ಹೊಸಪೇಟೆ (ವಿಜಯನಗರ) ಜುಲೈ 02 : ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳಲ್ಲಿ ನೊಂದವರಿಗೆ ಸೂಕ್ತ ನೆರವನ್ನು ಒದಗಿಸುವ ನಿಟ್ಟಿನಲ್ಲಿ 1993ರ ಮಾನವ ಹಕ್ಕುಗಳ ಸಂರಕ್ಷಣಾ ಅಧಿನಿಯಮದ ಅಡಿಯಲ್ಲಿ ಸ್ಥಾಪಿತವಾಗಿರುವ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗವು ಜುಲೈ 11 ರಂದು ವಿಜಯನಗರ ಜಿಲ್ಲೆ (ಹೊಸಪೇಟೆ)ಯಲ್ಲ್ಲಿ ಸಿಟ್ಟಿಂಗ್ಸ್ ನಡೆಸಲು ಉದ್ದೇಶಿಸಿರುತ್ತದೆ.
ಈ ಸಂದರ್ಭದಲ್ಲಿ ವಿಜಯನಗರ (ಹೊಸಪೇಟೆ) ಜಿಲ್ಲೆಗೆ ಸಂಬAಧಿಸಿದAತೆ ಆಯೋಗದಲ್ಲಿ ನೋಂದಣಿಯಾಗಿರುವ ಪ್ರಕರಣಗಳನ್ನು ಇತ್ಯರ್ಥಪಡಿಸಿ, ವಿಲೇ ಮಾಡಲು ಕ್ರಮ ಜರುಗಿಸಲು ಉದ್ದೇಶಿಸಲಾಗಿದೆ. ದೂರುದಾರರು ಹಾಗೂ ಪ್ರತಿವಾದಿ ಪ್ರಾಧಿಕಾರಗಳು ಈ ಸೌಲಭ್ಯದ ಸದುಪಯೋಗಪಡಿಸಿಕೊಳ್ಳಬೇಕೆಂದು ತಿಳಿಸಲಾಗಿದೆ.
ಮಾನವ ಹಕ್ಕು ಉಲ್ಲಂಘನೆ ಪ್ರಕರಣಗಳಿಗೆ ಸಂಬAಧಿಸಿದAತೆ ವಿಜಯನಗರ ಜಿಲ್ಲೆಯಲ್ಲಿನ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಜುಲೈ 11ರಂದು ಸಾರ್ವಜನಿಕರಿಂದ ದೂರುಗಳು/ಅಹವಾಲುಗಳನ್ನು ಸಹ ಸ್ವೀಕರಿಸಲು ಉದ್ದೇಶಿಸಲಾಗಿದೆ. ಸಾರ್ವಜನಿಕರು ಜುಲೈ 11ರಂದು ಆಯೋಗದ ಹಂಗಾಮಿ ಅಧ್ಯಕ್ಷರು ಹಾಗೂ ಸದಸ್ಯರನ್ನು ಸಂಪರ್ಕಿಸಿ ದೂರುಗಳನ್ನು ಸಲ್ಲಿಸಬಹುದು ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಕಾರ್ಯದರ್ಶಿ ಎ ದಿನೇಶ್ ಸಂಪತ್ರಾಜ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.