Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಪ್ರಯತ್ನ ಯಶಸ್ಸಿಗೆ ಸೋಪಾನ: 2 ಬಾರಿ ಪಿಯುಸಿ ಫೇಲ್​ ಆಗಿದ್ದ ಕರುನಾಡಿನ ಶಾಂತಪ್ಪ ಯುಪಿಎಸ್​​ಸಿ ಪಾಸ್ !

ಬೆಂಗಳೂರು/ಬಳ್ಳಾರಿ, ಏ. 16 : ಜೀವನದಲ್ಲಿ ಒಂದು ನಿರ್ದಿಷ್ಟ ಗುರಿ, ಸಾಧಿಸಬಲ್ಲೆನೆಂಬ ಛಲದೊಂದಿಗೆ ಮುನ್ನಡೆಯಿರಿ ಯಶಸ್ಸು ನಿಮ್ಮದಾಗುತ್ತದೆ ಎನ್ನುವ ನಾಣ್ಣುಡಿಗಳು ಸುಳ್ಳಾಗುವುದಿಲ್ಲ. ಹೌದು..ಎರಡು ಬಾರಿ ಪಿಯುಸಿಯಲ್ಲಿ ಫೇಲ್​ ಆಗಿ ಬಳಿಕ ಸತತ ಪ್ರಯತ್ನದಿಂದ ಸಬ್​ಇನ್ಸ್​ಪೆಕ್ಟರ್​ ಆಗಿ ಇದೀಗ ಕನ್ನಡದಲ್ಲೇ ಯುಪಿಎಸ್​ಸಿ ಪರೀಕ್ಷೆಯನ್ನು ಪಾಸ್ ಮಾಡಿದ್ದಾರೆ. ಹಾಗಾದ್ರೆ, ಯಾರು ಅವರು? ಈಗ ಸನ್​ಇನ್ಸ್​ಪೆಕ್ಟರ್​ ಆಗಿ ಎಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎನ್ನುವ ವಿವರ ಇಲ್ಲಿದೆ…

 

2023ರ ಸೆಪ್ಟೆಂಬರ್ 15 ರಿಂದ 24 ರ ನಡುವೆ ನಡೆದಿದ್ದ ನಾಗರೀಕ ಸೇವೆಗಳ ಅಂತಿಮ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಒಟ್ಟು 1016 ಅಭ್ಯರ್ಥಿಗಳು ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದು, ಅವರನ್ನು ಕೇಂದ್ರ ವಿವಿಧ ಸೇವೆಗಳಿಗೆ ಶಿಫಾರಸು ಮಾಡಲಾಗಿದೆ ಎಂದು ಲೋಕಸೇವ ಆಯೋಗ ತಿಳಿಸಿದೆ. ಇದರಲ್ಲಿ ನಮ್ಮ ಕರ್ನಾಟಕದ ಶಾಂತಪ್ಪ ಜಡೆಮ್ಮನವರ್ ಎನ್ನುವರು ಕನ್ನಡದಲ್ಲೇ ಯುಪಿಎಸ್​ಸಿ ಪರೀಕ್ಷೆ ಪಾಸ್ ಮಾಡಿ ಸೈ ಎನಿಸಿಕೊಂಡಿದ್ದಾರೆ. ಹೌದು….ಬಳ್ಳಾರಿ ಮೂಲಕ ಶಾಂತಪ್ಪ ಅವರು ಪಿಯುಸಿಯಲ್ಲಿ ಎರಡು ಬಾರಿ ಫೇಲ್ ಆಗಿದ್ದವರು. ಆದರೂ ತಮ್ಮ ಗುರಿ, ಛಲ ಕೈಬಿಡದ ಶಾಂತಪ್ಪ ಪಿಯುಸಿ ತೇರ್ಗಡೆಯಾಗಿ ಇನ್ಸ್​ಪೆಕ್ಟರ್​ ಹುದ್ದೆಗೆ ಏರಿದ್ದಾರೆ. ಇದೀಗ ಮತ್ತೊಂದು ಹೆಜ್ಜೆ ಮುಂದೆ ಹೋಗಿರುವ ಶಾಂತಪ್ಪ ಯುಪಿಎಸ್​ಸಿ ಪರೀಕ್ಷೆಯಲ್ಲೂ ಸಹ ಪಾಸಾಗಿದ್ದಾರೆ.

