ಬಳ್ಳಾರಿ,ಫೆ.16 : ನಗರದ ಜೆಸ್ಕಾಂ ಉಪ ವಿಭಾಗ-1 ರ ವ್ಯಾಪ್ತಿಗೆ ಬರುವ 220/11ಕೆವಿ ಅಲ್ಲೀಪುರ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಬ್ಯಾಂಕ್-2 ಫೀಡರ್ನ ಎಫ್-36 ರ ತುರ್ತು ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಫೆ.17 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ನಗರ ವ್ಯಾಪ್ತಿಯ ಬಂಡಿಹಟ್ಟಿ, ರಾಮನಗರ, ರೆಡ್ಡಿ ಲೇಔಟ್, ಆಶ್ರಯ ಕಾಲೋನಿ, ಆಜಾದ್ ನಗರ, ಎಂ.ಕೆ.ಫಂಕ್ಷನ್ ಹಾಲ್ ಹತ್ತಿರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.