Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ನಿರುದ್ಯೋಗಿ ಯುವಜನರಿಗೆ ಉದ್ಯೋಗ ಸೃಷ್ಠಿಯ ಭರವಸೆ ಮೂಡಿಸುವಲ್ಲಿ ವಿಫಲವಾದ ರಾಜ್ಯ ಬಜೆಟ್: ಡಿವೈಎಫ್ಐ

ಬಳ್ಳಾರಿ,ಫೆ.17 : ನಿರುದ್ಯೋಗಿ ಯುವಜನರಿಗೆ ಉದ್ಯೋಗ ಸೃಷ್ಠಿಯ ಭರವಸೆ ಮೂಡಿಸುವಲ್ಲಿ  ರಾಜ್ಯ ಬಜೆಟ್  ವಿಫಲವಾಗಿದೆ ಎಂದು ಡಿ.ವೈ.ಎಫ್.ಐ ನ ಜಿಲ್ಲಾ ಅಧ್ಯಕ್ಷರು ಯು.ಎರ್ರಿಸ್ವಾಮಿ ತಿಳಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಡಿ.ವೈ.ಎಫ್.ಐ ನ ಜಿಲ್ಲಾ ಅಧ್ಯಕ್ಷರು ಯು.ಎರ್ರಿಸ್ವಾಮಿ ಮಾತನಾಡಿ

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಅಧಿವೇಶನದಲ್ಲಿ ಮಂಡಿಸಿದ ಬಜೆಟ್, ರಾಜ್ಯದಲ್ಲಿ ಉದ್ಯೋಗದ ಅವಕಾಶಕ್ಕಾಗಿ ಕಾತರರಾಗಿರುವ ಯುವಜನರಿಗೆ ಉದ್ಯೋಗ ಸೃಷ್ಠಿಸುವ ಹಾಗೂ ಅಭದ್ರತೆಯಲ್ಲಿ ದುಡಿಯುತ್ತಿರುವವರಿಗೆ ಭದ್ರತೆ ಒದಗಿಸುವಲ್ಲಿ ವಿಫಲವಾಗಿದೆ.

ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಹಾಗೂ ಮೈಸೂರು ವಿಭಾಗಗಳಲ್ಲಿ ಜವಳಿ ಪಾರ್ಕ್ ಆರಂಭಿಸಲು ರಾಜ್ಯ ಸರಕಾರ ಮುಂದಾಗಿರುವುದು ಸ್ವಾಗತಾರ್ಹವಾದರೂ ಖಾಸಗಿ ಸಹಭಾಗಿತ್ವದಲ್ಲಿ ಆರಂಭ ಮಾಡುತ್ತಿರುವುದರಿಂದ ಭದ್ರತೆಯ ಕೆಲಸ ಯುವಜನರಿಗೆ ಮತ್ತೂ ಮರಿಚೀಕೆಯಾಗುತ್ತದೆ.

ಆದ್ದರಿಂದ ಸರಕಾರವೇ ಸ್ವತಃ ಈ ಉದ್ದಿಮೆಗಳನ್ನು ಸಾರ್ವಜನಿಕವಾಗಿ ಆರಂಭಿಸಬೇಕು ಖಾಲಿ ಇರುವ ಸರಕಾರಿ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು ಕಾಲೇಜುಗಳಲ್ಲಿ ಶಿಕ್ಷಕರು, ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುವ ಪ್ರಕ್ರಿಯೆ ಆರಂಭಿಸುವುದಾಗಿ ಬಜೆಟ್ ನಲ್ಲಿ ಹೇಳಿರುವುದು ಸ್ವಾಗತಾರ್ಹ.

ಇದು ಕೂಡಲೇ ಕಾರ್ಯರೂಪಕ್ಕೆ ಬರಬೇಕಿದೆ. ಜೊತೆಗೆ ಸರಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2.70 ಲಕ್ಷ ಹುದ್ದೆಗಳ ಭರ್ತಿಗೆ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು. ಅಲ್ಲದೇ ನೇಮಕಾತಿಯಲ್ಲಿ ಭ್ರಷ್ಠಾಚಾರ ಮಿತಿ ಮೀರಿದ್ದು ಇದನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಬೇಕು.

