ಬಳ್ಳಾರಿ,ಏ.16 : ಪ್ರಜಾಪ್ರಭುತ್ವ ಬಲಪಡಿಸುವಲ್ಲಿ ಮತದಾರರು ನೀಡುವ ಒಂದೊಂದು ಮತಗಳು ಅವಶ್ಯವಾಗಿದ್ದು, ಪ್ರತಿಯೊಬ್ಬರೂ ಪ್ರಜಾಪ್ರಭುತ್ವದ ಮತದಾನ ಹಬ್ಬದಲ್ಲಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾ ಸ್ವೀಪ್ ಸಮಿತಿಯ ನೋಡೆಲ್ ಅಧಿಕಾರಿ ಹಾಗೂ ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ ಅವರು ಕರೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಹಿನ್ನಲೆಯಲ್ಲಿ ಮತದಾನ ಜಾಗೃತಿ ಅಭಿಯಾನ ಅಂಗವಾಗಿ ನಗರದ ಜಿಲ್ಲಾ ಪಂಚಾಯತ್ನ ನಜೀರ್ ಸಾಬ್ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಸ್ಪೀಕಥಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮೇ 07 ರಂದು ರಾಜ್ಯದಲ್ಲಿ ಮೂರನೇ ಹಂತದ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಮತದಾನ ನಡೆಯಲಿದ್ದು, ಅಂದು ಯುವ ಸಮುದಾಯ ತಪ್ಪದೇ ಮತದಾನ ಮಾಡಿ ಪ್ರಜಾಪ್ರಭುತ್ವ ಗಟ್ಟಿಗೊಳಿಸಬೇಕು ಎಂದು ಹೇಳಿದರು.
ಉತ್ತಮ ಸಮಾಜ ಹಾಗೂ ಪ್ರಜಾಪ್ರಭುತ್ವದ ಹಿತದೃಷ್ಠಿಗೆ ನಡೆಯಲಿರುವ ಚುನಾವಣೆಗಳಿಗೆ ಎಲ್ಲರ ಸಹಭಾಗಿತ್ವ ಅವಶ್ಯವಾಗಿದ್ದು, ಮತದಾನ ಕುರಿತು ಸಾರ್ವಜನಿಕರು ಜಾಗೃತಿ ಹೊಂದುವ ಕಾರ್ಯ ನಡೆಯಬೇಕಾಗಿದೆ ಎಂದು ಅಭಿಪ್ರಾಯ ಪಟ್ಟರು.
ಮತದಾನ ಒಂದು ಅಸ್ತ್ರವಿದ್ದಂತೆ. ಸಾರ್ವಜನಿಕರಲ್ಲಿ ಮತದಾನದ ಪಾವಿತ್ರ್ಯತೆ, ಆಸೆ ಆಮೀಷಗಳಿಗೆ ಬಲಿಯಾಗದೇ ಉತ್ತಮ ಅಭ್ಯರ್ಥಿಗಳ ಆಯ್ಕೆ ಮಾಡುವ ವಿವೇಚನೆ ಬೆಳೆಸುವಲ್ಲಿ ಜಿಲ್ಲಾ ಸ್ವೀಪ್ ಸಮಿತಿಯು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ನೈತಿಕ, ಆಮೀಷ ರಹಿತ ಮತ್ತು ನಿರ್ಭೀತಿಯ ಮತದಾನದ ಜಾಗೃತಿಗಾಗಿ ಈಗಾಗಲೇ ತಾಲ್ಲೂಕು ಮಟ್ಟದಲ್ಲಿ ಸ್ಪೀಕಥಾನ್ ಸ್ಪರ್ಧೆ ಆಯೋಜಿಸಲಾಗಿತ್ತು. ಅದರಲ್ಲಿ ವಿಜೇತರಾದವರಿಗೆ ಜಿಲ್ಲಾ ಮಟ್ಟದ ಸ್ಪೀಕಥಾನ್ ಸ್ಪರ್ಧೆ ಹಮ್ಮಿಕೊಂಡಿದೆ ಎಂದು ತಿಳಿಸಿದರು.
