Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಒಳಮೀಸಲಾತಿ ಜಾತಿ ಸಮೀಕ್ಷೆ ತಾಂತ್ರಿಕ ತೊಂದರೆಗಳನ್ನು ನಿವಾರಿಸಿ ಪಾರದರ್ಶಕವಾಗಿ ನಡೆಸಿ : ಬಳ್ಳಾರಿ ಜಿಲ್ಲಾ ಬೋವಿ ವಡ್ಡರ ಸಂಘದ ಜಿಲ್ಲಾಧ್ಯಕ್ಷ ವಿ. ರಾಮಾಂಜನೇಯ

ಬಳ್ಳಾರಿ ಮೇ 13 : ನಿವೃತ್ತ ನ್ಯಾಯಾಧೀಶರಾದ ಹೆಚ್.ಎನ್.ನಾಗಮೋಹನ್ ದಾಸ್ ನೇತೃತ್ವದಲ್ಲಿ ಏಕಸದಸ್ಯ ವಿಚಾರಣಾ ಆಯೋಗದ ಅಡಿಯಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸಲು ನಡೆಸುತ್ತಿರುವ ಜಾತಿ ಗಣತಿ ಸಮೀಕ್ಷೆಯಲ್ಲಿ ಹಲವು ತಾಂತ್ರಿಕ ತೊಡಕುಗಳು ಕಂಡುಬರುತ್ತಿವೆ, ಅವುಗಳನ್ನು ಶೀಘ್ರವೇ ನಿವಾರಿಸಿ ಒಳಮೀಸಲಾತಿಯ ಸಮೀಕ್ಷೆಯನ್ನು ಪಾರದರ್ಶಕವಾಗಿ ಕೈಗೊಂಡು ಅರ್ಹರಿಗೆ ಮೀಸಲಾತಿಯನ್ನು ಕಲ್ಪಿಸಬೇಕು ಎಂದು ಬಳ್ಳಾರಿ ಜಿಲ್ಲಾ ಬೋವಿ ವಡ್ಡರ ಸಂಘದ ಜಿಲ್ಲಾಧ್ಯಕ್ಷ ವಿ ರಾಮಾಂಜನೇಯ ಸಮೀಕ್ಷಾ ತಂಡಕ್ಕೆ ಮನವಿ ಮಾಡಿದರು.

ಅವರು ಇಂದು ಬಳ್ಳಾರಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿ ಮಾತನಾಡಿ, ಸಮೀಕ್ಷೆಯ ಕಾರ್ಯಕ್ಕೆ ನಿಯೋಜಿತಾರಾಗಿರುವ ಶಿಕ್ಷಕ ಸಿಬ್ಬಂದಿಗಳಿಗೆ ಕೇವಲ ಮೂರು ಗಂಟೆಗಳ ಕಾಲ ತರಬೇತಿ ನೀಡಲಾಗಿದೆ. ಹಾಗಾಗಿ ಪರಿಣಾಮಕಾರಿಯಾಗಿ ಸಮೀಕ್ಷೆ ನಡೆಸಲು ಅವರಿಗೆ ಸಾಧ್ಯವಾಗುತ್ತಿಲ್ಲ, ಸಮೀಕ್ಷಾ ನಡೆಸುತ್ತಿರುವ ಸಿಬ್ಬಂದಿಗಳಿಗೆ ಮೊತ್ತೊಮ್ಮೆ ಒಂದುದಿನದ ಪೂರ್ಣಾವಧಿ ತರಬೇತಿ ಅಗತ್ಯತೆ ಇರುತ್ತದೆ ಸಮೀಕ್ಷೆಯಲ್ಲಿ ಬಳಸಲಾಗುತ್ತಿರುವ ಪ್ರಶ್ನಾವಳಿಗಳು ಕ್ಲಿಷ್ಟವಾಗಿರುವುದರಿಂದ ಈ ತಳಮಟ್ಟದ ಸಮುದಾಯಗಳ ಜನರಾದ ಪರಿಶಿಷ್ಟ ಜಾತಿ ಸಮುದಾಯಗಳ ಜನರ ಶೈಕ್ಷಣಿಕ ಮಟ್ಟವು ಕಡಿಮೆ ಇದ್ದು ಅವರಿಗೆ ಅರ್ಥವಾಗುವ ರೀತಿಯಲ್ಲಿ ಪ್ರಶ್ನೆಗಳನ್ನು ವಿವರಿಸುವ ಅಗತ್ಯತೆ ಇದೆ. ಹಾಗಾಗಿ ಸದರಿ ಸಮೀಕ್ಷೆಯಲ್ಲಿ ತಪ್ಪು ಮಾಹಿತಿ ಸಂಗ್ರಹವಾಗುವ ಅಪಾಯವಿದೆ ಎಂದು ರಾಮಾಂಜನೇಯ ಆತಂಕವನ್ನು ವ್ಯಕ್ತಪಡಿಸಿದರು.

