ಬಳ್ಳಾರಿ, ಮಾ.19 : ಲೋಕಸಭೆ ಸಾರ್ವತ್ರಿಕ ಚುನಾವಣೆ 2024ರ ಚುನಾವಣೆಯನ್ನು ಮುಕ್ತ, ನ್ಯಾಯ ಸಮ್ಮತ, ಪಾರದರ್ಶಕ ಮತ್ತು ಶಾಂತಿಯುತವಾಗಿ ನಡೆಸಲು ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷಗಳು ಸಹಕರಿಸಬೇಕು ಹಾಗೂ ಹಣದ ದುರುಪಯೋಗ, ಸಾರ್ವಜನಿಕರಿಗೆ ಆಸೆ, ಆಮಿಷಗಳಿಗೆ ಒಳಪಡಿಸುವಂತಿಲ್ಲ ಎಂದು ಜಿಲ್ಲಾ ಚುನಾವಣಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಸೂಚನೆ ನೀಡಿದ್ದಾರೆ.
ಚುನಾವಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಯಾವುದೇ ವ್ಯಕ್ತಿಗೆ ಲಂಚ ನೀಡಬಾರದು ಅಥವಾ ಹಣವನ್ನು ಬಳಸಿ ಲಂಚ ನೀಡಲು ಪ್ರಯತ್ನಿಸಬಾರದು. ಚುನಾವಣೆಯ ಮೇಲೆ ಪ್ರಭಾವ ಬೀರುವ ಸಲುವಾಗಿ ಸರಕುಗಳು, ಬೆಲೆಬಾಳುವ ವಸ್ತುಗಳು, ಉಡುಗೊರೆಗÀಳು, ಮದ್ಯ, ಇಂಧನ ಇತ್ಯಾದಿ ಬೆಲೆಬಾಳುವ ವಸ್ತುಗಳನ್ನು ಸಾಗಾಣೆ ಅಥವಾ ಶೇಖರಣೆ ಮಾಡುವಂತಿಲ್ಲ.
ಈಗಾಗಲೇ ಜಿಲ್ಲೆಯಲ್ಲಿ ಸರ್ವೇಲೆನ್ಸ್ ತಂಡಗಳು, ಚೆಕ್ ಪೆÇೀಸ್ಟ್ ಹಾಗೂ ವಿಡಿಯೊ ಕಣ್ಗಾವಲು ತಂಡಗಳು, ಫ್ಲೈಯಿಂಗ್ ಸ್ಕ್ವ್ಯಾಡ್ ತಂಡಗಳು ಕಾರ್ಯನಿರ್ವಹಿಸುತ್ತಿವೆ. ವಿವರಣಾತ್ಮಕ ಮತ್ತು ದೃಢೀಕರಿಸುವ ದಾಖಲೆಗಳಿಲ್ಲದೇ ರೂ.50 ಸಾವಿರಕ್ಕಿಂತ ಹೆಚ್ಚಿನ ಹಣವನ್ನು ಸಾಗಿಸುವಂತಿಲ್ಲ.
ಚುನಾವಣೆಯ ನಿಯಮಾವಳಿ ಉಲ್ಲಂಘಿಸಿದಲ್ಲಿ ಐಪಿಸಿ ಸೆಕ್ಷನ್ 188 ಅಡಿಯಲ್ಲಿ ಅಪರಾಧವೆಂದು ಪರಿಗಣಿಸಿ, ಕಾನೂನು ಕ್ರಮ ಜರುಗಿಸಲಾಗಿಸುತ್ತದೆ ಎಂದು ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಧ್ವನಿವರ್ಧಕಗಳ ಮೇಲೆ ನಿರ್ಬಂಧ :
ಲೋಕಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲೆಯಲ್ಲಿ ಧ್ವನಿ ವರ್ಧಕಗಳು, ಸಾರ್ವಜನಿಕ ಸ್ಥಳಗಳಲ್ಲಿ ಪಟಾಕಿ ಸಿಡಿಸುವುದು ಮತ್ತು ಸಂಗೀತ ವಾದ್ಯಗಳ ಧ್ವನಿವರ್ಧಕಗಳÀನ್ನು ಬಳಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯಾದ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.
