ಬಳ್ಳಾರಿ,ಏ.07 : ಲೋಕಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಬರುವ ಮೇ. 07 ರಂದು ಜಿಲ್ಲೆಯ ಎಲ್ಲ ಮತದಾರರು ತಪ್ಪದೇ ಮತ ಚಲಾಯಿಸಬೇಕು. ಮತದಾನ ಮಾಡುವುದು ಜವಾಬ್ದಾರಿಯುತ ನಾಗರಿಕರ ಆದ್ಯ ಕರ್ತವ್ಯವಾಗಿದೆ ಟಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಕರೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಮತದಾನ ಜಾಗೃತಿ ಅಂಗವಾಗಿ ನಗರದ ಡಾ.ರಾಜ್ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಮೈದಾನದ ಆವರಣದಿಂದ ಭಾನುವಾರ ಆಯೋಜಿಸಿದ್ದ ಸೈಕಲ್ ಜಾಥಾಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಮತದಾನ ಒಂದು ಮೂಲಭೂತ ಹಕ್ಕು. ಮತದಾನ ಪ್ರಕ್ರಿಯೆಯಲ್ಲಿ ಎಲ್ಲಾ ಮತದಾರರು ಭಾಗವಹಿಸಿ ಮತ ಚಲಾವಣೆ ಮಾಡಿದಾಗ ಮಾತ್ರ ಪ್ರಜಾ ಪ್ರಭುತ್ವದಲ್ಲಿನ ನಮ್ಮ ಹಕ್ಕುಗಳ ಪರವಾಗಿ ಪ್ರಶ್ನಿಸಲು ಅರ್ಹರಾಗಿರುತ್ತೇವೆ ಎಂದರು.
ಈಗಾಗಲೇ ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದವರು ಹೊಸದಾಗಿ ನೋಂದಾಯಿಸಿಕೊಳ್ಳಲು ಜಿಲ್ಲಾಡಳಿತ ಅನುವು ಮಾಡಿದೆ. ಹೆಸರಿಲ್ಲದವರು ಏ.09 ರ ಒಳಗಾಗಿ ತಮ್ಮ ಹೆಸರು ನೋಂದಾಯಿಸಲು ಅವಕಾಶವಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರಾದ ರಾಹುಲ್ ಶರಣಪ್ಪ ಸಂಕನೂರ ಅವರು ಮಾತನಾಡಿ, ಚುನಾವಣೆಗಳು ದೇಶದಲ್ಲಿ ಹಬ್ಬದ ಸಂಭ್ರಮವಾಗಿದ್ದು, ಸುಭದ್ರ ಪ್ರಜಾಪ್ರಭುತ್ವ ನಿರ್ಮಿಸಲು ಅರ್ಹ ಮತದಾರರು ತಪ್ಪದೇ ಮತ ಚಲಾವಣೆ ಮಾಡಬೇಕು ಎಂದರು.
ಜಿಲ್ಲಾಡಳಿತದ ಸಹಯೋಗದೊಂದಿಗೆ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಜಿಲ್ಲೆಯ ಶೇಕಡಾವಾರು ಮತದಾನ ಪ್ರಮಾಣ ಹೆಚ್ಚಿಸಲು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಈ ಮೂಲಕ ಸಾರ್ವಜನಿಕರಲ್ಲಿ ಮತದಾನ ಮಹತ್ವ ಕುರಿತು ಮನವರಿಕೆ ಮಾಡಲಾಗುತ್ತಿದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಶೇಕಡ ನೂರಕ್ಕೆ ನೂರರಷ್ಟು ಮತದಾನ ಪ್ರಮಾಣ ಹೆಚ್ಚಿಸಲು ಶ್ರಮಿಸಲಾಗುತ್ತದೆ ಎಂದು ತಿಳಿಸಿದರು.
ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ರಂಜಿತ್ ಕುಮಾರು ಬಂಡಾರು ಅವರು ಮಾತನಾಡಿ, ಪ್ರಜಾ ಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳು ಮತ ಚಲಾವಣೆ ಮಾಡುವುದು ಮುಖ್ಯವಾಗಿದ್ದು, ದೇಶದ ಹಿತ ರಕ್ಷಣೆಗೆ ಪ್ರಜೆಗಳು ತಪ್ಪದೇ ಮತ ಚಲಾಯಿಸಿ ಎಂದು ಕಿವಿಮಾತು ಹೇಳಿದರು.
ಬಳಿಕ ಮತದಾನದ ಪ್ರತಿಜ್ಞಾ ವಿಧಿ ಭೋದಿಸಲಾಯಿತು. ಸಾರ್ವಜನಿಕರಲ್ಲಿ ಮತದಾನ ಅರಿವು ಮೂಡಿಸುವ ಸಲುವಾಗಿ ‘ನಾನು ಹೆಮ್ಮೆಯ ಮತದಾರ’ ಎನ್ನುವ ಘೋಷಣೆಯ ಸೆಲ್ಫಿ ಬೂತ್ ಪಾಯಿಂಟ್ ಹಾಕಲಾಗಿತ್ತು.
ಇದೇ ವೇಳೆ ಆಯೋಜಿಸಿದ್ದ ಸಹಿ ಸಂಗ್ರಹ ಅಭಿಯಾನದಲ್ಲಿ ‘ನಾನು ಕಡ್ಡಾಯವಾಗಿ ಮತದಾನ ಮಾಡುತ್ತೇನೆ’ ಎಂದು ಎಲ್ಲಾ ಅಧಿಕಾರಿಗಳು, ಸಾರ್ವಜನಿಕರು ಸಹಿ ಹಾಕಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಎನ್.ಝುಬೇರ್, ಸಹಾಯಕ ಆಯುಕ್ತ ಹೇಮಂತ್, ಮಹಾನಗರ ಪಾಲಿಕೆಯ ಆಯುಕ್ತ ಜಿ.ಖಲೀಲ್ ಸಾಬ್, ಬಳ್ಳಾರಿ ತಹಸೀಲ್ದಾರ್ ಗುರುರಾಜ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಬಿ.ಉಮಾದೇವಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.
ಮತದಾನ ಜಾಗೃತಿ ಸೈಕಲ್ ಜಾಥಾವು ಮುನಿಸಿಪಲ್ ಕಾಲೇಜು ಮೈದಾನದಿಂದ ಆರಂಭವಾಗಿ ಗಡಿಗಿ ಚೆನ್ನಪ್ಪ ವೃತ್ತ-ಹೆಚ್.ಆರ್.ಗವಿಯಪ್ಪ ವೃತ್ತ-ಕೋಟೆ ಪ್ರದೇಶ(ಶ್ರೀಮೇಧಾ ಕಾಲೇಜು ಮುಂಭಾಗ)-ಮೊದಲನೇ ರೈಲ್ವೇ ಗೇಟ್-ಸುಧಾ ಕ್ರಾಸ್-ಇನ್ಫ್ಯಾಂಟರಿ ರಸ್ತೆ-ಎಸ್ಪಿ ವೃತ್ತದ ಮೂಲಕ ದುರ್ಗಮ್ಮ ದೇವಸ್ಥಾನದ ಆವರಣಕ್ಕೆ ತಲುಪಿ ಕೊನೆಗೊಂಡಿತು.