ಜಿಲ್ಲಾ ಮಟ್ಟದ ಸ್ಪೀಕಥಾನ್ ಸ್ಪರ್ಧೆಯಲ್ಲಿ ‘ಮತದ ಶಕ್ತಿಯನ್ನು ತಿಳಿಯಿರಿ’, ‘ಮತ- ಮಾರಾಟಕ್ಕಲ್ಲ’, ‘ನಿಮ್ಮ ಮತ-ನಿಮ್ಮ ಜೀವನ’, ‘ನೋಟಾ’, ‘ಇಸಿಐಯ ಐಸಿಟಿ ಅಪ್ಲಿಕೇಶನ್’ (ಸಿ-ವಿಜಿಲ್, ಸಾಕ್ಷ್ಯಂ, ಕೆವೈಸಿ, ವೋಟರ್ ಹೆಲ್ಪ್ಲೈನ್) ಕುರಿತ ವಿಷಯಗಳನ್ನು ನೀಡಲಾಗಿತ್ತು. 3 ನಿಮಿಷÀ ಕಾಲಾವಧಿಯಲ್ಲಿ ಕನ್ನಡ, ಹಿಂದಿ ಮತ್ತು ಇಂಗ್ಲೀಷ್ ಭಾಷÉಯಲ್ಲಿ ವಿಷÀಯ ಪ್ರಸ್ತುತ ಪಡಿಸಲು ಅವಕಾಶ ಕಲ್ಪಿಸಲಾಗಿತ್ತು.
ತೀರ್ಪುಗಾರರಾಗಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯ ವಿಷಯ ಪರಿವೀಕ್ಷಕರಾದ ವೇದಾವತಿ.ಕೆ., ಸರ್ಕಾರಿ (ಮಾ.ಪು) ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ನಾಗಿರೆಡ್ಡಿ ಅವರು ಇದ್ದರು.
ಕಾರ್ಯಕ್ರಮದಲ್ಲಿ ಮತದಾರರ ಪ್ರತಿಜ್ಞಾ ವಿಧಿಯನ್ನು ಸ್ವೀಕಾರ ಮಾಡಲಾಯಿತು. ಕಾರ್ಯಕ್ರಮದಲ್ಲಿ ತಾಲ್ಲೂಕು ಮಟ್ಟದ ಸ್ಪೀಕಥಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಜೇತರಾದವರಿಗೆ ನೆನಪಿನ ಕಾಣಿಕೆ ಮತ್ತು ಪ್ರಶಸ್ತಿ ಪತ್ರ ವಿತರಣೆ ಮಾಡಲಾಯಿತು.
ಜಿಲ್ಲಾ ಮಟ್ಟದಲ್ಲಿ ವಿಜೇತರಾದವರಿಗೆ ಕ್ರಮವಾಗಿ ನೆನಪಿನ ಕಾಣಿಕೆ ಮತ್ತು ಪ್ರಶಸ್ತಿ ಪತ್ರ ವಿತರಣೆ ಮಾಡಲಾಯಿತು.
ವಿಜೇತರ ಪಟ್ಟಿ:
30 ವರ್ಷಕ್ಕಿಂತ ಕೆಳಗಿನ ವಿಭಾಗ:
ಪ್ರಥಮ – ಅಮರನಾಥ (ಬಳ್ಳಾರಿ)
ದ್ವಿತೀಯ – ಮಹಬ್ ಜಾನ್.ಬಿ (ಸಿರುಗುಪ್ಪ)
ತೃತೀಯ – ಸಾಜ್ಜಿನ್ ತಾಜ್ (ಸಂಡೂರು)
30 ವಷರ್À ಮೇಲ್ಪಟ್ಟ ವಿಭಾಗ:
ಪ್ರಥಮ – ಲವಕುಮಾರ್ (ಬಳ್ಳಾರಿ)
ದ್ವಿತೀಯ – ರಾಜು.ಬಿ (ಕಂಪ್ಲಿ)
ತೃತೀಯ – ಪಾಂಡುರಂಗ (ಸಿರುಗುಪ್ಪ)
ಈ ಸಂದರ್ಭದಲ್ಲಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವ ವಿದ್ಯಾಲಯದ ಕುಲಸಚಿವ ಎಸ್.ಎನ್.ರುದ್ರೇಶ್, ಮಹಾನಗರ ಪಾಲಿಕೆಯ ಆಯುಕ್ತ ಜಿ.ಖಲೀಲ್ ಸಾಬ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಗಿರಿಜಾ ಶಂಕರ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ವಾಗೀಶ್ ಶಿವಾಚಾರ್ಯ ಸೇರಿದಂತೆ ಜಿಲ್ಲಾ ಪಂಚಾಯತ್ನ ಅಧಿಕಾರಿಗಳು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.