Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಜನಾರ್ದನ ರೆಡ್ಡಿಯನ್ನು ಬಿಜೆಪಿಗೆ ಮರು ಸೇರ್ಪಡೆಗೊಳಿಸುವಂತೆ ಅಮಿತ್ ಶಾರನ್ನು ಒತ್ತಾಯಿಸಿದ್ದೇನೆ: ಶ್ರೀರಾಮುಲು

ಕಲ್ಯಾಣ ರಾಜ್ಯ ಪ್ರಗತಿಪಕ್ಷದ ನಾಯಕ ಗಾಲಿ ಜನಾರ್ಧನ ರೆಡ್ಡಿ ಅವರನ್ನು ಮತ್ತೆ ಬಿಜೆಪಿಗೆ ಸೇರ್ಪಡೆಗೊಳಿಸುವ ಬಗ್ಗೆ ಇದೀಗ ಮತ್ತೆ ಮಾತುಕತೆ ಆರಂಭವಾದ ಸುಳಿವು ಲಬ್ಯವಾಗಿದೆ. ರೆಡ್ಡಿಯವರನ್ನು ಮರಳಿ ಪಕ್ಷಕ್ಕೆ ಸೇರಿಸಿದರೆ ಉತ್ತರ ಕರ್ನಾಟಕ ಭಾಗದಲ್ಲಿ ಪ್ರಯೋಜನವಾಗಲಿದೆ ಎಂದು ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ಹೇಳಿರುವುದಾಗಿ ಮಾಜಿ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ಬೆಂಗಳೂರು, ಮಾರ್ಚ್​ 1: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ನಾಯಕ ಜನಾರ್ದನ ರೆಡ್ಡಿ (Janardhana Reddy) ಅವರನ್ನು ಬಿಜೆಪಿಗೆ (BJP) ಮರು ಸೇರ್ಪಡೆಗೊಳಿಸುವಂತೆ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿಯ ಹಿರಿಯ ನಾಯಕ ಅಮಿತ್ ಶಾ (Amit Shah) ಅವರನ್ನು ಒತ್ತಾಯಿಸಿರುವುದಾಗಿ ಮಾಜಿ ಸಚಿವ ಬಿ ಶ್ರೀರಾಮುಲು (B Sriramulu) ಹೇಳಿದ್ದಾರೆ. ಬಳ್ಳಾರಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ದೆಹಲಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ರೆಡ್ಡಿ ಅವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವುದರ ಬಗ್ಗೆ ಅಮಿತ್ ಶಾ ನನ್ನ ಅಭಿಪ್ರಾಯ ಕೇಳಿದ್ದರು. ರೆಡ್ಡಿ ಅವರಿಗೆ ಕ್ಷೇತ್ರದಲ್ಲಿ ವರ್ಚಸ್ಸು ಇದೆ, ಅವರನ್ನು ಪಕ್ಷಕ್ಕೆ ಮರಳಿ ಕರೆತಂದರೆ ಬಿಜೆಪಿಗೆ ಲೋಕಸಭೆ ಚುನಾವಣೆಯಲ್ಲಿ ಲಾಭವಾಗಲಿದೆ ಎಂದು ಹೇಳಿದ್ದೇನೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಬಳಿಯೂ ಈ ವಿಚಾರವಾಗಿ ನನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದೇನೆ ಎಂದು ಶ್ರೀರಾಮುಲು ತಿಳಿಸಿದ್ದಾರೆ.

ಜನಾರ್ದನ ರೆಡ್ಡಿ ಮತ್ತು ನನ್ನ ಮಧ್ಯೆ ಕೆಲವು ಭಿನ್ನಾಭಿಪ್ರಾಯಗಳಿರಬಹುದು. ಆದರೆ ಅವರು ಪಕ್ಷಕ್ಕೆ ಬಂದರೆ ನಾವು ಒಗ್ಗಟ್ಟಾಗಿ ಹೋರಾಟ ಮಾಡುತ್ತೇವೆ ಎಂದು ಶ್ರೀರಾಮುಲು ತಿಳಿಸಿದ್ದಾರೆ.

ರಾಜ್ಯಸಭಾ ಚುನಾವಣೆಯಲ್ಲಿ ಜನಾರ್ದನ ರೆಡ್ಡಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಆತ್ಮಸಾಕ್ಷಿಯ ಮತ ಹಾಕಿದ್ದಾರೆ ಎಂಬ ವರದಿಗಳ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ರಾಮುಲು, ಅದು ಅವರ ಪಕ್ಷದ ನಿರ್ಧಾರ ಮತ್ತು ಆ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದಿದ್ದಾರೆ.

ಜನಾರ್ದನ ರೆಡ್ಡಿ ಅವರೊಂದಿಗೆ ವೈಯಕ್ತಿಕವಾಗಿ ಸಮಸ್ಯೆ ಇರಲಿಲ್ಲ. ಆದರೆ, ಅವರು ಹೊಸ ಪಕ್ಷ ಕಟ್ಟಿದ್ದರಿಂದ ರಾಜಕೀಯವಾಗಿ ವೈಮನಸ್ಸು ಉಂಟಾಗಿತ್ತು. ಶ್ರೀರಾಮುಲು ಮೂಲಕ ಜನಾರ್ದನ ರೆಡ್ಡಿಯವರನ್ನು ಬಿಜೆಪಿಗೆ ಮರಳಿ ಸೇರ್ಪಡೆಗೊಳಿಸುವ ಯತ್ನ ನಡೆಯುತ್ತಿದೆ ಎಂದು ಕಳೆದ ತಿಂಗಳು ಗಾಲಿ ಸೋಮಶೇಖರ ರೆಡ್ಡಿ ಹೇಳಿದ್ದರು.

ರೆಡ್ಡಿ ಅವರನ್ನು ಮರಳಿ ಪಕ್ಷಕ್ಕೆ ಸೇರ್ಪಡೆಗೊಳಿಸುವುದರಿಂದ ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿಯ ಬಲ ವೃದ್ಧಿಯಾಗಲಿದೆ. ಸದ್ಯ ರಾಮುಲು ಮೂಲಕ ಪ್ರಯತ್ನ ನಡೆಯುತ್ತಿದ್ದು, ಇದು ಫಲಪ್ರದವಾಗಬಹುದು ಎಂದು ಗಾಲಿ ಸೋಮಶೇಖರ ರೆಡ್ಡಿ ಅಭಿಪ್ರಾಯಪಟ್ಟಿದ್ದರು.

ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಈ ಹಿಂದೆ ವಿವಿಧ ಕಾರಣಗಳಿಂದಾಗಿ ಪಕ್ಷದೊರೆದು ಹೋದವರನ್ನು ಮರಳಿ ಸೇರ್ಪಡೆಗೊಳಿಸುವ ಕಾರ್ಯದಲ್ಲಿ ಬಿಜೆಪಿ ನಿರತವಾಗಿದೆ. ಇತ್ತೀಚೆಗಷ್ಟೇ, ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರನ್ನು ಮರಳಿ ಪಕ್ಷಕ್ಕೆ ಸೇರ್ಪಡೆಗೊಳಿಸಲಾಗಿತ್ತು. ಇವರು ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ ಅಥವಾ ಹಾವೇರಿ ಕ್ಷೇತ್ರದಿಂದ ಪಕ್ಷದ ಟಿಕೆಟ್ ಆಕಾಂಕ್ಷಿ ಎಂದು ಹೇಳಲಾಗುತ್ತಿದೆ.

 

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?