ಬಳ್ಳಾರಿ,ಆ.15 : ಸ್ವಾತಂತ್ರö್ಯ ಹೋರಾಟಗಾರರ ತ್ಯಾಗ-ಬಲಿದಾನಗಳಿಂದ ಲಭಿಸಿದಂತಹ ಸ್ವಾತಂತ್ರö್ಯದ ಹಬ್ಬವು ದೇಶದಲ್ಲಿ ಜಾತಿ, ಧರ್ಮ ಎಲ್ಲೆ ಮೀರಿ ಆಚರಿಸುವ ಹಬ್ಬವಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಹೇಳಿದರು.
ಜಿಲ್ಲಾಡಳಿತದಿಂದ ನಗರದ ವಿಮ್ಸ್ ಮೈದಾನದಲ್ಲಿ ಗುರುವಾರ ಏರ್ಪಡಿಸಿದ್ದ 78ನೇ ಸ್ವಾತಂತ್ರೋತ್ಸವದ ಧ್ವಜಾರೋಹಣಾ ನೆರವೇರಿಸಿ, ಸ್ವಾತಂತ್ರೊö್ಯÃತ್ಸವದ ಸಂದೇಶ ನೀಡಿ ಅವರು ಮಾತನಾಡಿದರು.
ರಾಷ್ಟçಕ್ಕೆ ಸ್ವಾತಂತ್ರೊö್ಯÃತ್ಸವ ತಂದುಕೊಟ್ಟAತಹ ಅನೇಕ ಮಹಾನ್ ಹೋರಾಟಗಾರರನ್ನು ಹಾಗೂ ಸಾವಿರಾರು ವೀರ ಯೋಧರನ್ನು ಸ್ಮರಿಸಿಕೊಳ್ಳುವುದು ಎಲ್ಲರ ಆದ್ಯ ಕರ್ತವ್ಯವಾಗಿದೆ ಎಂದರು.
*ಬಳ್ಳಾರಿ ಜಿಲ್ಲೆಯ ಕೊಡುಗೆ ಅಪಾರ:*
ಸ್ವಾತಂತ್ರö್ಯ ಹೋರಾಟದಲ್ಲಿ ಕರ್ನಾಟಕದ ಬಳ್ಳಾರಿ ಜಿಲ್ಲೆಯು ತನ್ನದೇ ಆದ ಮಹತ್ತರ ಕಾಣಿಕೆ ನೀಡಿದೆ. ಬಳ್ಳಾರಿ ಜಿಲ್ಲೆಯ ಸ್ವಾತಂತ್ರö್ಯ ಹೋರಾಟವು ರಾಷ್ಟಿçÃಯ ಭಾವೈಕ್ಯತೆಯ ಸಂಕೇತವಾಗಿತ್ತು. ಕನ್ನಡ ಹಾಗೂ ತೆಲುಗು ಮಾತನಾಡುವ ಜನರು ಭಾಷಾ ಭೇದವನ್ನು ಮರೆತು, ಸ್ವಾತಂತ್ರö್ಯ ಹೋರಾಟದಲ್ಲಿ ಧುಮುಕಿದ ಜಿಲ್ಲೆಯ ಅನೇಕ ಹೋರಾಟಗಾರರನ್ನು ನೆನೆಯಬೇಕು. ಇಲ್ಲಿನ ದ್ವಿಭಾಷಾ ಸಂಸ್ಕೃತಿಯು ವಿಶಿಷ್ಟದ ಸಂಗತಿಯಾಗಿದೆ ಎಂದು ಅವರು ಮನನ ಮಾಡಿದರು.
