ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದ ಬಾಂಬರ್ ನ ಸಿಸಿಟಿವಿ ಪೋಟೋವನ್ನು ಎನ್ ಐಎ ಬಿಡುಗಡೆ ಮಾಡಿತ್ತು. ಇದೇ ಫೋಟೋವನ್ನ ಆಧಾರವಾಗಿಟ್ಟುಕೊಂಡು ಕಲಾವಿದ ಹರ್ಷ ಎಂಬುವವರು ಬಾಂಬರ್’ನ ರೇಖಾ ಚಿತ್ರವನ್ನು ಬಿಡಿಸಿದ್ದು, ಈ ರೇಖಾಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸಿಸಿಟಿವಿಯಲ್ಲಿ ಅಸ್ಪಷ್ಟವಾಗಿರುವ ಫೋಟೋವನ್ನು ಅಧಾರಿತವಾಗಿಟ್ಟು ಹರ್ಷಾ ಅವರು ಇಮ್ಯಾಜನರಿ ಸ್ಕೆಚ್ ಬಿಡಿಸಿದ್ದಾರೆ. ಸಂಪೂರ್ಣ ಮುಖದ ರೇಖಾ ಚಿತ್ರ ಬಿಡಿಸಿರುವ ಅವರು, ನಾಲ್ಕು ಆ್ಯಂಗಲ್ ನ ರೇಖಾಚಿತ್ರ ಬಿಡುಗಡೆ ಮಾಡಿದ್ದಾರೆ.
ಈ ರೇಖಾ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ಎನ್ಐಎ ಮತ್ತು ನಗರ ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ.
ರಾಮೇಶ್ವರಂ ಕೆಫೆಯ ಬಾಂಬ್ ಸ್ಪೋಟದ ಶಂಕಿತ ವ್ಯಕ್ತಿಯ ಮಾಸ್ಕ್ ಇಲ್ಲದ ಫೋಟೋವನ್ನು ಎನ್ಐಎ ರಿಲೀಸ್ ಮಾಡಿದ್ದು, ಶಂಕಿತ ಬಾಂಬರ್ ಬಗ್ಗೆ ಮಾಹಿತಿ ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಘೋಷಿಸಿದೆ. ಅಲ್ಲದೇ ಮಾಹಿತಿದಾರರ ಗುರುತನ್ನು ಗೌಪ್ಯವಾಗಿ ಇರಿಸಲಾಗುವುದು ಎಂದೂ ಹೇಳಿದೆ.
ಶಂಕಿತ ಉಗ್ರನ ಸುಳಿವು ಸಿಕ್ಕರೆ 080-29510900, 8904241100 ಸಂಖ್ಯೆಗೆ ಕರೆ ಮಾಡುವಂತೆ ಎನ್ಐಎ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. [email protected] ಗೂ ಮೇಲ್ ಮಾಡಿ ಶಂಕಿತನ ಮಾಹಿತಿಯನ್ನು ಅಧಿಕಾರಿಗಳ ಜೊತೆ ಹಂಚಿಕೊಳ್ಳಬಹುದಾಗಿದೆ.