ಕೋಲಾರ, ಮಾ.18: ಲೋಕಸಭೆ ಚುನಾವಣೆಗೆ 2024 ದಿನಾಂಕ ಘೋಷಣೆ ಹಿನ್ನೆಲೆ ಇಡೀ ದೇಶಾದ್ಯಂತ ನೀತೆ ಸಂಹಿತೆ ಜಾರಿಯಾಗಿದ್ದು, ಅಲ್ಲಲ್ಲಿ ಚೆಕ್ಪೋಸ್ಟ್ಗಳನ್ನು ಹಾಕಿರುವ ಪೊಲೀಸರು ಮತ್ತು ಚುನಾವಣಾಧಿಕಾರಿಗಳು, ಚುನಾವಣಾ ಅಕ್ರಮಗಳನ್ನು ತಡೆಯಲು ಹದ್ದಿನ ಕಣ್ಣಿಟ್ಟಿದ್ದಾರೆ. ಇಂದು ಕೋಲಾರ ಸೇರಿದಂತೆ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣ, ವಾಹನ, ಸೀರೆಗಳನ್ನು ಜಪ್ತಿ ಮಾಡಲಾಗಿದೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಸೋಮಯಾಜಲಹಳ್ಳಿ ಚೆಕ್ಪೋಸ್ಟ್ ಬಳಿ ಚಿಂತಾಮಣಿಯಿಂದ ಆಂಧ್ರಕ್ಕೆ ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ 1.90 ಲಕ್ಷ ರೂಪಾಯಿ ಮತ್ತು ಕಾರನ್ನು ವಶಕ್ಕೆ ಪಡೆಯಲಾಗಿದೆ. ಚಿಂತಾಮಣಿ ಮೂಲದ ಕೃಷ್ಣಪ್ಪಗೆ ಸೇರಿದ ಹಣ, ಕಾರು ಜಪ್ತಿ ಮಾಡಲಾಗಿದೆ. ಆಂಧ್ರಪ್ರದೇಶದಲ್ಲಿ ಲೋಕಸಭಾ, ವಿಧಾನಸಭಾ ಚುನಾವಣೆ ಹಿನ್ನೆಲೆ ಅಂತಾರಾಜ್ಯ ಗಡಿ ಭಾಗದ ಚೆಕ್ಪೋಸ್ಟ್ನಲ್ಲಿ ಇನ್ಸ್ಪೆಕ್ಟರ್ ಗೊರವಿನಕೊಳ್ಳ ನೇತೃತ್ವದಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುತ್ತಿದೆ.
ತೇರದಾಳ ಚೆಕ್ಪೋಸ್ಟ್ ಬಳಿ ಹಣ ಜಪ್ತಿ
ಬಾಗಲಕೋಟೆ: ಜಿಲ್ಲೆಯ ತೇರದಾಳ ಬಳಿಯ ಚೆಕ್ಪೋಸ್ಟ್ನಲ್ಲಿ ದಾಖಲೆ ಇಲ್ಲದ 1.72 ಲಕ್ಷ ಹಣ ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸಹಾಯಕ ಚುನಾವಣಾಧಿಕಾರಿ ಸಾಜಿದ್ ಅಹಮದ್ ನೇತೃತ್ವದಲ್ಲಿ ತೆರದಾಳ ಕಾಲುವೆ 4ರ ಬಳಿಯ ಚೆಕ್ ಪೋಸ್ಟ್ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಈ ಹಣವನ್ನು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಕೆ.ಎಂ ಮಾಹಿತಿ ನೀಡಿದ್ದಾರೆ.
ಚಿಕ್ಕಮಗಳೂರಿನಲ್ಲಿ ಹಣ, ಸೀರೆ ಜಪ್ತಿ
ಚಿಕ್ಕಮಗಳೂರು: ಜಿಲ್ಲೆಯ ಎರಡು ಚೆಕ್ಪೋಸ್ಟ್ಗಳಲ್ಲಿ ಪೊಲೀಸರು ಹಾಗೂ ಚುನಾವಣಾಧಿಕಾರಿಗಳು ನಗದು ಮತ್ತು ಸೀರೆಗಳನ್ನು ವಶಕ್ಕೆ ಪಡೆಯಲಾಗಿದೆ. ಕೊಪ್ಪ ತಾಲೂಕಿನ ಗಡಿಕಲ್ ಚೆಕ್ಪೋಸ್ಟ್ನಲ್ಲಿ 1 ಲಕ್ಷದ 20 ಸಾವಿರ ಮೌಲ್ಯದ ಸೀರೆಗಳನ್ನು ಜಪ್ತಿ ಮಾಡಲಾಗಿದೆ. ತರೀಕೆರೆ ತಾಲೂಕಿನ ಲಕ್ಕವಳ್ಳಿ ಬಳಿಯ ಚೆಕ್ಪೋಸ್ಟ್ನಲ್ಲಿ 95 ಸಾವಿರ ರೂಪಾಯಿ ವಶಕ್ಕೆ ಪಡೆಯಲಾಗಿದೆ. ಸೂಕ್ತ ದಾಖಲೆ ನೀಡದ ಹಿನ್ನೆಲೆ ಹಣ ಹಾಗೂ ಸೀರೆಗಳನ್ನು ಜಪ್ತಿ ಮಾಡಲಾಗಿದೆ.
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.