Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಅಪರಾಧ ಸುದ್ದಿ

ಕಳ್ಳತನ ಪ್ರಕರಣ - ಮೂವರ ಬಂಧನ: ಗ್ರಾಮೀಣ ಠಾಣೆ ಸಿಪಿಐ ಸತೀಶ್‌ಗೆ ಎಸ್‌ಪಿ ಶೋಭಾರಾಣಿ ಪ್ರಶಂಸೆ

ಆರೋಪಿತರಿಂದ ಬ್ಯಾಟರಿ, ಎಲೆಕ್ಟ್ರಾನಿಕ್ ಉಪಕರಣ, ಆಟೋ ವಶಕ್ಕೆ

ಬಳ್ಳಾರಿ,ಸೆ.25 : ಏರ್‌ಟೇಲ್ ಮತ್ತು ಜಿಯೋ ಟೆಲಿಕಮ್ಯುನಿಕೇಷನ್ ಟವರ್‌ಗಳ ಬ್ಯಾಟರಿ ಮತ್ತು ಎಲೆಕ್ಟ್ರಾನಿಕ್ ಉಪಕರಣಗಳ ಕಳ್ಳತನ ಮಾಡಿದ ಮೂವರು ಆರೋಪಿಗಳನ್ನು ಬಂಧಿಸಿ, ಆರೋಪಿತರಿಂದ ೩೦.೪೯,೦೦೦/-ರೂ.ಗಳ ಮೌಲ್ಯದ ಬ್ಯಾಟರಿ, ಎಲೆಕ್ಟ್ರಾನಿಕ್ ಉಪಕರಣಗಳು, ಮತ್ತು ಕೃತ್ಯಕ್ಕೆ ಉಪಯೋಗಿಸಿದ ಆಟೋವನ್ನು ಗ್ರಾಮೀಣ ಪೊಲೀಸ್ ಠಾಣೆಯ ಸಿಪಿಐ ಸತೀಶ್ ವಶಪಡಿಸಿಕೊಂಡಿದ್ದಾರೆ.

ಬಳ್ಳಾರಿ ಜಿಲ್ಲೆಯಲ್ಲಿ ಮತ್ತು ಪಕ್ಕದ ನೆರೆಯ ರಾಜ್ಯವಾದ ಆಂಧ್ರದಲ್ಲಿ ಇತ್ತೀಚಿಗೆ ಟವರ್ ಕಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದರಿಂದ ಪ್ರಕರಣಗಳಲ್ಲಿ ಕಳ್ಳತನವಾದ ಮಾಲು ಮತ್ತು ಆರೋಪಿತರ ಪತ್ತೆ ಕುರಿತು ಎಸ್‌ಪಿ ಡಾ||ಶೋಭಾರಾಣಿ ವಿ.ಜೆ. ರವರ ನಿರ್ದೇಶನ ಮೇರೆಗೆ ಬಳ್ಳಾರಿಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-೨ ನವೀನ್ ಕುಮಾರ್‌ರವರ ಮಾರ್ಗದರ್ಶನದಲ್ಲಿ ಸಿರುಗುಪ್ಪ ಉಪ-ವಿಭಾಗ ಪೊಲೀಸ್ ಉಪಾಧೀಕ್ಷ ಸಂತೋಷ ಚೌವಾಣ್ ನೇತೃತ್ವದಲ್ಲಿ ಬಳ್ಳಾರಿ ಗ್ರಾಮೀಣ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಎನ್.ಸತೀಶ್, ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ಪಿ.ಎಸ್.ಐ. (ತನಿಖೆ) ವಿ.ಹೊನ್ನಪ್ಪ, ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆ ಎ.ಎಸ್.ಐ ಶ್ರೀನಿವಾಸಲು.ಎಂ ಹಾಗೂ ಸಿಬ್ಬಂದಿಗಳಾದ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ಶ್ರೀನಿವಾಸ, ಕೆ.ಬೀರಪ್ಪ, ಉಮಾಶಂಕರ, ರಮೇಶ್ ಬಾಬು, ಮಂಜುನಾಥ, ಮಾರ್ಕ್, ಫಕ್ಕಿರೇಶರವರನ್ನೊಳಗೊಂಡ ಒಂದು ವಿಶೇಷ ತಂಡವನ್ನು ರಚನೆ ಮಾಡಲಾಗಿತ್ತು. ಸೆ.೨೫ರಂದು ಬೆಳಿಗ್ಗೆ ತಂಡ ಕಾರ್ಯಚರಣೆ ಮಾಡಿ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆ-೦೫. ಪಿ.ಡಿ.ಹಳ್ಳಿ-೦೪, ಕುಡಿತಿನಿ-೦೧ ಆಂಧ್ರದಲ್ಲಿ-೦೫ ಒಟ್ಟು ೧೫ ಕಡೆಗಳಲ್ಲಿ ಟವರ್‌ನಲ್ಲಿರುವ ಬ್ಯಾಟರಿ ಮತ್ತು ಎಲೆಕ್ಟ್ರಾನಿಕ್ ಉಪಕರಣಗಳ ಕಳ್ಳತನ ಪ್ರಕಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳಾದ ಅನಾಸ್ ತಂದೆ ನವಾಬುದ್ದೀನ್, ಇಕ್ರಾರ್, ವಿಲ್ಸ್ ನವಾಜ್ ತಂದೆ ಗುಲ್ದಾರ್, ಅನಾಸ್ ಅವರನ್ನು ವಶಕ್ಕೆ ಪಡೆದು ಆರೋಪಿತರಿಂದ ಅಂದಾಜು ೩೦.೪೯,೦೦೦/- ರೂ ಮೌಲ್ಯದ ೨೬ ಬ್ಯಾಟರಿಗಳನ್ನು ಮತ್ತು ಎಲೆಕ್ಟ್ರಾನಿಕ್ ಉಪಕರಣಗಳನ್ನು ಹಾಗೂ ಸುಮಾರು ೦೫ ಲಕ್ಷ ಮೌಲ್ಯದ ಒಂದು ಇಂದ್ರಾ ಕಂಪನಿಯ ಲಗೇಜ್ ಪಿಕಪ್ ಆಟೋವನ್ನು ಮತ್ತು ಕೃತ್ಯ ಬಳಸುತ್ತಿದ್ದ ಸಲಕರಣೆಗಳನ್ನು ಜಪ್ತಿ ಮಾಡಲಾಗಿದೆ.

ಟವರ್ ಕಳ್ಳತನ ಪ್ರಕರಣಗಳ ಆರೋಪಿತರನ್ನು ಪತ್ತೆ ಮಾಡಿ ಬ್ಯಾಟರಿ ಮತ್ತು ಎಲೆಕ್ಟ್ರಾನಿಕ್ ಉಪಕರಣಗಳನ್ನು ವಶಪಡಿಸಿಕೊಂಡ ಮೇಲ್ಕಂಡ ವಿಶೇಷ ತಂಡದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯವೈಖರಿಗೆ ಜಿಲ್ಲಾ ಪೊಲೀಸ್‌ವರಿಷ್ಠಾಧಿಕಾರಿ ಡಾ|| ಶೋಭಾರಾಣಿ ವಿ.ಜೆ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?