ಯರ‍್ಥಿಗಳನ್ನು ತಯಾರು ಮಾಡುವ ಸಾರ‍್ಥ್ಯ ಒಬ್ಬ ಶಿಕ್ಷಕರಲ್ಲಿದ್ದು, ಪ್ರತಿಯೊಬ್ಬರು ಇದರ ನಿಯಮಗಳನ್ನು ಪಾಲಿಸಬೇಕು ಎಂದರು.
ಇದೇ ಸಂರ‍್ಭದಲ್ಲಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು, ತಮ್ಮ ಬಾಲ್ಯ ಶಿಕ್ಷಣದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಸೇರಿದ ನೆನಪುಗಳನ್ನು ಮೆಲುಕು ಹಾಕಿದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರ‍್ನಾಟಕದ ರಾಜ್ಯ ಪ್ರಧಾನ ಆಯುಕ್ತರಾದ ಪಿ.ಜಿ.ಆರ್.ಸಿಂಧ್ಯ ಅವರು ಮಾತನಾಡಿ, ಸೇವಾ ಮನೋಭಾವನೆಯಿಂದ ಶ್ರಮಿಸುತ್ತಿರುವ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ತ್ಯಾಗದ ಮತ್ತೊಂದು ಶಬ್ಧವಾಗಿದೆ. ಸೇವಾ ಮನೋಭಾವನೆಯನ್ನು ರೂಪಿಸುವುದೇ ಸ್ಕೌಟ್ಸ್ ಮತ್ತು ಗೈಡ್ಸ್ ನ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.
ಸ್ಕೌಟ್ಸ್ ಮತ್ತು ಗೈಡ್ಸ್ನ ಸಮಾಜಮುಖಿ ಕೆಲಸಗಳು ಮತ್ತು ಪ್ರತಿಯೊಬ್ಬರಲ್ಲಿ ದೇಶ ಪ್ರೇಮ ಸಾರುವ ಯೋಜನೆಗಳನ್ನು ಮನಗಂಡಿರುವ ಸರಕಾರವು ಆಯವ್ಯಯದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಕ್ಕೆ ಪ್ರತ್ಯೇಕ ಅನುದಾನ ಮೀಸಲಿಟ್ಟಿದೆ ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಕಡೆಗಳಲ್ಲಿಯೂ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳನ್ನು ನೀಡುವ ಮೂಲಕ ಅನೇಕ ಅನುಕೂಲಗಳನ್ನು ಸರಕಾರ ಮಾಡುವುದರಿಂದ ಶಿಕ್ಷಕರು ಮತ್ತು ಮಕ್ಕಳು ಮುಕ್ತವಾಗಿ ಭಾಗವಹಿಸಿ ಸ್ಕೌಟ್ಸ್ ಮತ್ತು ಗೈಡ್ಸ್ನ ಅನುಕೂಲ ಪಡೆಯುವ ಜತೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಿ ಎಂದರು.
ಒಂದು ವಾರಗಳ ಕಾಲ ತರಬೇತಿ ಪಡೆದ ಶಿಕ್ಷಕರಿಗೆ ಉತ್ತಮವಾಗಿ ತರಬೇತಿ ಪಡೆದು ಸ್ಕೌಟ್ಸ್ ಹಾಗೂ ಗೈಡ್ಸ್ ಶಿಕ್ಷಕರಾಗಲು ಸರ‍್ಥರು ಎಂಬುದಾಗಿ ದೀಕ್ಷೆ ನೀಡುವ ಮೂಲಕ ಬ್ಯಾಡ್ಜ್ ನೀಡಲಾಗುತ್ತದೆ. ಇದರ ಜತೆ ತರಬೇತಿ ಪ್ರಶಸ್ತಿ ಪತ್ರ ನೀಡಲಾಗುತ್ತದೆ.
ಶಿಬಿರದಲ್ಲಿ ಸ್ಕೌಟ್ ವಿಭಾಗದಲ್ಲಿ ೮೮ ಜನ ಶಿಕ್ಷಕರು ಹಾಗೂ ಗೈಡ್ಸ್ ವಿಭಾಗದಲ್ಲಿ ೧೨೬ ಶಿಕ್ಷಕಿಯರು ಸೇರಿದಂತೆ ಒಟ್ಟು ೨೧೪ ಜನ ಶಿಕ್ಷಕರು ಶಿಬಿರದಲ್ಲಿ ಪಾಲ್ಗೊಂಡಿದ್ದರು.
ಈ ಸಂರ‍್ಭದಲ್ಲಿ ಬಳ್ಳಾರಿ ಕೇಂದ್ರಸ್ಥಾನದ ಕಲ್ಯಾಣ ರ‍್ನಾಟಕ ಹಾಗೂ ರೇಂಜರಿಂಗ್ ವಿಭಾಗದ ಉಸ್ತುವಾರಿ ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ ಮಲ್ಲೇಶ್ವರಿ ಜುಜಾರೆ, ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ನ ಅಧ್ಯಕ್ಷ ವೀರೇಶ್, ಉಪಾಧ್ಯಕ್ಷರಾದ ಎಂ.ಟಿ.ಮಲ್ಲೇಶಪ್ಪ, ಜಿಲ್ಲಾ ಖಜಾಂಚಿ ವಿ.ಪ್ರಭಾಕರ್, ಜಿಲ್ಲಾ ತರಬೇತಿ ಆಯುಕ್ತರಾದ ಜಯಶ್ರೀ ಜೋಷಿ, ನಾಗರಾಜ, ತಾಲೂಕು ಕರ‍್ಯರ‍್ಶಿಗಳಾದ ಜಿ.ಎಸ್.ಸೋಮಪ್ಪ, ಚಂದ್ರಯ್ಯ ಹಿರೇಮಠದ್, ನಟರಾಜ ಸ್ವಾಮಿ, ಜಿಲ್ಲಾ ಸಂಘಟಕರಾದ ಮೆಹಬೂಬ್ ಭಾಷ ಸೇರಿದಂತೆ ರೋರ‍್ಸ್ ಮತ್ತು ರೇಂರ‍್ಸ್ ತರಬೇತುದಾರರು ಹಾಗೂ ಸ್ಕೌಟ್ಸ್ ಮಾಸ್ರ‍್ಸ್ ಹಾಗೂ ಗೈಡ್ ಕ್ಯಾಪ್ಟನ್ಸ್ ಗಳು ಉಪಸ್ಥಿತರಿದ್ದರು.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?