ಅಂದಿನ ಪ್ರಧಾನಿ ಜವಾಹರ್ಲಾಲ್ ನೆಹರು ಅವರು, 1947 ರ ಕಾಲಘಟ್ಟದಲ್ಲಿ ದೇಶದ ಅಭಿವೃದ್ಧಿಗೆ ಪಣ ತೊಟ್ಟಿದ್ದರು. ಅಂದಿನ ಸಮಯದಲ್ಲಿ ಭಾರತಕ್ಕೆ ಒಂದು ಸೂಜಿಯನ್ನೂ ತಯಾರಿಸುವ ಶಕ್ತಿ ಇರಲಿಲ್ಲ. ಆಗ, ಅವರ ದೂರದೃಷ್ಟಿಯ ಮೂಲಕ ಹೊಸ ಭಾರತವನ್ನು ಕಟ್ಟಿದರು. ಎಲ್ಲಾ ವಿಭಾಗದಲ್ಲೂ ಭಾರತವನ್ನು ಉನ್ನತೀಕರಿಸಿದರು. ಇಂದು ಭಾರತ ಇಸ್ರೋನಂತಹ ಹೆಮ್ಮೆಯ ಸಂಸ್ಥೆಯನ್ನು ಅಂತರಿಕ್ಷ ಕ್ಷೇತ್ರದಲ್ಲಿ ಹೊಸ ಸಾಧನೆಗೆ ಸಾಕ್ಷಿಯಾಗಿದ್ದು, ಸಾಲು ಸಾಲು ರಾಕೆಟ್ ಹಾರಿಸುವ ಮೂಲಕ ವಿಶ್ವದ ಮುಂದುವರೆದ ರಾಷ್ಟçಗಳಿಗೂ ಸವಾಲೆಸೆದಿದೆ ಎಂದು ಹೇಳಿದರು.
ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಆರ್ಥಿಕ, ರಾಜಕೀಯ, ಶೈಕ್ಷಣಿಕ ಹಾಗೂ ಸಾಮಾಜಿಕ ಸಮಾನತೆಯನ್ನು ತಲುಪಿಸಬೇಕು ಎಂಬ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟ ವಿಶ್ವ ಹೋರಾಟದ ಇತಿಹಾಸದಲ್ಲೊಂದು ಮೈಲುಗಲ್ಲು ಆಗಿದೆ. ಸರ್ವಾಧಿಕಾರ ಉಚ್ರಾಯ ಸ್ಥಿತಿಯಲ್ಲಿರುವ, ಅಭಿವ್ಯಕ್ತಿ ಸ್ವಾತಂತ್ರö್ಯವೇ ಪ್ರಶ್ನಾರ್ಥಕವಾಗಿರುವ ಇಂದಿನ ದಿನಗಳಲ್ಲಿ ನೆಹರು-ಅಂಬೇಡ್ಕರ್ರAತಹ ನಾಯಕರನ್ನು ಅರ್ಥಮಾಡಿಕೊಳ್ಳಬೇಕು ಎಂದು ಯುವಪೀಳಿಗೆಗೆ ಕಿವಿಮಾತು ಹೇಳಿದರು.
ರಾಷ್ಟಿçÃಯ ಐಕ್ಯತೆಗೆ, ರಾಷ್ಟçದ ರಕ್ಷಣೆಗೆ ಹಾಗೂ ದೇಶದ ಸಮಗ್ರತೆಗೆ ಎಲ್ಲರೂ ಒಟ್ಟಾಗಿ ಶ್ರಮಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಅವರು ಹೇಳಿದರು.
ಸಮಾಜದ ಸಂಪತ್ತು ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವಲ್ಲಿ ನಮ್ಮ ಸರ್ಕಾರವು ಕಟಿಬದ್ಧವಾಗಿದ್ದು, ಬಡವರು ದುಡಿದ ಹಣವನ್ನು ಅವರಿಗೇ ನೀಡಲು ರಾಜ್ಯ ಸರ್ಕಾರವು ಮಹತ್ವದ ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿದೆ ಎಂದರು.