ಸ್ಕಿಲ್ ಹಾಗೂ ಕೌಶಲ್ಯ ಹೆಚ್ಚಿಸುವ ತರಭೇತಿ ನೀಡುವ ಕುರಿತು ಬಜೆಟ್ ನಲ್ಲಿ ಪ್ರಸ್ತಾಪಿಸಿದೆ. ಈ ತರಭೇತಿ ಪಡೆದ ನಂತರ ಅವರಿಗೆ ಉದ್ಯೋಗ ಖಾತ್ರಿಪಡಿಸಬೇಕು ಯುವ ನಿಧಿ ಗ್ಯಾರಂಟಿ ಕುರಿತು ಬಜೆಟ್ ನಲ್ಲಿ ಪ್ರಸ್ತಾಪಿಸಿದ್ದು, ಈ ಯೋಜನೆ ಸ್ವಾಗತಾರ್ಹವಾದುದು. ಆದರೆ ಕೇವಲ ಹಿಂದಿನ ವರ್ಷ ಪಾಸಾದ ಪದವಿಧರರಿಗೆ ಯೋಜನೆಯನ್ನು ಅನ್ವಯಿಸಿರುವುದು ಹಾಗೂ ಅತ್ಯಂತ ಕಡಿಮೆ ಹಣವನ್ನು ನೀಡುತ್ತಿರುವುದು ಅವೈಜ್ಞಾನಿಕವಾಗಿದೆ. ಆದ್ದರಿಂದ ಈ ಯೋಜನೆಗೆ ಐಟಿಐ ಸೇರಿದಂತೆ ಇತರೆ ವಿಭಾಗಗಳನ್ನು ಸೇರಿಸಿ ಕಳೆದ ಐದು, ಹತ್ತು ವರ್ಷಗಳಿಂದ ಪದವಿ ಪಡೆದು ಕೆಲಸ ಸಿಗದಿರುವ ನಿರುದ್ಯೋಗಿ ಯುವಜನರಿಗೆ ಅನ್ವಯಿಸಬೇಕು ಹಾಗೂ ಕನಿಷ್ಠ ರೂ. 12,000 ನಿರುದ್ಯೋಗ ಭತ್ಯೆ ಒದಗಿಸಬೇಕು ಎಂದರು.
ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳಬಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಗಳಡಿ ಇರುವ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಮಾಸಿಕ ಬೋಜನ ವೆಚ್ಚವನ್ನು ರೂ. 100 ಹೆಚ್ಚಳ ಮಾಡಿರುವುದು ಸ್ವಾಗತಾರ್ಹ. ಆದರೆ ಈ ಬೆಲೆ ಏರಿಕೆಯ ದಿನಗಳಲ್ಲಿ ಸಾಲದಾಗಿದೆ. ಪ್ರಸ್ತುತ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ರೂ.1600, ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ರೂ.1700 ಹಣವನ್ನು ಮಾಸಿಕ ತಲಾ ಭೋಜನ ವೆಚ್ಚವಾಗಿ ನೀಡಲಾಗುತ್ತಿದೆ. ಇದಕ್ಕೆ ಕೇವಲ ನೂರು ರೂಪಾಯಿ ಹೆಚ್ಚಳದಿಂದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಹಾಗೂ ಪೌಷ್ಠಿಕ ಆಹಾರ ಒದಗಿಸಲು ಅಸಾಧ್ಯ. ಹಾಗಾಗಿ ಕನಿಷ್ಠ ವಿದ್ಯಾರ್ಥಿಗಳ ಅಹಾರ ಭತ್ಯೆಯನ್ನು ಮಾಸಿಕ ರೂ.3500 ನಿಗದಿ ಮಾಡಲು ಸರಕಾರ ಕ್ರಮ ಕೈಗೊಳ್ಳಬೇಕು.
ಎಪಿಎಂಸಿ ತಿದ್ದುಪಡಿ ಕಾಯ್ದೆ ಹಿಂಪಡೆಯುವುದು, ಶಿಕ್ಷಣ ಸಂಸ್ಥೆಗಳಲ್ಲಿ ಸಾಮರಸ್ಯ, ವೈಜ್ಞಾನಿಕ ಮನೋಭಾವ ಮತ್ತು ಸಹಬಾಳ್ವೆಯ ವಿದ್ಯಾಕೆಂದ್ರಗಳನ್ನಾಗಿ ರೂಪಿಸಲು ನಾವು ಮನುಜರು ಯೋಜನೆ ತರುತ್ತಿರುವುದು. ಮಾಜಿ ದೇವದಾಸಿಯರು, ಲಿಂಗತ್ವ ಅಲ್ಪ ಸಂಖ್ಯಾತರಿಗೆ ಮಾಶಾಸನ ಹೆಚ್ಚಳ ಮಾಡಿರುವುದು. ಸಂಚಾರಿ ಕುರಿಗಾಹಿ ಮಕ್ಕಳಿಗೆ ಸರಕಾರಿ ವಸತಿ ಶಾಲೆಗಳಲ್ಲಿ ಆದ್ಯತೆ ನೀಡಿ, ವಿದ್ಯಾರ್ಥಿ ವೇತನ ನೀಡುವುದು. ಅಲೆ ಮಾರಿ, ಅರೆ ಅಲೆಮಾರಿ ಸಮುದಾಯ ಮಕ್ಕಳಿಗೆ ವಸತಿ ಶಾಲೆಯಲ್ಲಿ ಆದ್ಯತೆ ನೀಡುವುದು ಹಾಗೂ ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ಸ್ಥಿತಿಗತಿಗಳ ಅಧ್ಯಯನ, ಅಭಿವೃದ್ಧಿಗಾಗಿ ಕರ್ನಾಟಕ ಅಲೆಮಾರಿ ಆಯೋಗ ರಚನೆ ಮಾಡುತ್ತಿರುವುದು ಸಕಾರಾತ್ಮಕ ಅಂಶಗಳಾಗಿದ್ದು ಇವುಗಳನ್ನು ಡಿವೈಎಫ್ಐ ಸ್ವಾಗತಿಸುತ್ತದೆ.

