Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಗುಡುಗು-ಸಿಡಿಲು ಆಘಾತದಿಂದ ಪಾರಾಗಲು ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಸಲಹೆಗಳು

ಬಳ್ಳಾರಿ,ಏ.25 :
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಗುಡುಗು ಮತ್ತು ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು  ಪ್ರಾಧಿಕಾರದಿಂದ ಗುಡುಗು ಮತ್ತು ಸಿಡಿಲು ಬಡಿತ  ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಸಾರ್ವಜನಿಕರು ಅವುಗಳನ್ನು ಕಡ್ಡಾಯವಾಗಿ ಪಾಲಿಸಿ, ನೈಸರ್ಗಿಕ ಅವಘಡಗಳಿಂದ ಆಗುವ ಹಾನಿಯಿಂದಾಗಿ ತಪ್ಪಿಸಿಕೊಳ್ಳಬಹುದಾಗಿದೆ.
ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು ಸಿಡಿಲು ಸಾಮಾನ್ಯವಾಗಿ ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನಲ್ಲಿ ಕಾಣಿಸಿಕೊಳ್ಳುತ್ತದೆ. ಸಿಡಿಲು ಸಾಮಾನ್ಯವಾಗಿ ಮಧ್ಯಾಹ್ನ ಅಥವಾ ಸಂಜೆ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಗುಡುಗು ಸಿಡಿಲಿನಿಂದಾಗುವ ಅಪಾಯಗಳನ್ನು ತಗ್ಗಿಸಲು ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳುವಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸೂಚಿಸಿದೆ.

*ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಸಾರ್ವಜನಿಕರು ಪಾಲಿಸಬೇಕಾದ ಸಲಹೆ ಸೂಚನೆಗಳು:*

ಹೊರಗೆ ಹೋಗುವ ಅನಿವಾರ್ಯವಿದ್ದಲ್ಲಿ ಹವಾಮಾನ ಮುನ್ಸೂಚನೆ ಮುಖಾಂತರ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದಿಂದ ಬರುವ ಸಂದೇಶಗಳನ್ನು ಗಮನಿಸಬೇಕು. ಪ್ರತಿಕೂಲ ಹವಾಮಾನದ ಸಮಯದಲ್ಲಿ ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು, ಜಾನುವಾರುಗಳನ್ನು ಮೇಯಿಸಲು, ಮೀನುಗಾರಿಕೆ ಮತ್ತು ದೋಣಿಗಳನ್ನು ಓಡಿಸಲು ಅಥವಾ ಸಾಮಾನ್ಯ ಪ್ರಯಾಣಕ್ಕಾಗಿ ಮನೆಯಿಂದ ಹೊರಗೆ ಹೋಗವುದನ್ನು ತಪ್ಪಿಸಬೇಕು. ಗುಡುಗು-ಸಿಡಿಲಿನ ಸಂದರ್ಭದಲ್ಲಿ ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಲ್ಲ, ಸುರಕ್ಷಿತವಾದ ಕಟ್ಟಡಗಳಾದ ಮನೆಗಳು, ಕಚೇರಿಗಳು, ಅಂಗಡಿಗಳು ಮತ್ತು ಕಿಟಕಿ ಮುಚ್ಚಿರುವಂತಹ ವಾಹನಗಳಲ್ಲಿ ಆಶ್ರಯ ಪಡೆಯಬೇಕು ಎಂದು ತಿಳಿಸಿದೆ.

ಬೆಟ್ಟಗಳು, ಪರ್ವತ ಶ್ರೇಣಿಗಳು ಅಥವಾ ಶಿಖರಗಳಂತಹ ಎತ್ತರದ ಪ್ರದೇಶಗಳಿಂದ ಕೆಳಗೆ ಇಳಿದು ಪ್ರವಾಹ ಬರದಂತಹ ತಗ್ಗು ಪ್ರದೇಶವನ್ನು ಖಚಿತಪಡಿಸಿಕೊಂಡು ಆಶ್ರಯ ಪಡೆಯಬೇಕು. ಕೆರೆ ಮತ್ತು ನದಿಗಳು ಹಾಗೂ ಇನ್ನಿತರ ನೀರಿನ ಮೂಲಗಳಿಂದ ತಕ್ಷಣವೇ ದೂರವಿರುವುದು, ವಿದ್ಯುತ್ ಉಪಕರಣ ಹಾಗೂ ವಿದ್ಯುತ್ ಸರಬರಾಜು, ಮಾರ್ಗ, ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಪವನ ವಿದ್ಯುತ್ ಗೋಪುರ ಹಾಗೂ ರೈಲು ಹಳಿಗಳಿಂದ ದೂರವಿರಬೇಕು.

