ಬಳ್ಳಾರಿ,ಮಾ. 10 : ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘವು ಕೊಡಮಾಡುವ ‘ ಕೆಯು ಡಬ್ಲ್ಯೂ ಜೆ ವಿಶೇಷ ಪ್ರಶಸ್ತಿಗೆ, ಇಲ್ಲಿನ ಹಿರಿಯ ಪತ್ರಕರ್ತ, ಸಾಕ್ಷಿ ಎನ್.ಗುರುಶಾಂತ್ ಅವರು ಭಾಜನರಾಗಿದ್ದಾರೆ. ಕಳೆದ 29 ವರ್ಷಗಳಿಂದ ವಾರ್ತಾ,
ಆoದ್ರಜ್ಯೋತಿ ಹಾಗೂ ಸಾಕ್ಷಿ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದು, ಸದ್ಯ ತಮ್ಮ ಸೇವೆಯನ್ನು ಸಾಕ್ಷಿ ಪತ್ರಿಕೆಯಲ್ಲಿ ಮುಂದುವರೆಸಿದ್ದಾರೆ.
ಇವರ ಸುಧೀರ್ಘ ಸೇವೆಯನ್ನು ಗುರುತಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘವು 2024 – 25ನೇ ಸಾಲಿನ ಕೆಯು ಡಬ್ಲ್ಯೂ ಜೆ ವಿಶೇಷ ಪ್ರಶಸ್ತಿಗೆ ಆಯ್ಕೆಮಾಡಿರುತ್ತಾರೆ , ಮಾ.9 ರಂದು ಕೊಪ್ಪಳ ನಗರದ ಪಾನಗoಟಿ ಕಲ್ಯಾಣ ಮಂಟಪದಲ್ಲಿ ನಡೆದ ಸಮಾರಂಭದಲ್ಲಿ ಗಣ್ಯರು ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್,
ಕಾನಿಪ ರಾಜ್ಯಾಧ್ಯಕ್ಷ ಶಿವಾನಂದ್ ತಗಡೂರು, ರಾಜ್ಯ ಪ್ರಧಾನ ಕಾರ್ಯದರ್ಶಿ ಲೋಕೇಶ್, ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು.
ಪ್ರಶಸ್ತಿ ಸ್ವೀಕರಿಸಿ ತಮ್ಮ ಅನಿಸಿಕೆಯನ್ನು ತಿಳಿಸಿದ ಗುರುಶಾಂತ್ ಜಿಲ್ಲಾ ಕಾನಿಪ ಸಂಘದಲ್ಲಿ ಜಿಲ್ಲಾ ಕಾರ್ಯಕಾರಣಿ ಸದಸ್ಯರು, ಎರಡು ಬಾರಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಜಿಲ್ಲಾ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ, ಹಿರಿಯ ಪತ್ರಕರ್ತ ಎನ್.ಗುರುಶಾಂತ್ ಅವರನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಿದ, ಕಾನಿಪ ಸಂಘದ ರಾಜ್ಯಾಧ್ಯಕ್ಷ ಶಿವಾನಂದ್ ತಗಡೂರು ಅವರಿಗೆ ಹಾಗೂ ರಾಜ್ಯ ಸಮಿತಿ, ಬಳ್ಳಾರಿ ಜಿಲ್ಲಾ ಸಮಿತಿಯ ಎಲ್ಲ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.