*ಶಕ್ತಿ ಯೋಜನೆ:*
ಮಹಿಳೆಯರ ಸಬಲೀಕರಣಕ್ಕಾಗಿ ರಾಜ್ಯದ ಮಹಿಳೆಯರು ಬಸ್ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಲು ಶಕ್ತಿ ಯೋಜನೆ ಜಾರಿಗೆ ತಂದಿದ್ದು, ಬಳ್ಳಾರಿ ಜಿಲ್ಲೆಯಲ್ಲಿ ಜುಲೈ ಅಂತ್ಯದವರೆಗೆ 2,91,40,000 ಮಹಿಳೆಯರು ಪ್ರಯಾಣಸಿದ್ದು, 10,19,370,211 ರೂ. ವೆಚ್ಚ ಭರಿಸಲಾಗಿದೆ. ರಾಜ್ಯಾದ್ಯಂತ ಈವರೆಗೆ ಒಟ್ಟು 2,66,72,12,266 ಮಹಿಳೆಯರಿಗೆ ಉಚಿತ ಟಿಕೆಟ್ ನೀಡುವ ಮೂಲಕ ಹೊಸ ದಾಖಲೆಗೆ ನಾಂದಿ ಹಾಡಲಾಗಿದೆ.
ಹಸಿವು ಮುಕ್ತ ಕರ್ನಾಟಕ ಮಾಡಲು ಅನ್ನಭಾಗ್ಯ ಯೋಜನೆಯಡಿ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು 10 ಕೆಜಿ ಆಹಾರ ಧಾನ್ಯ ನೀಡಲಾಗುತ್ತಿದ್ದು, ಉಚಿತ 5 ಕೆಜಿ ಅಕ್ಕಿ ಬದಲಿಗೆ ರೂ.170 ಹಣವನ್ನು ಡಿಬಿಟಿ ಮೂಲಕ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತಿದೆ.
ಬಳ್ಳಾರಿ ಜಿಲ್ಲೆಯಲ್ಲಿ ಜುಲೈ ಅಂತ್ಯದವರೆಗೆ 10,25,833 ಫಲಾನುಭವಿಗಳಿಗೆ 5 ಕೆಜಿ ಪಡಿತರ ಅಕ್ಕಿಯೊಂದಿಗೆ ರೂ.170 ಸೇರಿ ಒಟ್ಟಾರೆ 1,89,77,01,500 ಗಳನ್ನು ಅನುದಾನ ಜಮಾ ಮಾಡಲಾಗಿದೆ. ರಾಜ್ಯಾದ್ಯಂತ ಒಟ್ಟಾರೆ 6445.64 ಕೋಟಿ ಫಲಾನುಭವಿಗಳಿಗೆ ಅನ್ನಭಾಗ್ಯ ಯೋಜನೆ ನೀಡಲಾಗಿದೆ.
*ಗೃಹಲಕ್ಷಿö್ಯೋಜನೆ:*
ಸ್ತಿçà ಸ್ವಾವಲಂಬನೆಯತ್ತ ದಿಟ್ಟ ಹೆಜ್ಜೆಯಾದ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಮನೆಯೊಡತಿಗೆ ಪ್ರತಿ ತಿಂಗಳು ರೂ.2000 ನೇರವಾಗಿ ಫಲಾನುಭವಿ ಖಾತೆಗೆ ವರ್ಗಾವಣೆ ಮಾಡಲಾಗುತ್ತಿದ್ದು, ಜಿಲ್ಲೆಯಲ್ಲಿ ಮೇ ವರೆಗೆ 2,78,733 ಫಲಾನುಭವಿಗಳಿಗೆ ತಲಾ ರೂ.2000 ಗಳಂತೆ ಒಟ್ಟು ರೂ.55,74,66,000 ಮೊತ್ತ ಪಾವತಿ ಮಾಡಲಾಗಿದೆ. ರಾಜ್ಯಾದ್ಯಂತ ಒಟ್ಟಾರೆ 1.23ಕೋಟಿ ಫಲಾನುಭವಿಗಳಿಗೆ ಹಣ ಜಮಾ ಮಾಡಲಾಗಿದೆ.
