ಬೆAಗಳೂರು,ಜ,೧೭: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಗೊಳ್ಳಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಮತ್ತು ಸಂಗೊಳ್ಳಿ ರಾಯಣ್ಣ ಸ್ಮಾರಕ ಭವನ ಮತ್ತು ಭೋಜನಾಲಯ ವನ್ನು ಉದ್ಘಾಟಿಸಿದರು. ರೇವಣಸಿದ್ದೇಶ್ವರ ಸಿಂಹಾಸನಾಧಿಶ್ವರ ನಿರಂಜನಾನAದಪುರಿ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಬೈರತಿ ಸುರೇಶ್, ಶಿವರಾಜ್ ತಂಗಡಗಿ ಜತೆಗೆ ಶಾಸಕರಾದ ಮಹಂತೇಶ್ ಕೌಜಲಗಿ, ಎಚ್.ವೈ.ಮೇಟಿ, ಮಾಜಿ ಸಚಿವ ಎಚ್.ಎಂ.ರೇವಣ್ಣ, ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.