ಜಾತಿಗಣತಿ ವರದಿ ವಿಚಾರವಾಗಿ ಇಂದು ಸಂಜೆ ಸಿಎಂ ಸಿದ್ದರಾಮಯ್ಯರನ್ನು ಆಯೋಗದ ಅಧ್ಯಕ್ಷರು ಮತ್ತು ಸದಸ್ಯರು ಭೇಟಿಯಾಗಲಿದ್ದಾರೆ. ನಾಳೆ ರಾಜ್ಯ ಸರ್ಕಾರಕ್ಕೆ ಆಯೋಗದಿಂದ ಬೆಳಗ್ಗೆ 11 ಗಂಟೆಗೆ ವರದಿ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಬೆಂಗಳೂರು. ಫೆಬ್ರವರಿ 28: ಇತ್ತೀಚೆಗೆ ಜಾತಿಗಣತಿ ವರದಿ ಸ್ವೀಕರಿಸುವಂತೆ ಸಾಕಷ್ಟು ರಾಜಕೀಯ ನಾಯಕರ, ಗಣ್ಯ ವ್ಯಕ್ತಿಗಳಿಂದ ಸಿಎಂ ಸಿದ್ದರಾಮಯ್ಯ (Siddaramaiah) ರಿಗೆ ಒತ್ತಾಯ ಮಾಡಲಾಗಿತ್ತು. ಸದ್ಯ ಇದೀಗ ಜಾತಿಗಣತಿ ವರದಿ ಸ್ವೀಕರಿಸಲು ಸಮಯ ಕೊಡಿಬಂದಂತ್ತಿದೆ. ಜಾತಿಗಣತಿ ವರದಿ ವಿಚಾರವಾಗಿ ಇಂದು ಸಂಜೆ ಸಿಎಂ ಸಿದ್ದರಾಮಯ್ಯರನ್ನು ಆಯೋಗದ ಅಧ್ಯಕ್ಷರು ಮತ್ತು ಸದಸ್ಯರು ಭೇಟಿಯಾಗಲಿದ್ದಾರೆ. ನಾಳೆ ರಾಜ್ಯ ಸರ್ಕಾರಕ್ಕೆ ಶಾಶತ್ವ ಹಿಂದುಳಿದ ವರ್ಗಗಳ ಆಯೋಗದಿಂದ ಬೆಳಗ್ಗೆ 11 ಗಂಟೆಗೆ ವರದಿ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಕಾಂತರಾಜು ಅವರ ಜಾತಿಗಣತಿ ವರದಿ ಸ್ವೀಕಾರ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಜೊತೆಗೆ ಜಾತಿಗಣತಿ ವರದಿಯಲ್ಲಿ ಲೋಪವಿದ್ದರೆ ತಜ್ಞರ ಸಲಹೆ ಪಡೆಯುತ್ತೇನೆ ಎಂದು ತಿಳಿಸಿದ್ದರು. ಇದನ್ನು ಸಂಪುಟದಲ್ಲಿ ಇಟ್ಟು ತೀರ್ಮಾನ ಮಾಡುತ್ತೇನೆ ಎಂದು ಹೇಳಿದ್ದರು.
ಈ ಹಿಂದೆ ಜಾತಿಗಣತಿ ವರದಿ ವಿರೋಧಿಸಿ ಒಕ್ಕಲಿಗ ಸಮುದಾಯದ ಮನವಿ ಪತ್ರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಸಹಿ ಮಾಡಿದ್ದರು. ಆದರೆ ಇತ್ತೀಚೆಗೆ ಅಹಿಂದ ಸಮಾವೇಶದಲ್ಲಿ ಮಾತನಾಡಿದ್ದ ಡಿಕೆ ಶಿವಕುಮಾರ್ ರಾಹುಲ್ ಗಾಂಧಿ ಜಾತಿಗಣತಿ ಆಗಬೇಕು ಎಂದಿದ್ದಾರೆ, ಇದಕ್ಕೆ ಕಾಂಗ್ರೆಸ್ ಬದ್ಧವಾಗಿದೆ ಎಂದು ಹೇಳಿದ್ದರು.
ಪುನರ್ ಪರಿಶೀಲನೆಗೆ ಒಕ್ಕಲಿಗೆ ಸಮುದಾಯ ಒತ್ತಾಯ
ಜಾತಿ ಗಣತಿ ವರದಿ ಬಿಡುಗಡೆಗೆ ಪರ-ವಿರೋಧ ವ್ಯಕ್ತವಾಗಿತ್ತು. ಕಾಂತರಾಜು ವರದಿಯನ್ನು ಒಕ್ಕಲಿಗ ಸಮುದಾಯದ ನಾಯಕರು ವಿರೋಧಿಸಿದ್ದರು. ಇತ್ತೀಚೆಗೆ ನಡೆದ ಸಭೆಯಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ, ನಂಜಾವಧೂತಶ್ರೀ ನೇತೃತ್ವದಲ್ಲಿ ಈ ಕುರಿತು ಚರ್ಚಿಸಲು ಸಭೆ ಮಾಡಲಾಗಿತ್ತು. ಡಿಸಿಎಂ ಡಿ.ಕೆ.ಶಿವಕುಮಾರ್, ಕೃಷಿ ಸಚಿವ ಚಲುವರಾಯಸ್ವಾಮಿ, ಶಾಸಕರಾದ ಅಶ್ವತ್ಥ್ ನಾರಾಯಣ್, ಶರತ್ ಬಚ್ಚೇಗೌಡ, ಎಂ.ಕೃಷ್ಣಪ್ಪ, S.T.ಸೋಮಶೇಖರ್, ಆರಗ ಜ್ಞಾನೇಂದ್ರ ಹಾಗೂ ಒಕ್ಕಲಿಗ ಸಂಘದ ನಾಯಕರು ಪಾಲ್ಗೊಂಡಿದ್ದರು.