ಇಕೆವೈಸಿ ಮಾಡಿರಬೇಕು…
ಕಳೆದ ಒಂದು ವರ್ಷದಿಂದಲೂ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳು ಇಕೆವೈಸಿ ಅಪ್ಡೇಟ್ ಮಾಡುವಂತೆ ಸರ್ಕಾರ ತಿಳಿಸುತ್ತಲೇ ಇದೆ. ಕಳೆದ ಮೂರು ಬಾರಿಯಿಂದಲೂ ಇಕೆವೈಸಿ ಮಾಡದವರಿಗೆ ಯೋಜನೆಯ ಹಣ ಬರುತ್ತಿಲ್ಲ. ನೀವು ಯೋಜನೆಯ ಫಲಾನುಭವಿಗಳಾಗಿದ್ದು, ನಿಮಗೆ ಹಣ ಬರುತ್ತಿಲ್ಲವಾದಲ್ಲಿ ಇಕೆವೈಸಿ ಅಪ್ಡೇಟ್ ಮಾಡಿಲ್ಲದೇ ಇರಬಹುದು. ಒಂದು ವೇಳೆ ಇತ್ತೀಚೆಗೆ ನೀವು ಇಕೆವೈಸಿ ಅಪ್ಡೇಟ್ ಮಾಡಿದ್ದಲ್ಲಿ ನಿಮ್ಮ ಹೆಸರು ಫಲಾನುಭವಿಗಳ ಪಟ್ಟಿಯಲ್ಲಿ ಇದೆಯಾ ಎಂದು ಪರಿಶೀಲಿಸಿ. ಹೇಗೆ ಆ ಪಟ್ಟಿ ನೋಡುವುದು, ಈ ವಿವರ ಕೆಳಗಿದೆ.
- ಪಿಎಂ ಕಿಸಾನ್ ಯೋಜನೆಯ ಅಧಿಕೃತ ವೆಬ್ಸೈಟ್ಗೆ ಹೋಗಿ: pmkisan.gov.in/
- ಮುಖ್ಯಪುಟದಲ್ಲಿ ತುಸು ಕೆಳಗೆ ಸ್ಕ್ರೋಲ್ ಮಾಡಿದರೆ ಫಾರ್ಮರ್ಸ್ ಕಾರ್ನರ್ ಸೆಕ್ಷನ್ ಕಾಣಬಹುದು.
- ಇಲ್ಲಿ ‘ಬೆನಿಫಿಶಿಯರಿ ಲಿಸ್ಟ್’ ಅನ್ನು ಕ್ಲಿಕ್ ಮಾಡಿ
- ಇಲ್ಲಿ ನಿಮ್ಮ ರಾಜ್ಯ, ಜಿಲ್ಲೆ, ತಾಲೂಕು, ಊರನ್ನು ಆಯ್ದುಕೊಂಡು ಗೆಟ್ ರಿಪೋರ್ಟ್ ಕ್ಲಿಕ್ ಮಾಡಿ.
- ಇಲ್ಲಿ ನಿಮ್ಮ ಊರಿನ ಎಲ್ಲಾ ಫಲಾನುಭವಿಗಳ ಪಟ್ಟಿಯನ್ನು ಕಾಣಬಹುದು. ಇದರಲ್ಲಿ ನಿಮ್ಮ ಹೆಸರು ಇದೆಯಾ ಪರಿಶೀಲಿಸಬಹುದು.