ಕನ್ನಡ ಮಾಧ್ಯಮದಲ್ಲಿ ಪರೀಕ್ಷೆ ಬರೆದಿದ್ದ ಶಾಂತಪ್ಪ ಅವರು  644 ರ್ಯಾಂಕ್ ಪಡೆದು ಸಾಧನೆ ಮಾಡಿದ್ದಾರೆ. ಬಳ್ಳಾರಿ ಮೂಲದವರಾದ ಶಾಂತಪ್ಪ ಜಡೆಮ್ಮನವರ್ ಪಿಯುಸಿಯಲ್ಲಿ 2 ಬಾರಿ ಫೇಲ್​ ಆಗಿದ್ದರು. ಬಳಿಕ ಸತತ ಪ್ರಯತ್ನದಿಂದ ಪಿಯುಸಿ ಪಾಸ್ ಮಾಡಿಕೊಂಡು ಬಳಿಕ ಪದವಿ ಮುಗಿಸಿ ಅದರ ಮೇಲೆ 2015ರಲ್ಲಿ PSI ಹುದ್ದೆಗೆ ಆಯ್ಕೆಯಾಗಿದ್ದರು. ಸದ್ಯ ಇವರು ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪಿಎಸ್​ಐ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಜ್ಞಾನವು ವ್ಯಕ್ತಿಯಲ್ಲಿ ವಿವೇಕವನ್ನು ಮೂಡಿಸುತ್ತದೆ. ಆದರೆ, ಅಂಥ ಜ್ಞಾನ ಪಡೆದರಷ್ಟೇ ಸಾಲದು. ಅದನ್ನು ವಿವೇಚನೆಯಿಂದ ಬಳಸಿಕೊಳ್ಳುವ ಕಲೆಯೂ ತಿಳಿದಿರಬೇಕು. ಒಂದು ದೃಢ ನಿರ್ಧಾರ, ನಿರ್ದಿಷ್ಟ ಗುರಿ, ಆತ್ಮವಿಶ್ವಾಸ, ಸಾಧಿಸಬೇಕೆಂಬ ಛಲದ ಜತೆಗೆ ನಿರಂತರ ಪ್ರಯತ್ನಶೀಲರಾದವರಿಗೆ ಯಶಸ್ಸು ಒಲಿಯುವುದು ಖಂಡಿತ ಎನ್ನುವುದಕ್ಕೆ ಶಾಂತಪ್ಪ ಉದಾಹರಣೆಯಾಗಿದ್ದಾರೆ.

ಯಾರೂ ಶಾಂತಪ್ಪ ಜಡೆಮ್ಮನವರ್?

ಬಳ್ಳಾರಿ ಜಿಲ್ಲೆ ಕುರಗೋಡು ತಾಲೂಕಿನ ಪುಟ್ಟ ಹಳ್ಳಿಯಲ್ಲಿ ಹುಟ್ಟಿದ ಶಾಂತಪ್ಪ, ಹುಟ್ಟಿದ ವರ್ಷದೊಳಗೆ ತಂದೆಯನ್ನು ಕಳೆದುಕೊಂಡರು. ಅಮ್ಮ ಇದ್ದ ಸ್ವಲ್ಪ ಹೊಲದಲ್ಲಿ ಕೆಲಸ ಮಾಡುವ ಜತೆಗೆ ಕೂಲಿ ಮಾಡುತ್ತಿದ್ದರು. ಸರ್ಕಾರಿ ಶಾಲೆಗಳಲ್ಲಿ ಓದಿಕೊಂಡು ಬಂದ ಶಾಂತಪ್ಪ ಸರ್ಕಾರಿ ಸೇವೆಗೆ ಸೇರುವ ಗರಿ ಹೊಂದಿದ್ದರು. ಆದ್ರೆ, ಪಿಯುಸಿಯಲ್ಲಿ ಎರಡು ಬಾರಿ ಅನುತ್ತೀರ್ಣರಾಗಿದ್ದರು. ಆದರೂ ಛಲ ಬಿಡಿದ ಶಾಂತಪ್ಪ ಸತತ ಪ್ರಯತ್ನ ಮಾಡಿ ಪದವಿ ಮಗುಸಿಕೊಂಡು ಬಳಿಕ ಸ್ಪರ್ಧಾತ್ಮಕ ಪರೀಕ್ಷೆಗಳತ್ತ ಮನಸು ಮಾಡಿದ್ದರು. ಕೊನೆಗೆ ಪಿಎಸ್​ಐ ನೇಮಕಾತಿ ಪರೀಕ್ಷೆಯಲ್ಲಿ ಪಾಸ್​ ಆಗಿದ್ದರು.  ಶಾಂತಪ್ಪ ಜಡೆಮ್ಮನವರು ಪೊಲೀಸ್ ಇಲಾಖೆಯಲ್ಲಿಯೇ ಇದ್ದು ಮಾಡುತ್ತಿರುವ ಸಮಾಜ ಸೇವೆಗೆ ಪೊಲೀಸ್ ಇಲಾಖೆಯಲ್ಲಿ ಭಾರೀ ಪ್ರಶಂಸೆ ವ್ಯಕ್ತವಾಗುತ್ತಿದೆ. ಸದ್ಯ ವಿಧಾನಸೌಧ ಭದ್ರತಾ ವಿಭಾಗದಲ್ಲಿ ಪಿಎಸ್ಐ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಆರು ಕೆಲಸ ಸಿಕ್ಕಿದ್ರೂ ಆಯ್ಕೆ ಮಾಡಿಕೊಂಡಿದ್ದು ಪಿಎಸ್ಐ