*ಗೃಹಜ್ಯೋತಿ:*
ಮನೆ-ಮನ ಬೆಳಗುವ ಭಾಗ್ಯದ ಬೆಳಕು ಗೃಹಜ್ಯೋತಿ ಯೋಜನೆಯಡಿ ಪ್ರತಿ ಮನೆಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಪೂರೈಸಲಾಗುತ್ತಿದ್ದು, ಬಳ್ಳಾರಿ ಜಿಲ್ಲೆಯಲ್ಲಿ ಜುಲೈ ಮಾಹೆಯವರೆಗೆ 93,245 ಫಲಾನುಭವಿಗಳಿಗೆ ಒಟ್ಟು ರೂ.5.21 ಕೋಟಿ ಅನುದಾನವನ್ನು ಭರಿಸಲಾಗಿದೆ. ರಾಜ್ಯಾದ್ಯಂತ ಒಟ್ಟಾರೆ 1.51 ಕೋಟಿ ಮನೆಗಳಿಗೆ ರೂ.8,239 ಕೋಟಿ ಹಣವನ್ನು ವ್ಯಯಿಸಲಾಗಿದೆ.
*ಯುವನಿಧಿ:*
ಯುವಕರ ಶ್ರೇಯೋಭಿವೃದ್ಧಿಗಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಯುವನಿಧಿ ಯೋಜನೆಯಡಿ ಪದವೀಧರರಿಗೆ ಮತ್ತು ಡಿಪ್ಲೋಮಾದಾರರಿಗೆ ಪ್ರತಿ ಮಾಹೆ ರೂ.3000 ಮತ್ತು 1500 ರಂತೆ ಒಟ್ಟು 24 ತಿಂಗಳ ಕಾಲ ಈ ಯೋಜನೆಯಡಿ ನಿರುದ್ಯೋಗ ಭತ್ಯೆಯನ್ನು ಬಳ್ಳಾರಿ ಜಿಲ್ಲೆಯ 4327 ಫಲಾನುವಿಗಳಿಗೆ ನೀಡಲಾಗಿದ್ದು, ರಾಜ್ಯದಲ್ಲಿ ಒಟ್ಟಾರೆ 3,03,386 ಫಲಾನುಭವಿಗಳಿಗೆ ರೂ.96,80,73,000 ಕೋಟಿ ಹಣ ನೀಡಲಾಗಿದೆ ಎಂದು ವಿವರವಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರ ಮತ್ತು ಕ್ರೀಡೆಗಳಲ್ಲಿ ರಾಜ್ಯ ಮತ್ತು ರಾಷ್ಟç ಮಟ್ಟದಲ್ಲಿ ಬಹುಮಾನ ಪಡೆದ ಕ್ರೀಡಾಪಟುಗಳನ್ನು ಸನ್ಮಾನಿಸಲಾಯಿತು. ನಂತರದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ನೋಡುಗರ ಮನ ಸೆಳೆದವು.
ಬಳಿಕ ಸಚಿವರು, ನಗರದ ದೈಹಿಕ ವಿಕಲಚೇತನರಿಗೆ 13 ಯಂತ್ರಚಾಲಿತ ತ್ರಿಚಕ್ರ ವಾಹನಗಳನ್ನು ವಿತರಣೆ ಮಾಡಿದರು.
*ಲ್ಯಾಂಡ್ ಬೀಟ್:*
ರಾಜ್ಯದಲ್ಲಿ ಒಟ್ಟು 1.40 ಕೋಟಿ ಎಕರೆ ಸರ್ಕಾರಿ ಜಮೀನು ಇದ್ದು, ಲ್ಯಾಂಡ್ ಬೀಟ್ ಮೊಬೈಲ್ ತಂತ್ರಾAಶದ ಮೂಲಕ ಒಟ್ಟು 91,000 ಎಕರೆ ಜಮೀನುಗಳು ಒತ್ತುವರಿಯಾಗಿರುವುದನ್ನು ಗುರುತಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಹೇಳಿದರು.
ಜಿಲ್ಲಾಡಳಿತದಿಂದ ನಗರದ ವಿಮ್ಸ್ ಮೈದಾನದಲ್ಲಿ ಏರ್ಪಡಿಸಿದ್ದ 78 ನೇ ಸ್ವಾತಂತ್ರೋತ್ಸವದ ಧ್ವಜಾರೋಹಣಾ ನೆರವೇರಿಸಿದ ಬಳಿಕ ಸುದ್ದಿಗಾರರನ್ನುದ್ದೇಶಿಸಿ ಅವರು ಅವರು ಮಾತನಾಡಿದರು.
ಈಗಾಗಲೇ 14.32 ಲಕ್ಷ ಸರ್ಕಾರಿ ಜಮೀನುಗಳ ಸ್ಥಳ ಪರಿಶೀಲನೆಗೆ ಸೂಚಿಸಿದ್ದು, ಈ ಪೈಕಿ 13.04 ಲಕ್ಷ ಜಮೀನುಗಳಿಗೆ ಗ್ರಾಮಲೆಕ್ಕಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇದರಲ್ಲಿ ಕಂದಾಯ ಇಲಾಖೆಯ 1.93 ಲಕ್ಷ ಜಮೀನುಗಳು ಇದ್ದು, ವಿವಿಧ 20 ಇಲಾಖೆಗಳ ಜಮೀನುಗಳನ್ನೂ ಗುರುತಿಸಲಾಗಿದೆ ಎಂದರು.
ಕೆರೆ ಮತ್ತು ಸ್ಮಶಾನಗಳ ಹೆಚ್ಚುವರಿ ಜವಾಬ್ದಾರಿ ತೆಗೆದುಕೊಂಡು, ಸಮೀಕ್ಷೆ ನಡೆಸಲಾಗಿದೆ. ಈಗಾಗಲೇ ಬಳ್ಳಾರಿ ಜಿಲ್ಲೆಯಲ್ಲಿ ಶೇ.80.27 ರಷ್ಟು ಅಂದರೆ 55.638 ಸರ್ಕಾರಿ ಜಮೀನುಗಳ ಪೈಕಿ 48,786 ಆಸ್ತಿಗಳನ್ನು ಲ್ಯಾಂಡ್ ಬೀಟ್ ತಂತ್ರಾAಶಕ್ಕೆ ಒಳಪಡಿಸಲಾಗಿದೆ. ಆಗಸ್ಟ್ ತಿಂಗಳಿನಿAದ ಸರ್ವೇಯರ್ ಲಭ್ಯತೆ ನೋಡಿಕೊಂಡು ಒತ್ತುವರಿ ತೆರವು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
*ಭೂ ಸುರಕ್ಷಾ ಕಾರ್ಯಕ್ರಮ:*
ಭೂ ಸುರಕ್ಷಾ ಕಾರ್ಯಕ್ರಮದಡಿ ಎಲ್ಲ ದಾಖಲೆಗಳನ್ನು ಸ್ಕಾö್ಯನ್ ಮಾಡಿ, ಇಂಡೆಕ್ಸ್ ಮಾಡಿ ಡಿಜಿಟಲೀಕರಣ ಮಾಡಲಾಗಿದೆ. ಈವರೆಗೆ ಒಟ್ಟು 4,43,27,379 ಕೋಟಿ ಪುಟಗಳನ್ನು ಸ್ಕಾö್ಯನ್ ಮಾಡಲಾಗಿದೆ. 31 ತಾಲ್ಲೂಕಿನಲ್ಲಿ ಪ್ರಾಯೋಗಿಕವಾಗಿ ಕೈಗೆತ್ತಿಕೊಳ್ಳಲಾಗಿದ್ದು, ಉಳಿದ ತಾಲೂಕುಗಳಲ್ಲೂ ದಾಖಲೆಗಳನ್ನು ಸ್ಕಾö್ಯನ್ ಮಾಡಿ ಡಿಜಿಟಲೀಕರಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಮುಂದಿನ ಒಂದು ವರ್ಷದೊಳಗೆ ದಾಖಲೆಗಳ ಡಿಜಿಟಲೀಕರಣ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು. ಇದರಿಂದ ಸಾರ್ವಜನಿಕರಿಗೆ ದಾಖಲೆಗಳನ್ನು ಒದಗಿಸುವುದರ ಜೊತೆಗೆ, ದಾಖಲೆಗಳ ತಿರುಚುವಿಕೆ, ದಾಖಲೆಗಳ ನಾಪತ್ತೆ ಮೊದಲಾದವುಗಳನ್ನು ತಡೆಯಬಹುದಾಗಿದೆ. ಬಳ್ಳಾರಿ ಜಿಲ್ಲಾಧಿಕಾರಿಗಳ ಅಭಿಲೇಖನಾಲಯದ ಸೇರಿದಂತೆ ಈಗಾಗಲೇ 23,11,771 ಪುಟಗಳ ಮೌಲ್ಯಾಧಾರಿತ ರೈತರ ದಾಖಲೆಗಳನ್ನು ಗಣಕೀಕರಿಸಲಾಗಿದ್ದು, ರೈತರು ಇದರ ಸದುಪಯೋಗ ಪಡಿಸಿಕೊಳ್ಳಬಹುದು ಎಂದರು.
*ಪಹಣಿ-ಆಧಾರ್ ಜೋಡಣೆ:*
ಜಮೀನು ಮಾರಾಟದಲ್ಲಿ ವಂಚನೆ ತಡೆಯಲು ಪಹಣಿ-ಆಧಾರ್ ಜೋಡಣೆ ಕೈಗೊಳ್ಳಲಾಗಿದೆ. ಒಬ್ಬರು ಮೂರ್ನಾಲ್ಕು ದಶಕಗಳಿಂದ ಜಮೀನು ಸಾಗುವಳಿ ಮಾಡುತ್ತಿದ್ದು, ಅದಕ್ಕೆ ಬೇರೆ ವ್ಯಕ್ತಿಗಳು ಭೂ ಮಂಜೂರಾತಿ ಮಾಡಿಸಿಕೊಳ್ಳುವ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಯೋಜನೆಯಲ್ಲಿ ಈಗಾಗಲೇ ಬಳ್ಳಾರಿ ಜಿಲ್ಲೆಯಲ್ಲಿ ಶೇ.80 ರಷ್ಟು 5,23,542 ರೈತರ ಜಮೀನು ಪೈಕಿ 4,12,084 ಭೂ ಮಾಲೀಕರ ಜಮೀನನ್ನು ಅವರ ಆಧಾರ ಸಂಖ್ಯೆಗೆ ಜೋಡಣೆ ಮಾಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ವಿಧಾನಪರಿಷತ್ ಶಾಸಕ ವೈ.ಎಂ.ಸತೀಶ್, ಡಾ.ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಉಪ ಮಹಾಪೌರರಾದ ಡಿ.ಸುಕುಂ, ಬುಡಾ ಅಧ್ಯಕ್ಷ ಜೆ.ಎಸ್.ಆಂಜನೇಯುಲು, ಬಳ್ಳಾರಿ ವಲಯ ಪೊಲೀಸ್ ಮಹಾನೀರಿಕ್ಷಕರಾದ ಬಿ.ಎಸ್.ಲೋಕೇಶ್ ಕುಮಾರ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಅರಣ್ಯ ಉಪ-ಸಂರಕ್ಷಣಾಧಿಕಾರಿ ಸಂದೀಪ್ ಸೂರ್ಯವಂಶಿ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಮಹಾನಗರ ಪಾಲಿಕೆಯ ಸದಸ್ಯರು, ಜನಪ್ರತಿನಿಧಿಗಳು ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.