ಬಳ್ಳಾರಿ,ಫೆ.05 : ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಸರ್ಕಾರಿ (ಮಾ.ಪು) ಪದವಿ ಪೂರ್ವ ಕಾಲೇಜಿನ 2023-24ನೇ ಸಾಲಿನ ಕಾಲೇಜು ವಾರ್ಷಿಕೋತ್ಸವ ಹಾಗೂ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ದಿನಾಚರಣೆ ಕಾರ್ಯಕ್ರಮವನ್ನು ಫೆ.06 ರಂದು ಬೆಳಿಗ್ಗೆ 09.30 ಕ್ಕೆ ನಗರದ ಡಾ.ರಾಜ್ಕುಮಾರ್ ರಸ್ತೆಯ ರಾಘವ ಕಲಾಮಂದಿರದಲ್ಲಿ ಏರ್ಪಡಿಸಲಾಗಿದೆ.
ಯುವಸಬಲೀಕರಣ, ಕ್ರೀಡೆ, ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಕಾರ್ಯಕ್ರಮ ಉದ್ಘಾಟನೆ ನೆರವೇರಿಸುವರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಕೋತಿಗುಡ್ಡದ ರಾಜ್ಯಮಟ್ಟದ ವ್ಯಕ್ತಿತ್ವ ವಿಕಸನ ತರಬೇತುದಾರರಾದ ರಮೇಶ್ ಬಲ್ಲೀಸ್ ಅವರು ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡುವರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಟಿ.ಪಾಲಾಕ್ಷ, ಸರ್ಕಾರಿ (ಮಾ.ಪು) ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಪಿ.ನಾಗೇಶ್ವರ ರಾವ್, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ರಮೇಶ್ ಬುಜ್ಜಿ, ಸದಸ್ಯರಾದ ಸಿ.ಸಿದ್ದಣ್ಣ, ರಮೇಶ್ ಗೊಲ್ಲ, ಅರ್ಷದ್ ಅಲಿ ಹಾಗೂ ಮಹಿಳಾ ಸದಸ್ಯರಾದ ಬಿ.ಶ್ರುತಿ ಸೇರಿದಂತೆ ಕಾಲೇಜಿನ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.