ಇನ್ನು ಶಾಂತಪ್ಪ ಈವರೆಗೂ ಸುಮಾರು ಐದಾರು ಸರ್ಕಾರಿ ಕೆಲಸ ಗಿಟ್ಟಿಸಿಕೊಂಡಿದ್ದಾರೆ. ಅವರಿಗೆ ಮೊದಲು ಸಿಕ್ಕಿದ್ದು ಕೆನರಾ ಬ್ಯಾಂಕ್‌ನಲ್ಲಿ ಕೆಲಸ. ಆದರೆ, ಬ್ಯಾಂಕ್ ಉದ್ಯೋಗ ಇಷ್ಟವಿಲ್ಲದಿದ್ದರಿಂದ ಆ ಕೆಲಸಕ್ಕೆ ಹೋಗಲಿಲ್ಲ. ಆ ನಂತರ ಎರಡು ಬಾರಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಸಂದರ್ಶನಕ್ಕೆ ಹೋಗಿ ಬಂದಿದ್ದರಂತೆ. ಅದೇ ರೀತಿ ಕೆಪಿಎಸ್‌ಸಿ ಪರೀಕ್ಷೆಗಳಲ್ಲಿ ತೇರ್ಗಡೆಯಾಗಿ ಎರಡು ಬಾರಿ ಸಂದರ್ಶನಕ್ಕೆ ಹೋಗಿ ಬಂದಿದ್ದರು. ಜನರ ಕಷ್ಟಕ್ಕೆ ನೇರವಾಗಿ ಸ್ಪಂದಿಸುವ ಸಲುವಾಗಿ ಪಿಎಸ್ಐ ಹುದ್ದೆ ಅಯ್ಕೆ ಮಾಡಿಕೊಂಡಿದ್ದಾರೆ.

ಸಾಮಾಜಿಕ ಕಾರ್ಯದಲ್ಲೂ ಎತ್ತಿದ ಕೈ : 

ಇವರು ಕೇವಲ ಪೊಲೀಸ್ ಮಾತ್ರವಲ್ಲ ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ವಿರಾಮದ ಸಮಯದಲ್ಲಿ ಬಡ, ನಿರ್ಗತಿಕ ಮಕ್ಕಳಿಗೆ ಶಿಕ್ಷಣ ಹೇಳಿಕೊಡುವುದು, ಅವರಿಗೆ ಸೂರು, ಟಾಯ್ಲೆಟ್ ಕಟ್ಟಿಸಿಕೊಟ್ಟಿದ್ದಾರೆ. ಬಡತನದ ಹಿನ್ನೆಲೆಯಿಂದ ಬಂದ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ತನ್ನ ಮಾನವೀಯ ಕೆಲಸಗಳಿಂದ ಬೆಂಗಳೂರಿನಲ್ಲಿ ‘ಸಾಮಾಜಿಕ ಕಳಕಳಿಯ ಹೀರೋ’ ಆಗಿ ಜನ ಮನ್ನಣೆ ಗಳಿಸಿದ್ದಾರೆ.

ಕೋವಿಡ್ ಸಂದರ್ಭದಲ್ಲಿ ಶ್ರೀಮಂತರ ಮಕ್ಕಳಿಗೆ ಆನ್ ಲೈನ್ ನಲ್ಲಿ ಶಿಕ್ಷಣ ಸಿಗುತಿತ್ತು. ಆದರೆ ಈ ಬಡ ಮಕ್ಕಳಿಗೆ ಅತ್ತ ಆನ್ ಲೈನ್ ಶಿಕ್ಷಣವೂ ಇಲ್ಲ, ಇತ್ತ ಶಾಲೆಯೂ ಇರಲಿಲ್ಲ. ಹೀಗಾಗಿ ಪಿಎಎಸ್​ಐ ಶಾಂತಪ್ಪ ಅವರು ಬಡ ನಿರ್ಗತಿಕ ಮಕ್ಕಳಿಗೂ ಸಹ ಪಾಠ ಮಾಡಿದ್ದಾರೆ. ಗಣಿತ, ಸಾಮಾನ್ಯ ಜ್ಞಾನ ಮತ್ತು ಮೌಲ್ಯಾಧಾರಿತ ಶಿಕ್ಷಣ ಹೀಗೆ ಪ್ರಮುಖವಾಗಿ ಮೂರು ವಿಷಯಗಳನ್ನು ಹೇಳಿಕೊಡುತ್ತಾರೆ. ಸದ್ಯ ಇವರ ಬಳಿ ಸುಮಾರು 50 ಮಕ್ಕಳು ಕಲಿಯುತ್ತಿದ್ದಾರೆ.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?