ಲೌಡ್ ಸ್ಪೀಕರ್ಗಳು, ಧ್ವನಿ ವರ್ಧಕಗಳನ್ನು ಬಳಸಲು ಆಯಾ ವ್ಯಾಪ್ತಿಯ ನಿಗದಿಪಡಿಸಿದ ಪ್ರಾಧಿಕಾರದಿಂದ ಲಿಖಿತ ಅನುಮತಿಯನ್ನು ಪಡೆಯಬೇಕು. ಯಾವುದೇ ಪರವಾನಗಿ ಇಲ್ಲದೇ ಧ್ವನಿವರ್ಧಕಗಳನ್ನು ಬಳಸಿದಲ್ಲಿ ಅಂತಹ ವಾಹನ ಮತ್ತು ಉಪಕರಣಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುತ್ತದೆ. ಪರವಾನಿಗೆ ಇಲ್ಲದೇ ಅಳವಡಿಸಲಾಗಿರುವ ಧ್ವನಿವರ್ಧಕಗಳನ್ನು ಸ್ವಯಂಪ್ರೇರಣೆಯಿಂದ ಹಿಂಪಡೆಯಬೇಕು. ಧ್ವನಿವರ್ಧಕಗಳನ್ನು ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 06 ಗಂಟೆಯೊಳಗಿನ ಅವಧಿಯಲ್ಲಿ ಬಳಸುವಂತಿಲ್ಲ ಎಂದು ಅವರು ತಿಳಿಸಿದ್ದಾರೆ.
ಯಾವುದೇ ಧ್ವನಿವರ್ಧಕ ಬಳಸುವ ವಾಹನ ಮತ್ತು ಯಾವುದೇ ಪ್ರದೇಶದಲ್ಲಿ ಪಟಾಕಿ ಸಿಡಿಸುವ ಉದ್ದೇಶವಿದ್ದಲ್ಲಿ ಅನುಮತಿ ಕಡ್ಡಾಯವಾಗಿದೆ. ಈ ಬಗ್ಗೆ ಸ್ಥಳೀಯ, ಆಯಾ ವ್ಯಾಪ್ತಿ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಕ್ಷೇತ್ರ ಚುನಾವಣಾಧಿಕಾರಿಗಳಿಗೆ ಪರವಾನಿಗೆಯನ್ನು ಪ್ರದರ್ಶಿಸಬೇಕಾಗುತ್ತದೆ.
ಎಲ್ಲಾ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಮತ್ತು ವಾಹನಗಳು, ಸರಕು ವಾಹನಗಳು, ಆಟೋಗಳು ಧ್ವನಿವರ್ಧಕಗಳನ್ನು ಬಳಸುವಾಗ ಇದನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು.
ಪರವಾನಿಗೆ ಪಡೆಯುವ ವೇಳೆ ಸಂಬಂಧಿಸಿದವರ ಗುರುತಿನ ಪತ್ರ ಮತ್ತು ವಾಹನಗಳ ದಾಖಲೆಗಳ ಪತ್ರಗಳನ್ನು ಸಲ್ಲಿಸಬೇಕು ಮತ್ತು ಎಲ್ಲಾ ವಿಧವಾದ ಧ್ವನಿ ವರ್ಧಕಗಳ ಬಳಕೆಯ ಅವಧಿಯು ಮತದಾನ ಮುಕ್ತಾಯಕ್ಕೆ 48 ಗಂಟೆಗಳ ಮೊದಲು ಕೊನೆಗೊಳ್ಳಲಿದೆ.
ಈ ಆದೇಶವನ್ನು ಉಲ್ಲಂಘನೆ ಮಾಡಿದಲ್ಲಿ ಐಪಿಸಿ ಸೆಕ್ಷನ್ 188 ಅಡಿಯಲ್ಲಿ ಅಪರಾಧ ಎಂದು ಪರಿಗಣಿಸಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಈ ಆದೇಶವು ಇಡೀ ಬಳ್ಳಾರಿ ಜಿಲ್ಲೆಯಾದ್ಯಂತ ಅನ್ವಯಿಸಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ಸಾರ್ವಜನಿಕ ಆಸ್ತಿ, ತೆರೆದ ಸ್ಥಳಗ ಳನ್ನು ವಿರೂಪಗೊಳಿಸದಂತೆ ಕಟ್ಟುನಿಟ್ಟಿನ ಆದೇಶ :
ಲೋಕಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಜಿಲ್ಲೆಯಲ್ಲಿ ಸಾರ್ವಜನಿಕ ಆಸ್ತಿಯನ್ನಾಗಲೀ ಮತ್ತು ಸಾರ್ವಜನಿಕ ಪ್ರದೇಶಗಳಲ್ಲಿ ಸಾರ್ವಜನಿಕವಾಗಿ ಕಾಣುವಂತೆ ಗೋಡೆ ಬರಹ, ಜಾಹೀರಾತು ಪೋಸ್ಟರ್ ಆಳವಡಿಕೆ ಸೇರಿದಂತೆ ಇನ್ನಿತರೆ ಫಲಕಗಳನ್ನು ಹಾಕುವ ಮೂಲಕ ಸಾರ್ವಜನಿಕ ಆಸ್ತಿ-ಪಾಸ್ತಿ ವಿರೂಪಗೊಳಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿದ್ದಾರೆ.