ಆದ್ದರಿಂದ, ಮೇ 5 ರಿಂದ 17ರ ವರೆಗೆ ನಡೆಯಲಿರುವ ಜಾತಿ ಸಮೀಕ್ಷೆಯನ್ನು ಗಡುವಿನಲ್ಲಿ ಮುಗಿಸುವುದಕ್ಕೆ ಕಷ್ಟ ಎನ್ನಲಾಗುತ್ತದೆ. ಕಾರಣ ಮೊಬೈಲ್ಅಪ್ಲಿಕೇಷನ್ ಮೂಲಕ ಸಮೀಕ್ಷೆ ನಡೆಸಲಾಗುತ್ತಿದ್ದು ಆದರೆ ಅಪ್ಲಿಕೇಷನ್ ನಲ್ಲಿ ಸಾಕಷ್ಟು ತಾಂತ್ರಿಕ ತೊಂದರೆ ಕಾಣಿಸಿಕೊಳ್ಳುತ್ತಿವೆ. ಬೆಳಗೆ, 8:00 ರಿಂದ ಸಂಜೆ 6:00ರವರೆಗೆ ಸಮೀಕ್ಷೆಗೆ ಸಮಯ ನಿಗಧಿಪಡಿಸಲಾಗಿದೆ. ಆದರೆ ಮೊಬೈಲ್ ಅಪ್ಲಿಕೇಷನ್ ನಲ್ಲಿ ನೆಟವರ್ಕ್ ಸಮಸ್ಯೆಯಿಂದ ತಡವಾಗುತಿದೆ. ಪರಿಶಿಷ್ಟ ಜಾತಿಯ ಗಣತಿ ಸಮೀಕ್ಷೆಯಲ್ಲಿ 42 ಪ್ರಶ್ನಾವಳಿಗೆ ಉತ್ತರ ಪಡೆದು ಮಾಹತಿ ಅಪ್ ಲೋಡ್ ಮಾಡಬೇಕಾಗಿ ಇರುವುದರಿಂದ ವಿನಾ ಕಾರಣ ವಿಳಂಭವಾಗುತ್ತಿದೆ. ಹಳ್ಳಿಯಲ್ಲಿ ಇಂಟರ್‌ನೆಟ್ ನೆಟ್ವರ್ಕ್ ಸಮಸ್ಯೆ ಇರುತ್ತದೆ.

ಒಂದು ಕುಟುಂಬದ ಸಮೀಕ್ಷೆಗೆ ಅರ್ಧಗಂಟೆ, ಕೆಲವು ಸಮಯದಲ್ಲಿ ಒಂದು ಗಂಟೆ ಬೇಕಾಗಬಹುದು ಹೀಗಾಗಿ ಒಂದು ದಿನಕ್ಕೆ 5 ರಿಂದ 10 ಕುಟುಂಬಗಳ ಸಮೀಕ್ಷೆನಡೆಸಲಷ್ಟೇ ಸಾಧ್ಯವಾಗುತ್ತದೆ. ಸಮೀಕ್ಷೆಗೆ ನೀಡಿರುವ ಅಲ್ಪಾವಧಿಯಲ್ಲಿ ನೀಡಿರುವ ಮನೆಗಳ ಸಮೀಕ್ಷೆ ನಡೆಸುವುದು ಕಷ್ಟ ಸಾಧ್ಯವಾಗಿದ್ದು, ಮುಕ್ತಾಗೊಳಿಸಲು ಸಾಧ್ಯವಾಗದೇ ಇರಬಹುದು. ಹಾಗಾಗಿ ಇನ್ನಷ್ಟು ದಿನಗಳ ಕಾಲಾವಕಾಶ ನೀಡಿ ಪಾರದರ್ಶಕವಾಗಿ ಸಮೀಕ್ಷೆ ಕೈಗೊಳ್ಳಲು ಅವಕಾಶ ನೀಡಬೇಕೆಂದು ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರವನ್ನು ನೀಡಿ ಒತ್ತಾಯಿಸಿದರು.                                                                                                             

ಈ ಸಂದರ್ಭದಲ್ಲಿ ಸಂಘದ  ಟಿವಿ ವೆಂಕಟೇಶನಗರ ಅಧ್ಯಕ್ಷ ತಮ್ಮಣ್ಣ,ಆರ್ ವಿ ಪ್ರಕಾಶ್,ಗೋನಾಳ್ ಹುಲುಗಪ್ಪ,
ಶೇಷಣ್ಣ, ಮಹಿಳಾ ಜಿಲ್ಲಾಧ್ಯಕ್ಷರಾದ ಎಲ್ಲಮ್ಮ, ವಿ ರಾಘವೇಂದ್ರ ಸೋಮಸಮುದ್ರ, ಗುಡುದೂರ್ ಹನುಮಂತ, ಜಿಲ್ಲಾ ಯುವ ಅಧ್ಯಕ್ಷರು ಎಂ. ಪಿ ರಾಜೇಶ್, ದಿವಾಕರ್ ಬಾಬು, ಸಂಗನಕಲ್ ರಾಘವೇಂದ್ರ, ಅಂದ್ರಾಲ್ ಹುಲಗಪ್ಪ, ಗುಡುದೂರ್ ಶ್ರೀನಿವಾಸ್
ಸಂಗನಕಲ್ಲ ರಾಮುಡು, ಪ್ರವಲಿಕ ಸೇರಿದಂತೆ ಇತರರಿದ್ದರು.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?