ಬಳ್ಳಾರಿ,ಜ.26 : ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ‘ಜನಸ್ಪಂದನ’ ಕಾರ್ಯಕ್ರಮವನ್ನು ಜ.30 ರಂದು ಬೆಳಿಗ್ಗೆ 11 ಗಂಟೆಗೆ ಬಳ್ಳಾರಿ ತಾಲ್ಲೂಕಿನ ಬಳ್ಳಾರಿ ಹೋಬಳಿಯ ಕುಡಿತಿನಿ ಗ್ರಾಮದ ವಾಲ್ಮೀಕಿ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ಅವರು ತಿಳಿಸಿದ್ದಾರೆ.
ಸಾರ್ವಜನಿಕರು ಸರ್ಕಾರಿ ಕೆಲಸಕ್ಕೆ ಸಂಬಂಧಿಸಿದಂತೆ ತಮ್ಮ ಅಹವಾಲುಗಳಿದ್ದಲ್ಲಿ ಜ.30 ರಂದು ನಡೆಯುವ ‘ಜನಸ್ಪಂದನ’ ಕಾರ್ಯಕ್ರಮದಲ್ಲಿ ಬಂದು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.