ಸಾರ್ವಜನಿಕ ಪ್ರದೇಶಗಳ ಮೇಲೆ ಅಧಿಕಾರ ಹೊಂದಿರುವ ಸ್ಥಳೀಯ ಪ್ರಾಧಿಕಾರದಿಂದ ಲಿಖಿತ ಅನುಮತಿಯಿಲ್ಲದೇ ಯಾವುದೇ ತರಹದ ಗೋಡೆ ಬರಹ, ಜಾಹೀರಾತು ಪೋಸ್ಟರ್ ಅಳವಡಿಸುವಂತಿಲ್ಲ ಮತ್ತು ಸಾರ್ವಜನಿಕ ವೀಕ್ಷಣೆಗೆ ತೆರೆದಿರುವ ಯಾವುದೇ ಸ್ಥಳಗಳಲ್ಲಿ ಅಂಟಿಸಬಾರದು ಮತ್ತು ಕೆತ್ತನೆ ಮಾಡುವಂತಿಲ್ಲ. ಇಂತಹÀ ಕೃತ್ಯಗಳಿಗೆ ಕುಮ್ಮಕ್ಕು ಅಥವಾ ಸಲಹೆ ನೀಡಿದರೆ ಅಂತಹವರನ್ನು ಆರು ತಿಂಗಳು ಕಾರಾಗೃಹ ಶಿಕ್ಷೆ ಸೇರಿದಂತೆ ದಂಡ ವಿಧಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳ ಚುನಾವಣೆ ಪ್ರಚಾರದಿಂದ ಇಂತಹ ವಿರೂಪಗಳು ಹೆಚ್ಚಾಗುವ ಸಾಧ್ಯತೆಯಿದ್ದು, ಸ್ಥಳೀಯ ಪ್ರಾಧಿಕಾರದ ಪರವಾನಿಗೆ ಇಲ್ಲದೇ ಯಾವುದೇ ತರಹದ ಜಾಹೀರಾತುಗಳನ್ನು ಸಾರ್ವಜನಿಕ ವೀಕ್ಷಣೆಗೆ ತೆರೆದಿರುವ ಯಾವುದೇ ಸ್ಥಳಗಳಲ್ಲಿ ಪ್ರದರ್ಶಿಸುವಂತಿಲ್ಲ. ಸಾರ್ವಜನಿಕ, ಖಾಸಗಿ ಕಟ್ಟಡಗಳು ಮತ್ತು ಇತರ ತೆರೆದ ಸ್ಥಳಗಳ ಗೋಡೆಗಳ ಮೇಲೆ ಬರೆದು ಅಥವಾ ಭಿತ್ತಿಪತ್ರಗಳನ್ನು ಬರೆದು ವಿರೂಪಗೊಳಿಸುವುದನ್ನು ನಿಷೇಧಿಸಲಾಗಿದೆ.
ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಆರು ತಿಂಗಳವರೆಗೆ ಹಾಗೂ ವಿಸ್ತರಿಸಬಹುದಾದಂತಹ ದಂಡನೆಗೆ ಗುರಿ ಪಡಿಸಲಾಗುತ್ತದೆ.
