ಸುವರ್ಣವಾಹಿನಿ ಸುದ್ದಿ ,ಜ,೨೪: ಗದಗ : ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಗುಡಿ ಗ್ರಾಮದ ಬಳಿ ರ್ಕಾರಿ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ತಮಿಳುನಾಡು ಮೂಲದ ಲಾರಿ ಚಾಲಕ ವಿನೋದ್ ಕುಮಾರ್ (೩೮) ಹಾಗೂ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಕೊಪ್ಪಳದ ಭಾಗ್ಯನಗರದ ನಿವಸಿ ಗೀತಾ ಕಲಾಲ್ (೪೦) ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ನಾಳೆ ಹುಣ್ಣಿಮೆ ಇರುವ ಹಿನ್ನಲೆ ಸಹೋದರಿಯರು ಯಲ್ಲಮ್ಮನ ಗುಡ್ಡಕ್ಕೆ ಹೋಗುತ್ತಿದ್ದರು. ಇದೀಗ ಮನೆ ಬಿಟ್ಟು ರ್ಧಗಂಟೆಯಲ್ಲೇ ಸಾವಿನ ಸುದ್ದಿ ಬಂದಿದ್ದು, ಸಂಬಂಧಿಕರ ಗೋಳಾಟ ಮುಗಿಲುಮುಟ್ಟಿದೆ. ಇನ್ನುಳಿದಂತೆ ಬಸ್ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.