Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಅಪರಾಧ ಸುದ್ದಿ

ಬಾಣಂತಿಯರಿಗೆ ನೀಡಲಾಗಿದ್ದ ಐವಿ ದ್ರಾವಣ ಬಳಕೆಗೆ ಯೋಗ್ಯವಲ್ಲ !?

ರಾಯಚೂರು, ಡಿಸೆಂಬರ್​ 28: ಸಿಂಧನೂರು ತಾಲೂಕು ಆಸ್ಪತ್ರೆಯಲ್ಲಿ ನಾಲ್ವರು ಬಾಣಂತಿಯರ ಸಾವಿಗೆ ಕಾರಣವಾಗಿದೆ ಎನ್ನಲಾಗಿರುವ IV ರಿಂಗರ್ ಲ್ಯಾಕ್ಟೇಟ್ ದ್ರಾವಣವನ್ನು ಪರೀಕ್ಷೆಗೆ ಒಳಪಡಿಸಿದ್ದು, ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. IV ರಿಂಗರ್ ಲ್ಯಾಕ್ಟೇಟ್ ದ್ರಾವಣದಲ್ಲಿನ ಎಂಡೋ ಟಾಕ್ಸಿನ್ ಎಂಬ ಅಂಶ ಬಳಕೆಗೆ ಯೋಗ್ಯವಲ್ಲ (ನೆಗೆಟಿವ್) ಅಂತ ಬೆಂಗಳೂರು ಮತ್ತು ಹೈದರಾಬಾದ್​ನ ಲ್ಯಾಬ್​ಗಳ ವರದಿಯಲ್ಲಿ ಬಹಿರಂಗಗೊಂಡಿದೆ.

ರಾಯಚೂರು ಜಿಲ್ಲಾಡಳಿತ ಒಟ್ಟು ಮೂರು ಲ್ಯಾಬ್​ಗಳಿಗೆ ತಲಾ 6 IV ರಿಂಗರ್ ಲ್ಯಾಕ್ಟೇಟ್ ದ್ರಾವಣ ಸ್ಯಾಂಪಲ್ ಪರೀಕ್ಷೆಗೆ ಕಳುಹಿಸಿತ್ತು. ಬೆಂಗಳೂರಿನ ವೈದ್ಯಕೀಯ ಕಾಲೇಜು ನೀಡಿದ ವರದಿಯಲ್ಲಿ 6 ಸ್ಯಾಂಪಲ್ ಪೈಕಿ 4 ಸ್ಯಾಂಪಲ್​ಗಳು ಉಪಯೋಗಕ್ಕೆ ಯೋಗ್ಯವಲ್ಲ, ಎರಡು ಉಪಯೋಗಕ್ಕೆ ಯೋಗ್ಯವಾಗಿವೆ ಎಂದು ಹೇಳಿದೆ. ಇನ್ನು, ಹೈದರಾಬಾದ್​ನ ವಿಂಪ್ಟಾ ಲ್ಯಾಬ್ ವರದಿಯಲ್ಲಿ 6 ಸ್ಯಾಂಪಲ್ ಪೈಕಿ, ನಾಲ್ಕು ಉಪಯೋಗಕ್ಕೆ ಯೋಗ್ಯವಿದ್ದು, ಎರಡು ಯೋಗ್ಯವಲ್ಲ ಅಂತ ವರದಿಯಲ್ಲಿ ಉಲ್ಲೇಖವಾಗಿದೆ. ಸದ್ಯ, ಸರ್ಕಾರದ ಡ್ರಗ್ ಕಂಟ್ರೋಲ್ ಲ್ಯಾಬ್​ನ ವರದಿ ಮಾತ್ರ ಬಾಕಿ ಇದೆ ಎಂದು ರಾಯಚೂರು ಜಿಲ್ಲಾಧಿಕಾರಿ ನಿತೀಶ್​ ಕೆ ಮಾಹಿತಿ ನೀಡಿದ್ದಾರೆ.

ಬೆಂಗಳೂರು ಮತ್ತು ಹೈದರಾಬಾದ್​ನ ಲ್ಯಾಬ್​ಗಳು ನೀಡಿದ್ದ ವರದಿಯಲ್ಲಿ ಜಿಲ್ಲಾಡಳಿತ ಸರ್ಕಾರಕ್ಕೆ ಸಲ್ಲಿಸಿದ್ದು ತನಿಖೆ ಮುಂದುವರಿಸಿದೆ. ರಾಯಚೂರು ಜಿಲ್ಲೆಯಲ್ಲಿ ಕಳೆದ 3 ತಿಂಗಳಲ್ಲಿ 10 ಬಾಣಂತಿಯರು ಮೃತಪಟ್ಟಿದ್ದಾರೆ. ಸಿಂಧನೂರು ತಾಲೂಕು ಆಸ್ಪತ್ರೆ ಒಂದರಲ್ಲೇ ನಾಲ್ವರು ಬಾಣಂತಿಯರು ಮೃತಪಟ್ಟಿದ್ದರು.

ಸಿಂಧನೂರು ತಾಲೂಕು ಆಸ್ಪತ್ರೆಗೆ ಅಕ್ಟೋಬರ್​ ತಿಂಗಳಲ್ಲಿ ದಾಖಲಾಗಿದ್ದ ನಾಲ್ವರು ಬಾಣಂತಿಯರು ಸಿಸೇರಿಯನ್​ ಬಳಿಕ ಮೃತಪಟ್ಟಿದ್ದರು. ರಾಯಚೂರು ಜಿಲ್ಲೆಯವರೇಯಾದ ಮೌಸಂಬಿ ಮಂಡಲ್​, ಚನ್ನಮ್ಮ, ಚಂದ್ರಕಲಾ, ರೇಣುಕಮ್ಮ ಮೃತ ಬಾಣಂತಿಯರು. ಈ ನಾಲ್ವರು ಬಾಣಂತಿಯರಿಗೂ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಳಕೆಯಾಗಿದ್ದ IVದ್ರಾವಣವೇ ನೀಡಲಾಗಿತ್ತು ಎಂದು ಹೇಳಲಾಗಿತ್ತು.

ತನಿಖೆ ನಡೆಸುತ್ತಿರುವ ಸರ್ಕಾರ

ಬಳ್ಳಾರಿ, ರಾಯಚೂರು, ಬೆಳಗಾವಿ ಮತ್ತು ಹುಬ್ಬಳ್ಳಿಯಲ್ಲಿನ ಬಾಣಂತಿಯರ ಸಾವಿನ ಸಂಖ್ಯೆ ಬೆಳಕಿಗೆ ಬರುತ್ತಿದ್ದಂತೆ ಆರೋಗ್ಯ ಇಲಾಖೆ ತನಿಖೆ ನಡೆಸುತ್ತಿದೆ. ಕಳೆದ ಮೂರು ತಿಂಗಳಲ್ಲಿ ಕರ್ನಾಟಕದಲ್ಲಿ ಎಷ್ಟು ಬಾಣಂತಿಯರು ಮೃತಪಟ್ಟಿದ್ದಾರೆ? ಇವರ ಸಾವಿಗೆ ಕಾರಣವೇನು? ಎಂಬುವುದರ ಕುರಿತು ಸಮಗ್ರವಾಗಿ ತನಿಖೆ ನಡೆಸುತ್ತಿದ್ದು, ಎಲ್ಲ ಮಾಹಿತಿಯನ್ನು ಕಲೆ ಹಾಕುತ್ತಿದೆ.

ಬಳ್ಳಾರಿಯಲ್ಲಿ ಐವರ ಬಾಣಂತಿಯರ ಸಾವು ರಾಷ್ಟ್ರ ಮಟ್ಟದಲ್ಲಿ ಚರ್ಚೆಯಾಗಿತ್ತು. ಐವರು ಬಾಣಂತಿಯರ ಸಾವಿಗೆ IV ರಿಂಗರ್ ಲ್ಯಾಕ್ಟೇಟ್ ದ್ರಾವಣ ಕಾರಣ ಎಂದು ತಿಳಿದುಬಂದಿದ್ದು, ಸರ್ಕಾರದ ನಿದ್ದೆಗೆಡಿಸಿದೆ. ಇನ್ನು, ಬಾಣಂತಿಯರ ಸಾವಿಗೆ ಕರ್ನಾಟಕ ಸರ್ಕಾರ ನೇರ ಹೊಣೆ ಎಂದು ವಿಪಕ್ಷಗಳು ಆರೋಪ ಮಾಡುತ್ತಿವೆ. IV ರಿಂಗರ್ ಲ್ಯಾಕ್ಟೇಟ್ ದ್ರಾವಣ ತಯಾರಿಸಿದ ಪಶ್ಚಿಮ ಬಂಗಾಳದ ಕಂಪನಿ ವಿರುದ್ಧ ಕರ್ನಾಟಕ ಸರ್ಕಾರ ಕಾನೂನು ಹೋರಾಟ ನಡೆಸುತ್ತಿದೆ.

 

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?