ಬೆಂಗಳೂರು,ರಿ,೧೭: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಿರ್ಮಾಣವಾಗಿರುವ ಬೋಯಿಂಗ್ ವಿಮಾನ ತಯಾರಿಕಾ ಸಂಸ್ಥೆ ಕ್ಯಾಂಪಸ್ ಗೆ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ.ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ದೇವನಹಳ್ಳಿಯಲ್ಲಿ ಬೋಯಿಂಗ್ನ ಅತ್ಯಾಧುನಿಕ ಜಾಗತಿಕ ಎಂಜಿನಿಯರಿAಗ್ ಮತ್ತು ತಂತ್ರಜ್ಞಾನ ಆವಿಷ್ಕಾರ ಕ್ಯಾಂಪಸ್ ಅನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ.
ಇದೇ ವೇಳೆ ನಗರದಲ್ಲಿ ರೋಡ್ ಶೋನಲ್ಲಿ ಪ್ರಧಾನಿ ಮೋದಿ ಭಾಗವಹಿಸುವ ಸಾಧ್ಯತೆ ಇದ್ದು, ರಾಜ್ಯ ಬಿಜೆಪಿ ನಾಯಕರು ಪ್ರಧಾನಿ ಕಾರ್ಯಾಲಯದಿಂದ ರೋಡ್ ಶೋಗೆ ಅನುಮತಿಗಾಗಿ ಕಾಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಅದೇ ದಿನ, ತಮಿಳುನಾಡಿನಲ್ಲಿ “ಖೇಲೋ ಇಂಡಿಯಾ” ಉದ್ಘಾಟನಾ ಸಮಾರಂಭದಲ್ಲಿ ಮೋದಿ ಭಾಗವಹಿಸಲಿದ್ದಾರೆ.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಮಾತನಾಡಿ, ಮೋದಿಯವರಿಂದ ರೋಡ್ ಶೋ ಆಯೋಜಿಸಲು ನಾವು ಯೋಜಿಸಿದ್ದೇವೆ ಮತ್ತು ಪ್ರಧಾನಿ ಕಚೇರಿಯ ಅನುಮತಿಗಾಗಿ ಕಾಯುತ್ತಿದ್ದೇವೆ ಎಂದು ಹೇಳಿದರು.