ಬಳ್ಳಾರಿ :ಬಳ್ಳಾರಿ, ಕುರುಗೋಡು, ಕಂಪ್ಲಿ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಒಳಪಡುವ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ/ಬಾಲಕಿಯರ ವಿದಾರ್ಥಿ ನಿಲಯಗಳ ಪ್ರವೇಶಾತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಫೆ.20ರ ವರೆಗೆ ವಿಸ್ತರಿಸಲಾಗಿದೆ ಎಂದು ಸಮಾಕ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಪರಿಶಿಷ್ಠ ಜಾತಿ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ/ಬಾಲಕೀಯರ ವಿದ್ಯಾರ್ಥಿ ನಿಲಯಗಳಿಗೆ ಇಂಜಿನೀಯರಿಂಗ್, ಮೆಡಿಕಲ್, ಬಿ.ಎಡ್, ಪ್ಯಾರಾ ಮೆಡಿಕಲ್, ಸ್ನಾತ್ತಕೋತ್ತರ ಕೋರ್ಸ್ಗಳು ಪ್ರಾರಂಭವಾದ ಹಿನ್ನಲೆಯಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದ್ದು, ಪ್ರವೇಶಾತಿ ಪಡೆಯಲು ಸಮಾಜ ಕಲ್ಯಾಣ ಇಲಾಖೆಯ ವೆಬ್ಸೈಟ್ನಲ್ಲಿ ಅರ್ಜಿ ಸಲ್ಲಿಸಿದ ನಂತರ ಸ್ವೀಕೃತಿಯೊಂದಿಗೆ ಅಗತ್ಯ ದಾಖಲಾತಿಗಳನ್ನು ಕೌಲ್ಬಜಾರ್ ಮೊದನಲೇ ಗೇಟ್ ಹತ್ತಿರದ ಡಾ.ಬಿ.ಆರ್.ಅಂಬೇಡ್ಕರ್ ಭವನದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಅಥವಾ ನಿಲಯಗಳ ಮೇಲ್ವಿಚಾರಕರಿಗೆ ಸಲ್ಲಿಸಬೇಕು ಎಂದು ಅವರು ತಿಳಿಸಿದ್ದಾರೆ.