ಈ ಆದೇಶವು ಇಡೀ ಜಿಲ್ಲೆಗೆ ಅನ್ವಯಿಸಲಿದ್ದು, ಚುನಾವಣಾ ಪ್ರಕ್ರಿಯೆಯು ಪೂರ್ಣಗೊಳ್ಳುವವರೆಗೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ಚುನಾವಣಾ ಕರಪತ್ರ, ಪೋಸ್ಟರ್ ಮುದ್ರಣ ಮೇಲೆ ನಿರ್ಬಂಧ :
ಲೋಕಸಭೆ ಸಾರ್ವತ್ರಿಕ ಚುನಾವಣೆ ಸಂಬಂಧ ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನಲೆಯಲ್ಲಿ ಚುನಾವಣಾ ಕರಪತ್ರಗಳು ಮತ್ತು ಪೆÇೀಸ್ಟರ್ಗಳ ಮುದ್ರಣ ಮತ್ತು ಪ್ರಕಟಣೆಯ ಮೇಲೆ ಅಪಪ್ರಚಾರ ಕುರಿತಂತೆ ಸುಳ್ಳು ಮಾಹಿತಿಯನ್ನು ಮುದ್ರಿಸದಂತೆ ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ನಿರ್ಬಂಧಿಸಿ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಯಾವುದೇ ರೀತಿಯ ರಾಜಕೀಯ ಮತಪ್ರಚಾರ ಮತ್ತು ಕೋಮುಗಲಭೆ ಸೃಷ್ಟಿಸುವಂತಹ, ದ್ವೇಷ ಭಾವನೆಗಳನ್ನು ಕೆರಳಿಸುವಂತಹ ಬ್ಯಾನರ್ಗಳಾಗಲೀ, ಹೋರ್ಡಿಂಗ್ಸ್ಗಳಾಗಲೀ ಮತ್ತು ಕರಪತ್ರಗಳನ್ನಾಗಲೀ ಮುದ್ರಿಸುವಂತಿಲ್ಲ. ಮುದ್ರಿಸಲಾದ ಅಥವಾ ಬಹು-ಗ್ರಾಫ್ ಮಾಡಲಾದ ಪ್ರತಿಯೊಂದು ಚುನಾವಣಾ ಕರಪತ್ರ, ಫಲಕ, ಭಿತ್ತಿಪತ್ರ ಅಥವಾ ಪೆÇೀಸ್ಟರ್ ಮುಂಭಾಗದಲ್ಲಿ ಮುದ್ರಕನ ಹೆಸರು ಮತ್ತು ವಿಳಾಸ ಮತ್ತು ಪ್ರಕಾಶಕರ ಹೆಸರು, ವಿಳಾಸವನ್ನು ಕಡ್ಡಾಯವಾಗಿ ಹೊಂದಿರಬೇಕು. ಅಂತಹ ಯಾವುದೇ ಡಾಕ್ಯುಮೆಂಟ್ನ ಮುದ್ರಣವು ಉದ್ದೇಶಿತ ಪ್ರಕಾಶಕರಿಂದ ಸಹಿ ಮಾಡಲ್ಪಟ್ಟ ಮತ್ತು ಅವನು ವೈಯಕ್ತಿಕವಾಗಿ ತಿಳಿದಿರುವ ಇಬ್ಬರು ವ್ಯಕ್ತಿಗಳಿಂದ ದೃಢೀಕರಿಸಲ್ಪಟ್ಟ ಅವನ ಗುರುತಿನ ಘೋಷಣೆಯನ್ನು ದ್ವಿ ಪ್ರತಿಯಲ್ಲಿ (ನಕಲಿನಲ್ಲಿ) ಪಡೆಯಬೇಕು. ಮುದ್ರಣ ಘೋಷಣೆಯ ಒಂದು ಪ್ರತಿಯನ್ನು ಮತ್ತು ದಾಖಲೆಯ ಒಂದು ಪ್ರತಿಯನ್ನು ಮುದ್ರಿಸಿರುವ ಜಿಲ್ಲೆಯ ಜಿಲ್ಲಾ ಮ್ಯಾಜಿಸ್ಟ್ರೇಟ್ಗೆ ಸಲ್ಲಿಸಬೇಕು ಎಂದು ಅವರು ತಿಳಿಸಿದ್ದಾರೆ.
ಯಾವುದೇ ನಿಬಂಧನೆಗಳನ್ನು ಉಲ್ಲಂಘಿಸಿದರೆ ಐಪಿಸಿ ಸೆಕ್ಷನ್ 188 ಅಡಿ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗುವುದು ಎಂದು ಡಿಸಿ ಪ್ರಶಾಂತ್ ಕುಮಾರ್ ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.