Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ರಾಜ್ಯದಲ್ಲಿ ತಾಪಮಾನ ಹೆಚ್ಚಳ: 8 ಜಿಲ್ಲೆಗಳ ಅಂಗನವಾಡಿ ಸಮಯ ಬದಲಾವಣೆ 

ಬಳ್ಳಾರಿ,, ಮಾರ್ಚ್​ 02: ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅದರಲ್ಲೂ ಮುಂದಿನ ಕೆಲದಿನಗಳ ಕಾಲ ರಾಜ್ಯದಲ್ಲಿ ಉಷ್ಣಅಲೆ ಇರಲಿದೆ ಅಂತ ಹವಾಮಾನ ಇಲಾಖೆ ತಿಳಿಸಿದೆ. ಆದರೆ ರಣ ಬಿಸಿಲಿಗೆ ಅಂಗನವಾಡಿ ಗೆ ಹೋಗುತ್ತಿದ್ದ ಪುಟ್ಟ ಮಕ್ಕಳು ನಲಗುತ್ತಿದ್ದವು. ಇದನ್ನು ಅರಿತ ಸರ್ಕಾರ ಇದೀಗ ಅಂಗನವಾಡಿಗಳ ಸಮಯವನ್ನು ಎರಡು ತಿಂಗಳ ಕಾಲ ಬದಲಾವಣೆ ಮಾಡಿ ಆದೇಶ ಹೊರಡಿಸಿದೆ. ಏಪ್ರಿಲ್ ಮತ್ತು ಮೇ  ತಿಂಗಳಿಗೆ ಅನ್ವಯವಾಗುವಂತೆ ರಾಜ್ಯದ ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ಬಳ್ಳಾರಿ, ಯಾದಗಿರಿ, ಕೊಪ್ಪಳ, ರಾಯಚೂರು, ಬೀದರ್ ಮತ್ತು ಕಿತ್ತೂರು ಕರ್ನಾಟಕ ಭಾಗದ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳ  ವೇಳಾಪಟ್ಟಿಯನ್ನು ಬದಲಾವಣೆ ಮಾಡಲಾಗಿದೆ.
ಮುಂದಿನ ಎರಡು ತಿಂಗಳ ಕಾಲ ಈ ಎಂಟು ಜಿಲ್ಲೆಯಲ್ಲಿನ ಅಂಗನವಾಡಿಗಳು ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಾತ್ರ ಕಾರ್ಯನಿರ್ವಹಿಸಲಿವೆ. ಬದಲಾದ ವೇಳಾಪಟ್ಟಿಯಂತೆ ಐಸಿಡಿಎಸ್ ಸೇವೆಗಳನ್ನು ನಿಯಮಾನುಸಾರ ಯಾವುದೇ ಅಡೆತಡೆಗಳಿಲ್ಲದೆ ಅಂಗನವಾಡಿ ಫಲಾನುಭವಿಗಳಿಗೆ ತಲುಪಿಸಲು ಅಗತ್ಯ ಕ್ರಮ ವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ಜಿ.ಸಿ.ಪ್ರಕಾಶ್ ಅವರು  ತಿಳಿಸಿದ್ದಾರೆ.
ಈ ಮೊದಲು ಅಂಗನವಾಡಿಗಳು ಮುಂಜಾನೆ 9.30 ರಿಂದ ಸಂಜೆ 4 ಗಂಟೆವರಗೆ ಕಾರ್ಯನಿರ್ವಹಿಸುತ್ತಿದ್ದವು. ಕೆಲ ಪಾಲಕರು ತಮ್ಮ ಮಕ್ಕಳನ್ನು ಮಧ್ಯಾಹ್ನ 1.30 ಕ್ಕೆ ಕರೆದುಕೊಂಡು ಹೋದರೆ, ಕೆಲ ಪಾಲಕರು ಸಂಜೆ ಕರೆದುಕೊಂಡು ಹೋಗುತ್ತಿದ್ದರು. ಆದರೆ ಕೊಪ್ಪಳ, ಬಳ್ಳಾರಿ, ಕಲಬುರಗಿ ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ಹೆಚ್ಚಿನ ತಾಪಮಾನ ಇರೋದರಿಂದ ಮಕ್ಕಳು ಮಧ್ಯಾಹ್ನದ ಸಮಯದಲ್ಲಿ ಪರದಾಡುತ್ತಿದ್ದರು.
ಹೀಗಾಗಿ ಅಂಗನವಾಡಿಗಳ ಸಮಯವನ್ನು ಬೇಸಿಗೆ ಕಾಲದಲ್ಲಿ ಬದಲಾವಣೆ ಮಾಡಬೇಕು ಅಂತ ಅನೇಕ ಪಾಲಕರು ಮತ್ತು ಅಂಗನವಾಡಿ ಸಿಬ್ಬಂದಿ ಆಗ್ರಹಿಸಿದ್ದರು. ಹೀಗಾಗಿ ಸರ್ಕಾರ ತಾತ್ಕಾಲಿಕವಾಗಿ ಸಮಯವನ್ನು ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದೆ.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?