ಬಳ್ಳಾರಿ,ಫೆ.05: ನಗರ ಜೆಸ್ಕಾಂ ಉಪವಿಭಾಗ-2 ರ ಎಫ್-73 ಫೀಡರ್ ವ್ಯಾಪ್ತಿಯಲ್ಲಿ ಸ್ಟ್ರೀಟ್ ಲೈಟ್ ಫೇಸ್ ಲೈನ್ ಅಳವಡಿಸುವ ಕಾಮಗಾರಿ ಕೈಗೆತಿಕೊಳ್ಳುತ್ತಿರುವುದರಿಂದ ಫೆ.07 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ನಗರದ ಬಸವನಕುಂಟೆ, ಕೋಟೆ ಪ್ರದೇಶ, 1 ನೇ ಗೇಟ್, 2 ನೇ ಗೇಟ್, ಸಿದ್ದಾರ್ಥ ನಗರ, ಸುಧಾಕ್ರಾಸ್ ಮತ್ತು ಒ.ಪಿ.ಡಿ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ನಗರ ಜೆಸ್ಕಾಂ ಉಪವಿಭಾಗ-2 ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಶೋಕ ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.