ಗುಡುಗು - ಸಿಡಿಲಿನ ಮುನ್ಸೂಚನೆ ಅಥವಾ ಮುನ್ನೆಚ್ಚರಿಕೆ ಇದ್ದಲ್ಲಿ ಪ್ರಯಾಣವನ್ನು ಮುಂದೂಡಬೇಕು ಹಾಗೂ ಮನೆಗಳಲ್ಲಿ ಇರಬೇಕು. ವಾಹನ ಚಾಲನೆಯಲ್ಲಿದ್ದರೆ ತಕ್ಷಣವೇ ವಾಹನ ನಿಲ್ಲಿಸಿ ವಾಹನದಲ್ಲಿಯೇ ಆಶ್ರಯ ಪಡೆಯಬೇಕು ಹಾಗೂ ವಾಹನ ಕಿಟಕಿಗಳನ್ನು ಮುಚ್ಚಿ ವಾಹನದ ಒಳಗೆ ಇರಬೇಕು. ಮರಗಳು ಮತ್ತು ವಿದ್ಯುತ್ ಲೈನ್‍ಗಳಿಂದ ದೂರ ವಾಹನ ನಿಲುಗಡೆ ಮಾಡಬೇಕು. ಗುಡುಗು ಸಿಡಿಲಿನ ಸಮಯದಲ್ಲಿ ಗುಂಪಿನಲ್ಲಿದ್ದರೆ ಅಪಾಯವನ್ನು ಕಡಿಮೆ ಮಾಡಲು ಸಾಕಷ್ಟು ಅಂತರ ಕಾಯ್ದುಕೊಳ್ಳಬೇಕು.

ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಹೊರಾಂಗಣದಲ್ಲಿ ಕೆಲಸ ಮಾಡುತ್ತಿದ್ದರೆ ಮತ್ತು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಲು ಸಾಕಷ್ಟು ಸಮಯವಿಲ್ಲದಿದ್ದರೆ ಎರಡು ಕಾಲುಗಳನ್ನು ಜೋಡಿಸಿ ಮಂಡಿಯೂರಿ ಕುಳಿತುಕೊಂಡು ತಲೆಯನ್ನು ಬಗ್ಗಿಸಿ ಕಿವಿಗಳನ್ನು ಮುಚ್ಚಿಕೊಳ್ಳಬೇಕು. ಮಿಂಚನ್ನು ಆಕರ್ಷಿಸುವಂತಹ ವಿದ್ಯುತ್ ಅಥವಾ ಟೆಲಿಫೆÇೀನ್ ಕಂಬಗಳು ಅಥವಾ ಮರಗಳ ಕೆಳಗೆ ಆಶ್ರಯ ಪಡೆಯಬಾರದು. ಅರಣ್ಯ ಪ್ರದೇಶದಲ್ಲಿದ್ದರೆ ಸಣ್ಣ ಹಾಗೂ ಚಿಕ್ಕ ಮರಗಳ ಕೆಳಗೆ ಆಶ್ರಯ ಪಡೆಯಬೇಕು.  ಲೋಹದ ವಸ್ತುಗಳನ್ನು ಬಳಸಬಾರದು ಮತ್ತು ಬೈಕುಗಳು, ವಿದ್ಯುತ್ ಅಥವಾ ದೂರವಾಣಿ ಕಂಬಗಳು, ತಂತಿ ಬೇಲಿ, ಯಂತ್ರಗಳು ಇತ್ಯಾದಿಗಳಿಂದ ದೂರವಿರಬೇಕು.  ಸಿಡಿಲು ಸಂದರ್ಭದಲ್ಲಿ ಮೊಬೈಲ್ ಫೆÇೀನ್‍ಗಳನ್ನು ಬಳಸಬಾರದು ಹಾಗೂ ವಿದ್ಯುತ್ ಸಂಪರ್ಕ ಹೊಂದಿರುವ ದೂರವಾಣಿ ಕರೆಯನ್ನು ಬಳಸಬಾರದು.

