Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಮತದಾನ ಪ್ರಮಾಣ ಹೆಚ್ಚಿಸಲು ಮತದಾನ ಜಾಗೃತಿ ಮೂಡಿಸಿ: ಜಿಪಂ ಮುಖ್ಯ ಯೋಜನಾಧಿಕಾರಿ ವಾಗೀಶ್ ಶಿವಾಚಾರ್ಯ

ಬಳ್ಳಾರಿ,ಮಾ.22 :ಲೋಕಸಭಾ ಚುನಾವಣೆ-2024 ರ ಹಿನ್ನೆಲೆ  ಕಡಿಮೆ ಪ್ರಮಾಣದ ಮತದಾನ ಇರುವ ಕಡೆ ಸ್ವೀಪ್ ಚಟುವಟಿಕೆ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಹೆಚ್ಚು ಮತದಾನ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ವಾಗೀಶ್ ಶಿವಾಚಾರ್ಯ ಅವರು ಹೇಳಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಲೋಕಸಭಾ ಚುನಾವಣೆ ಅಂಗವಾಗಿ ಸ್ವೀಪ್ ಚಟುವಟಿಕೆ ಹಮ್ಮಿಕೊಳ್ಳುವ ಕುರಿತು ಬಳ್ಳಾರಿ ಗ್ರಾಮೀಣ ಕ್ಷೇತ್ರದ ಚುನಾವಣೆ ಕಾರ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು, ಬಿಎಲ್‍ಓಗಳಿಗೆ ಶುಕ್ರವಾರ ಹಮ್ಮಿಕೊಂಡಿದ್ದ ಮತದಾನದ ಜಾಗೃತಿ ಮೂಡಿಸುವ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮತದಾನ ಮೌಲ್ಯದ ಕುರಿತು ಜಿಲ್ಲೆಯ ಗ್ರಾಮ ಪಂಚಾಯತ್ ಹಾಗೂ ಹೋಬಳಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.
ಬಳ್ಳಾರಿ ತಾಲ್ಲೂಕು ತಾಪಂ ಇಓ ಮಡಗಿನ ಬಸಪ್ಪ ಅವರು ಮಾತನಾಡಿ, ಚುನಾವಣೆ ಕುರಿತು ಅರಿವು ಮೂಡಿಸಿ ನಿರ್ಭೀತರಾಗಿ ಮೇ-07 ರಂದು ಮತದಾನವನ್ನು ಮಾಡಲು ಸಾರ್ವಜನಿಕರಿಗೆ ತಿಳಿಸುವಂತೆ ಸೂಚಿಸಿದರು.
ತರಬೇತಿ ಕಾರ್ಯಕ್ರಮದಲ್ಲಿ ಸಹಾಯಕ ನಿರ್ದೇಶಕ (ಪಂ.ರಾಜ್) ಮಹಮ್ಮದ್ ಗೌಸ್.ಆರ್.,   ಬಳ್ಳಾರಿ ತಾಲ್ಲೂಕಿನ 93-ಬಳ್ಳಾರಿ ಗ್ರಾಮೀಣ ವಿಧಾನ ಸಭಾಕ್ಷೇತ್ರದ ತಾಲ್ಲೂಕು ಸ್ವೀಪ್ ಸಮಿತಿಯ ಅಧಿಕಾರಿಗಳು, ಬಳ್ಳಾರಿ ತಾಲ್ಲೂಕಿನ ಎಲ್ಲಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಬಿ.ಎಲ್.ಓ ಮತ್ತು ತಾಲ್ಲೂಕು ಪಂಚಾಯತಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಭಾಗವಹಿಸಿದ್ದರು.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?