ಬಳ್ಳಾರಿ,ಮಾ.25 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಯೋಗಿನಾರೇಯಣ ಯತೀಂದ್ರರ(ಕೈವಾರ ತಾತಾಯ್ಯ) ಜಯಂತಿಯನ್ನು ಸೋಮವಾರ ಸರಳವಾಗಿ ಆಚರಿಸಲಾಯಿತು.
ಲೋಕಸಭೆ ಸಾರ್ವತ್ರಿಕ ಚುನಾವಣೆ-2024ರ ಅಂಗವಾಗಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ನಗರದ ಡಾ.ರಾಜ್ಕುಮಾರ್ ರಸ್ತೆಯ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಹೊಂಗಿರಣ ಭವನದಲ್ಲಿ ಶ್ರೀ ಯೋಗಿನಾರೇಯಣ ಯತೀಂದ್ರರ(ಕೈವಾರ ತಾತಾಯ್ಯ) ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಸರಳ ಹಾಗೂ ಸಾಂಕೇತಿಕವಾಗಿ ಆಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ತಹಶೀಲ್ದಾರ ಗುರುರಾಜ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಮತ್ತು ಸಮಾಜದ ಮುಖಂಡರು ಉಪಸ್ಥಿತರಿದ್ದರು