ಕಬ್ಬಿಣದ ಸರಳುಗಳಿಂದ ಕೂಡಿದ ಛತ್ರಿಗಳನ್ನು ಬಳಸಬಾರದು. ಗುಡುಗು ಸಿಡಿಲಿನ ಸಮಯದಲ್ಲಿ ಕಿಟಕಿ, ಬಾಗಿಲುಗಳನ್ನು ಮುಚ್ಚಿ ಬೆಂಕಿ ಮತ್ತು ವಿದ್ಯುತ್ ಶಕ್ತಿ ಸಂಪರ್ಕದಿಂದ ದೂರವಿರಬೇಕು. ಮಕ್ಕಳು, ವಯೋವೃದ್ದರು, ಜಾನುವಾರುಗಳನ್ನು ಹಾಗೂ ಸಾಕು ಪ್ರಾಣಿಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಗಮನಹರಿಸಬೇಕು. ಹಾರುವ ಮತ್ತು ಅಪಘಾತಕ್ಕೆ ಕಾರಣವಾಗಬಹುದಾದ ಮರದ ಕಟ್ಟಿಗೆ ಅಥವಾ ಇತರೆ ಯಾವುದೇ ಅವಶೇಷಗಳನ್ನು ತೆಗೆದುಹಾಕಬೇಕು.

ಸಿಡಿಲು ಸಂದರ್ಭದಲ್ಲಿ ಕಟ್ಟಡದ ಕೊಳಾಯಿ ಮತ್ತು ಲೋಹದ ಕೊಳವೆಗಳ ಮೂಲಕ ವಿದ್ಯುತ್ ಹರಿಯುವ ಸಾಧ್ಯತೆ ಇರುವುದರಿಂದ ಸಿಡಿಲು ಉಂಟಾಗುವ ಸಂದರ್ಭದಲ್ಲಿ ಸ್ನಾನ ಅಥವಾ ಶವರ್ ತೆಗೆದುಕೊಳ್ಳಬಾರದು, ಪಾತ್ರೆಗಳನ್ನು ತೊಳೆಯಬಾರದು, ಬಟ್ಟೆ ಒಗೆಯಬಾರದು. ಗುಡುಗು ಸಿಡಿಲಿನ ಸಮಯದಲ್ಲಿ ಮೋಟಾರ್ ಸೈಕಲ್ ಅಥವಾ ಇನ್ನಿತರೆ ಯಾವುದೇ ತೆರೆದ ವಾಹನಗಳ ಸಂಚಾರವನ್ನು ಮಾಡಬಾರದು.

ಆಟದ ಮೈದಾನ, ಉದ್ಯಾನವನಗಳು, ಈಜುಕೊಳ ಮತ್ತು ಕಡಲ ತೀರಗಳಿಗೆ ಹೋಗುವುದನ್ನು ತಪ್ಪಿಸಬೇಕು.  ದೋಣಿ ವಿಹಾರ ಅಥವಾ ಈಜುತ್ತಿದ್ದರೆ ಸಾಧ್ಯವಾದಷ್ಟು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಬೇಕು. ಅರಣ್ಯ ಪ್ರದೇಶದಿಂದ ಗಿಡ ಗಡ್ಡೆಗಳಿಲ್ಲದ ಸ್ವಚ್ಛ ಪ್ರದೇಶದ ಕಡೆಗೆ ಚಲಿಸಬೇಕು. ಮಿಂಚಿನ ಹೊಡೆತದಿಂದಾಗಿ ಕಾಡ್ಗಿಚ್ಚು ಸಂಭವಿಸುವ ಸಾಧ್ಯತೆಯಿರುವುದರಿಂದ ಎಚ್ಚರಿಕೆ ವಹಿಸಬೇಕು.