ಆದ್ದರಿಂದ ಸರಕಾರ ಈ ಕೊರತೆಗಳನ್ನು ಸರಪಡಿಸಿ ರಾಜ್ಯದ ಜನತೆಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ಬಳ್ಳಾರಿ ಜಿಲ್ಲಾ ಅಧ್ಯಕ್ಷರು ಯು.ಎರ್ರಿಸ್ವಾಮಿ ಸರಕಾರವನ್ನು ಒತ್ತಾಯಿಸಿದ್ದಾರೆ .ರಾಜ್ಯದ ಯುವಜನತೆಗೆ ಈ ಕುರಿತು ಧ್ವನಿ ಎತ್ತಬೇಕೆಂದು ಬಳ್ಳಾರಿ ಜಿಲ್ಲಾ ಸಮಿತಿ ಕರೆ ನೀಡುತ್ತೆವೆ ಎಂದು ಕಾರ್ಯದರ್ಶಿ H.ಸ್ವಾಮಿ. ಉಪಾಧ್ಯಕ್ಷರು ಬೈಲಾ ಹನುಮಪ್ಪ, ಬಿಪಿ ನವೀನ್, GN.ಎರ್ರಿಸ್ವಾಮಿ ಎ.ತಿಪ್ಪೇರುದ್ರ ,H.ಎರ್ರಿಸ್ವಾಮಿ ,ಹೊನ್ನೂರ್ ಸಾಬ್ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ

 

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?