Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಶ್ರೀ ದಾಸರoದರೆ ಪುರಂದರ ದಾಸರಯ್ಯ

ಬಳ್ಳಾರಿ, ಫೆ.05: ದೇವರು ನಮಗೇನೂ ಮಾಡಿದ್ದಾನೆ ಎನ್ನುವುದಕ್ಕಿಂತ ದೇವರಿಗೆ ನಾವೇನು ಮಾಡಿದ್ದೇವೆ, ಮಾಡುತ್ತಿದ್ದೇವೆ ಎನ್ನುವುದು ಮುಖ್ಯಎಂದು ಭಿಮನಕಟ್ಟೆ ಶ್ರೀ ಭೀಮಸೇತು ಮುನಿವೃಂದ ಮಠದ ಶ್ರೀ ರಘುವರೇಂದ್ರ ತೀರ್ಥ ಸ್ವಾಮೀಜಿ ಅವರು ಹೇಳಿದರು. ನಗರದ ಸತ್ಯನಾರಾಯಣ ಪೇಟೆ ಬಡಾವಣೆಯ ಶ್ರೀ ಜಮಖಂಡಿ ಶ್ರೀ ವಾದಿರಾಜ ಮಠದ ಆವರಣಲ್ಲಿ ಶ್ರೀ ಪುರಂದರ ದಾಸರ ಸಪ್ತರಾತ್ರೋತ್ಸವ ಹಾಗೂ ಶ್ರೀ ಮಧ್ವ ನವರಾತ್ರೋತ್ಸವ ನಿಮಿತ್ತ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ನಿತ್ಯ ದೇವರನ್ನು ಭಕ್ತಿಯಿಂದ ಪೂಜಿಸಿ, ಆರಾಧಿಸಿದರೆ ಸಕಲ ಕಷ್ಟಗಳೂ ದೂರವಾಗಲಿವೆ, ಭಗವಂತನನ್ನು ನಂಬಿದರೆ ಎಂದು ಕೈಬಿಡೊಲ್ಲ, ನಿತ್ಯ ಸ್ಮರಣೆ ಮಾಡಿದರೆ ಎದುರಾಗುವ ಎಲ್ಲ ವಿಘ್ನಗಳು ದೂರವಾಗಿ ನೆಮ್ಮದಿ ಜೀವನ ರೂಪಿಸಿಕೊಳ್ಳಬಹುದು ಎಂದರು.ಶ್ರೀ ಮಧ್ವ ಸಂಘದ ವತಿಯಿಂದ ಫೆ.3 ರಿಂದ 18 ರ ವರೆಗೆ ನಡೆಯಲಿರುವ ಶ್ರೀ ಪುರಂದರ ದಾಸರ ಸಪ್ತರಾತ್ರೋತ್ಸವ ಹಾಗೂ ಶ್ರೀ ಮಧ್ವ ನವರಾತ್ರೋತ್ಸವ ಕಾರ್ಯಕ್ರಮಗಳಲ್ಲಿ ಪ್ರತಿಯೊಬ್ಬರೂ ಭಾಗವಹಿಸಿ ಭಕ್ತಿ ಸಮರ್ಪಿಸಬೇಕು ಎಂದರು. ಶ್ರೀ ರಾಘವೇಂದ್ರ ಸ್ವಾಮಿ ಮಠದ ವ್ಯವಸ್ಥಾಪಕ ಶ್ರೀ ನರಹರಿ ಆಚಾರ ಅವರು, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶ್ರೀ ಮಧ್ವ ಸಂಘದ ಅಧ್ಯಕ್ಷ ಸುಬ್ರಮಣ್ಯ ಅವರು, ಸ್ವಾಗತಿಸಿ, ಪ್ರಾರ್ಥಿಸಿದರು. ವಿದ್ವಾನ್ ಶ್ರೀ ಸತ್ಯನಾರಾಯಣ ಆಚಾರ್ ಅವರು ಪ್ರಾಸ್ತಾವಿಕವಾಗಿ ಮತನಾಡಿದರು. ವಿದ್ವಾನ್ ಶ್ರೀ ಮಧುಸೂಧನ್ ಆಚಾರ ಉಡುಪಿ ಅವರಿಂದ ಪ್ರವಚನ ನಡೆಯಿತು. ಈ ಉತ್ಸವದ 15 ಕಾರ್ಯಕ್ರಮಗಳು ನಿತ್ಯವೂ ವಿಶೇಷವಾಗಿ ನಡೆಯಲಿದ್ದು, ವಿಶೇಷವಾಗಿ ನಾಲ್ಕು ಜನ ಸ್ವಾಮೀಜಿಗಳು ಭಾಗವಹಿಸಲಿದ್ದಾರೆ, ಭಕ್ತರು ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಸಂಘಟಕರು ಮನವಿ ಮಾಡಿದರು. ಈ ಸಂದರ್ಭದಲ್ಲಿ ಶ್ರೀ ಮಧ್ವ ಸಂಘದ ಪದಾಧಿಕಾರಿಗಳಾದ  ಸುಬ್ರಮಣ್ಯ, ರಾಮಮೂರ್ತಿ, ಸುಶಲೆಂದ್ರ, ಕಿಶನ್ ರಾವ್, ಲಕ್ಷ್ಮಣ್, ನರಸಿಂಹ ಮೂರ್ತಿ, ನಾರಾಯಣ ಆಚಾರ,  ವ್ಯಾಸರಾವ್, ಶ್ರೀಧರ್, ರವಿ, ವೇಣುಗೋಪಾಲ್ ಸೇರಿದಂತೆ ಇತರರು ಉಸ್ಥಿತರಿದ್ದರು. ನಂತರ ಪ್ರಾಥಮಿಕ, ಹಿರಿಯ ಪ್ರಾಥಮಿಕ ಪ್ರೌಢ ಶಾಲೆ ಮಕ್ಕಳಿಗೆ ಪುರಂದರ ದಾಸರ ಆರಾಧನೆ ಮಹೋತ್ಸವ ನಿಮಿತ್ತ ಸಂಗೀತ ಸ್ಪರ್ಧೆ, ಪ್ರಭಂದ ಸ್ಪರ್ಧೆ ಗಳು ನಡೆದವು. ನಂತರ ವಿವಿಧ ಭಜನಾ ಮಂಡಳಿ ಸದಸ್ಯರಿಂದ ಸಾಮೂಹಿಕ ಭಜನೆ ನಡೆಯಿತು.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?