Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಆರೋಗ್ಯ ಮತ್ತು ಫಿಟ್ನೆಸ್

ಕರ್ನಾಟಕದ 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿಗಳ ಸಮಯ ಬದಲಾವಣೆ !!

ಬೆಂಗಳೂರು ​.02: ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲಿ ವಾಡಿಕೆ ಪ್ರಮಾಣದ ಬಿಸಿಲ ತಾಪ ಕಂಡು ಬರುತ್ತಿದೆ. ಇದರಿಂದ ಈ ಬಿರು ಬೇಸಿಗೆಯಲ್ಲಿ ಅವಧಿಯಲ್ಲಿ ಮಧ್ಯಾಹ್ನದ ನಂತರ ಕಚೇರಿಗಳಲ್ಲಿ ನೌಕರರು ಕೆಲಸ ಮಾಡುವುದು ಕಷ್ಟಪಡುತ್ತಿದ್ದಾರೆ. ಹಾಗೇ ಸಾರ್ವಜನಿಕರು ಸಹ ಬಿಸಿಲಿ ಝಳಕ್ಕೆ ಹೆದರಿ ಆಚೆ ಬರುತ್ತಿಲ್ಲ. ಹೀಗಾಗಿ ನೌಕರರು ಹಾಗೂ ಜನರು ಹಿತದೃಷ್ಟಿಯಿಂದ ರಾಜ್ಯ ಸರ್ಕಾರಿ ಕಚೇರಿಗಳ ಸಮಯವನ್ನು ಬದಲಾವಣೆ ಮಾಡಲಾಗಿದೆ. ಕಲ್ಯಾಣ ಕರ್ನಾಟಕದ  7 ಜಿಲ್ಲೆಗಳು ಹಾಗೂ ಕಿತ್ತೂರು ಕರ್ನಾಟಕದ 2 ಜಿಲ್ಲೆಗಳು ಸೇರಿದಂತೆ ಒಟ್ಟು 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿಗಳ ಕೆಲಸದ ಅವಧಿಯನ್ನು ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಇನ್ಮುಂದೆ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಎಲ್ಲ ರಾಜ್ಯ ಸರ್ಕಾರಿ ಕಚೇರಿಗಳು ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಮಾತ್ರ ತೆರೆದಿರುತ್ತವೆ.

ಏಪ್ರಿಲ್ ಮತ್ತು ಮೇ ಈ ಎರಡು ತಿಂಗಳು ಅವಧಿಯಲ್ಲಿ ಸರ್ಕಾರಿ ಕಚೇರಿಗಳಿಗೆ ಬೆಳಗಿನ 8 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಕೆಲಸದ ಅವಧಿ ನಿಗದಿ ಮಾಡಲಾಗಿದೆ. ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್‌, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ ಹಾಗೂ ಯಾದಗಿರಿ ಜಿಲ್ಲೆಗಳು ಹಾಗೂ ಕಿತ್ತೂರು ಕರ್ನಾಕದ (ಬೆಳಗಾವಿ ವಿಭಾಗ) ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಈ ಬದಲಾವಣೆ ಅವಧಿ ಅನ್ವಯವಾಗಲಿದೆ.

ಕಳೆದ ಹಲವು ದಶಕಗಳಿಂದ ಬೇಸಿಗೆಯ ಕಚೇರಿ ಸಮಯದಲ್ಲಿ ಬದಲಾವಣೆ ಇತ್ತು. ಆದಾಗ್ಯೂ ಕಳೆದ 2 ವರ್ಷದಿಂದ ಎಲೆಕ್ಷನ್‌ ಹಾಗೂ ಇತರೆ ಕಾರಣಗಳಿಂದಾಗಿ ಸರ್ಕಾರಿ ಕಚೇರಿ ಸಮಯದ ಬದಲಾವಣೆ ಮಾಡಿರಲಿಲ್ಲ. ಈ ಸಂಬಂಧ ಈ ಬಾರಿಯೂ ಸಹ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಅವರು ಸಮಯದ ಬದಲಾವಣೆಗೆ ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿ ರಾಜ್ಯ ಸರ್ಕಾರ, ಕಚೇರಿ ಕೆಲಸದ ಸಮಯದಲ್ಲಿ ಬದಲಾವಣೆ ಮಾಡಿದೆ.

ಈಗಾಗಲೇ ಕಲಬುರಗಿಯಲ್ಲಿ ಬೇಸಿಗೆಯ ಅತ್ಯಧಿಕ ತಾಪಮಾನ 42.8 ಡಿಗ್ರಿ ಸೆಲ್ಸಿಯಸ್ ದಾಖಲು ಆಗಿದೆ. ಜೊತೆಗೆ, ಕಲ್ಯಾಣ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ತಾಪಮಾನ ಕಳೆದ 15 ದಿನದಿಂದ ಸರಾಸರಿ 41 ಡಿಗ್ರಿ ದಾಖಲಾಗುತ್ತಿದೆ. ಇದರಿಂದ ಕಚೇರಿ ಕೆಲಸದ ಸಮಯ ಬದಲಾವಣೆಯಿಂದಾಗಿ ಸರ್ಕಾರಿ ನೌಕರರು, ಕಚೇರಿ ಕೆಲಸಕ್ಕೆ ಬರುವ ಸಾರ್ವಜನಿಕರು ಇಬ್ಬರಿಗೂ ಅನುಕೂಲವಾಗಿದೆ.

ಇನ್ನು ಬಂಗಾಳಕೊಲ್ಲಿಯಲ್ಲಿ ಮಳೆ ಮಾರುತಗಳು ಚುರುಕುಗೊಂಡಿರುವುದರಿಂದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?