ಬೆಂಗಳೂರು, ಆ.03: ಕೆಲಸ ನಿರ್ವಹಿಸುತ್ತಿದ್ದ ವೇಳೆ ಯಾದಗಿರಿ ಪಿಎಸ್ಐ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಆದರೆ, ಅವರ ಸಾವಿಗೆ ಯಾದಗಿರಿ ಶಾಸಕ ಮತ್ತು ಅವರ ಪುತ್ರನೇ ಕಾರಣ ಎಂದು ಕುಟುಂಬದವರು ಆರೋಪಿಸುತ್ತಿದ್ದಾರೆ. ಈ ಹಿನ್ನಲೆ ಪಿಎಸ್ಐ ಪರಶುರಾಮ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಕೇಸ್ನ್ನು ಸಿಐಡಿ ತನಿಖೆಗೆ ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶಿಸಿದೆ.