ಬಳ್ಳಾರಿ,ಏ.03 :ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಮತ್ತು ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪ ಪ್ರಧಾನಮಂತ್ರಿ ಡಾ.ಬಾಬು ಜಗಜೀವನ್ರಾಮ್ ಅವರ 118 ನೇ ಜನ್ಮ ದಿನೋತ್ಸವ ಕಾರ್ಯಕ್ರಮವನ್ನು ಏ.05 ರಂದು ಮಧ್ಯಾಹ್ನ 01 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ಆಯೋಜಿಸಲಾಗಿದೆ.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ ಅವರು ಘನಉಪಸ್ಥಿತಿ ಇರುವರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಾಸಕರಾದ ಬಿ.ಎಂ.ನಾಗರಾಜ, ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಕರ್ನಾಟಕ ರಾಜ್ಯ ಡಾ.ಬಾಬು ಜಗಜೀವನ್ರಾಮ್ ಜನಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಪಂಪಾಪತಿ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಬಳ್ಳಾರಿ ತಾಲ್ಲೂಕಿನ ಸಂಗನಕಲ್ಲು ಗ್ರಾಮದ ಚಿಂತಕರು ಹಾಗೂ ಲೇಖಕರಾದ ಡಾ.ಬಿ.ಶ್ರೀನಿವಾಸ ಮೂರ್ತಿ ಅವರು ಭಾಷಣಕಾರರಾಗಿ ಭಾಗವಹಿಸುವರು.
ಏ.05 ರಂದು ಬೆಳಿಗ್ಗೆ 09 ಗಂಟೆಗೆ ಡಾ.ಬಾಬು ಜಗಜೀವನ್ ರಾಮ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು.
*ಮೆರವಣಿಗೆ:*
ಬಳಿಕ ನಗರದ ಡಾ.ರಾಜ್ ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಮೈದಾನದಿಂದ ಗಡಿಗಿ ಚೆನ್ನಪ್ಪ ವೃತ್ತ-ಬ್ರೂಸ್ ಪೇಟೆ ಪೊಲೀಸ್ ಠಾಣೆ- ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದವರೆಗೆ ಮೆರವಣಿಗೆ ನಡೆಯಲಿದೆ.
ಬಳ್ಳಾರಿ ವಲಯ ಪೊಲೀಸ್ ಮಹಾನಿರೀಕ್ಷಕರಾದ ಬಿ.ಎಸ್ ಲೋಕೇಶ್ ಕುಮಾರ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್, ಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತರು, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ.ಬಿ ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಸಂಘ-ಸAಸ್ಥೆಗಳ ಪದಾಧಿಕಾರಿಗಳು, ಮುಖಂಡರು ಹಾಗೂ ಸಾರ್ವಜನಿಕರು ಹಾಗೂ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.