ಗುಡುಗು ಸಿಡಿಲಿನ ಸಮಯದಲ್ಲಿ ಬಯಲು ಪ್ರದೇಶದಲ್ಲಿ ಸಿಲುಕಿಕೊಂಡಿದ್ದರೆ, ತಕ್ಷಣವೇ ಹತ್ತಿರದಲ್ಲೇ ಇರುವ ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆದು ಅಪಾಯದಿಂದ ಪಾರಾಗಬೇಕು. ಮಿಂಚು ಬರುವ ಸಮಯದಲ್ಲಿ ರಬ್ಬರ್ ಸೋಲ್ ಇರುವ ಪಾದರಕ್ಷೆಗಳು ಮತ್ತು ಕಾರಿನ ಚಕ್ರಗಳು ಸುರಕ್ಷಿತವಲ್ಲದ ಕಾರಣ ಅವುಗಳಿಂದ ದೂರವಿರಬೇಕು.
ವಿದ್ಯುತ್ ಸಂಪರ್ಕ ಹೊಂದಿರುವಂತಹ ವಿದ್ಯುತ್ ಮತ್ತು ಎಲೆಕ್ಟ್ರಿಕಲ್ ಉಪಕರಣಗಳಾದ ಕಂಪ್ಯೂಟರ್, ಲ್ಯಾಪ್‍ಟಾಪ್, ವಿಡಿಯೋ ಗೇಮ್ ಸಾಧನಗಳು, ಮೊಬೈಲ್ ಫೆÇೀನ್, ವಾಷಿಂಗ್ ಮಷಿನ್, ಸ್ಟವ್ ಹಾಗೂ ಇತರೆ ವಿದ್ಯುತ್ ಉಪಕರಣಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಬೇಕು. ಬಾಗಿಲುಗಳು, ಕಿಟಕಿಗಳು, ಮಂಟಪಗಳು, ಕಾಂಕ್ರೀಟ್ ನೆಲ, ಬೆಂಕಿಯ ಸ್ಥಳಗಳು, ಸ್ಟವ್‍ಗಳು, ಬಾತ್‍ಟಬ್‍ಗಳು ಅಥವಾ ಇತರೆ ವಿದ್ಯುತ್ ಉಪಕರಣಗಳಿಂದ ದೂರವಿರಬೇಕು.

*ಸಿಡಿಲು ಮತ್ತು ಮಿಂಚು ಬಡಿದಾಗ ಪಾಲಿಸಬೇಕಾದ ಪ್ರಥಮ ಚಿಕಿತ್ಸಾ ವಿಧಾನ:

ಸಿಡಿಲು ಮತ್ತು ಮಿಂಚು ಬಡಿದ ಸಮಯದಲ್ಲಿ ಪ್ರಾಥಮಿಕವಾಗಿ 112 ಅಥವಾ 108 ಸಹಾಯವಾಣಿಗೆ ಕರೆ ಮಾಡಬೇಕು. ವೈದ್ಯಕೀಯ ಸಿಬ್ಬಂದಿಯು ಆಗಮಿಸುವ ಮುನ್ನವೇ ನೀಡುವ ಅಗತ್ಯ ಪ್ರಥಮ ಚಿಕಿತ್ಸೆಯಿಂದ ಸಿಡಿಲು  ಮಿಂಚಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯ ಜೀವವನ್ನು ಉಳಿಸಬಹುದಾಗಿದೆ. ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯ ದೇಹದಲ್ಲಿ ಯಾವುದೇ ವಿದ್ಯುತ್ ಕಣಗಳು ಸಂಚಾರವಾಗುವುದಿಲ್ಲ. ಆದ್ದರಿಂದ, ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯನ್ನು ಮುಟ್ಟಿ ಉಪಚರಿಸುವ ವ್ಯಕ್ತಿಗೆ ಯಾವುದೇ ಅಪಾಯವಿರುವುದಿಲ್ಲ.
ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯ ಉಸಿರಾಟ ಹಾಗೂ ಎದೆ ಬಡಿತವನ್ನು ಪರೀಕ್ಷಿಸಬೇಕು. ವ್ಯಕ್ತಿಯ ದವಡೆಗೆ ನೇರವಾಗಿ ಕುತ್ತಿಗೆಯಲ್ಲಿರುವ ರಕ್ತನಾಳವನ್ನು  ಪರೀಕ್ಷಿಸುವುದರಿಂದ ಸುಲಭವಾಗಿ ನಾಡಿ ಮಿಡಿತವನ್ನು ತಿಳಿಯಬಹುದು. ವ್ಯಕ್ತಿಯಲ್ಲಿ ಉಸಿರಾಟವು ಕಂಡು ಬರದಿದ್ದಲ್ಲಿ ತಕ್ಷಣವೇ ಕೃತಕ ಉಸಿರಾಟ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು. ವ್ಯಕ್ತಿಯಲ್ಲಿ ಎದೆಬಡಿತವು ಕಂಡು ಬರದಿದ್ದಲ್ಲಿ ತಕ್ಷಣವೇ  Cardiac compressions ಹಾಗೂ  Cardiopulmonary Resuscitation ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು.

ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯ ಕಣ್ಣಿನ ದೃಷ್ಟಿ, ಕಿವಿಕೇಳಿಸುವಿಕೆ ಹಾಗೂ ಮೂಳೆಗಳು ಮುರಿದಿವೆಯೇ ಎಂದು ಪರೀಕ್ಷಿಸಬೇಕು. ಇದರಿಂದ ಪಾಶ್ರ್ವವಾಯು, ಲಕ್ಷಾ ಹೊಡೆಯುವುದನ್ನು ಮತ್ತು ಅಧಿಕ ರಕ್ತಸ್ರಾವದಿಂದ ಉಂಟಾಗುವ ಅಪಾಯಗಳನ್ನು ತಡೆಗಟ್ಟಬಹುದು. ಸಿಡಿಲು ಬಡಿಯುವ ಸಾಧ್ಯತೆಯು ಮುಂದುವರೆಯುವುದರ ಬಗ್ಗೆ ಈಗಾಗಲೇ ಸಿಡಿಲಿನ ಹೊಡೆತಕ್ಕೆ ಒಳಗಾಗಿರುವ ವ್ಯಕ್ತಿ ಹಾಗೂ ಅವರನ್ನು ರಕ್ಷಿಸುವವರು ಎಚ್ಚರವಹಿಸಬೇಕು. ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯು ಅಪಾಯಕಾರಿ ಸ್ಥಳದಲ್ಲಿದ್ದರೆ, ತಕ್ಷಣವೇ ಅವನನ್ನು ಅಥವಾ ಅವಳನ್ನು ಸೂಕ್ತ ರಕ್ಷಣಾ ಸ್ಥಳಕ್ಕೆ ಸ್ಥಳಾಂತರಿಸಬೇಕು.

ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯು ವಿವಿಧ ರೀತಿಯ ಸುಟ್ಟಗಾಯಗಳಿಂದ ಬಳಲಬಹುದು ಹಾಗೂ ಕಾಣದ ಗಾಯಗಳು, ಆಘಾತಕ್ಕೆ ಒಳಗಾಗಿರಬಹುದು. ಸಿಡಿಲು ಬಡಿದಿರುವ ವ್ಯಕ್ತಿಯಿರುವ ಸ್ಥಳಕ್ಕೆ ತಲುಪಲು ಹಾಗೂ ಸಿಡಿಲು ಬಡಿತಕ್ಕೆ ಒಳಗಾದ ವ್ಯಕ್ತಿಯ ಆರೋಗ್ಯಸ್ಥಿತಿಯ ಬಗ್ಗೆ ನಿಖರವಾದ ಮಾಹಿತಿ ನೀಡಬೇಕು ಮತ್ತು ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಬೇಕು.

ವಿಪತ್ತು ನಿರ್ವಹಣಾ ಪ್ರಾಧಿಕಾರ ನೀಡಿರುವ ಸಲಹೆ ಸೂಚನೆಗಳನ್ನು ಪಾಲಿಸುವುದರಿಂದ ಗುಡುಗು ಹಾಗೂ ಸಿಡಿಲಿನಿಂದ ಆಗುವ ಪ್ರಾಣ ಹಾನಿ ಹಾಗೂ ಇನ್ನಿತರ ಅವಘಡಗಳಿಂದ ಪಾರಾಗಬಹುದು ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ತಿಳಿಸಿದೆ.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?