ಚಿತ್ರದುರ್ಗ: ಸಚಿವ ಸಂತೋಷ ಲಾಡ್ ನೇತೃತ್ವದಲ್ಲಿ ಬಳ್ಳಾರಿಯ ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿಯಾದ ತುಕರಾಂ ಅವರು ಶ್ರೀಗಳ ಆಶೀರ್ವಾದ ಆಪೇಕ್ಷಿಸಿ ಚಿತ್ರದುರ್ಗ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠಕ್ಕೆ ಭೇಟಿ ನೀಡಿದರು.
ಸಚಿವರ ನಿಯೋಗ ಭೇಟಿಯು ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಕುಂಚಿಟಿಗ ಗುರುಪೀಠದ ಶ್ರೀ ಶಾಂತವೀರ ಸ್ವಾಮೀಜಿ, ವಾಲ್ಮೀಕಿ ಗುರುಪೀಠದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಭಗೀರಥ ಗುರುಪೀಠದ ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಯಾದವ ಗುರುಪೀಠದ ಶ್ರೀ ಕೃಷ್ಣ ಯಾದವಾನಂದ ಸ್ವಾಮೀಜಿ, ಮಡಿವಾಳ ಗುರುಪೀಠದ ಶ್ರೀ ಬಸವ ಮಾಚಿದೇವ ಸ್ವಾಮೀಜಿ, ಈಡಿಗ ಗುರುಪೀಠದ ಶ್ರೀ ರೇಣುಕಾನಂದ ಸ್ವಾಮೀಜಿ, ಹಡಪದ ಗುರುಪೀಠದ ಶ್ರೀ ಅನ್ನದಾನಿ ಭಾರತಿ ಅಪ್ಪಣ್ಣ ಸ್ವಾಮೀಜಿ, ಕುಂಬಾರ ಗುರುಪೀಠದ ಶ್ರೀ ಬಸವ ಕುಂಬಾರ ಗುಂಡಯ್ಯ ಸ್ವಾಮೀಜಿ, ಶಿವಶಕ್ತಿ ಗುರುಪೀಠದ ಶ್ರೀ ಬಸವಪ್ರಸಾದ ಸ್ವಾಮೀಜಿ, ಪಾರಮಾರ್ಥಿಕ ಗವಿಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ಕೊರಟಗೆರೆ ಅನ್ನಪೂರ್ಣೇಶ್ವರಿ ಮಠದ ಶ್ರೀ ಬಸವ ಮಹಾಲಿಂಗ ಸ್ವಾಮೀಜಿ, ಬಸವಕಲ್ಯಾಣ ಶ್ರೀ ಸತ್ಯಕ್ಕ ತಾಯಿ, ಪೂಜ್ಯರ ಆಶೀರ್ವಾದ ಪಡೆದರು.ಈ ಸಂದರ್ಭದಲ್ಲಿ ಬಳ್ಳಾರಿ ಲೋಕಸಭಾ ಕ್ಷೇತ್ರದ ಸರ್ವಧರ್ಮಿಯರು ಉಪಸ್ಥಿತರಿದ್ದರು.