ಟೀಮ್ ಇಂಡಿಯಾ ಪರ 40 ಟೆಸ್ಟ್ ಪಂದ್ಯಗಳನ್ನಾಡಿರುವ ಯುವರಾಜ್ ಸಿಂಗ್ 1900 ರನ್ ಹಾಗೂ 9 ವಿಕೆಟ್ಗಳನ್ನು ಕಬಳಿಸಿದ್ದಾರೆ. ಹಾಗೆಯೇ 304 ಏಕದಿನ ಪಂದ್ಯಗಳಿಂದ 8701 ರನ್ಸ್ ಹಾಗೂ 111 ವಿಕೆಟ್ಗಳನ್ನು ಪಡೆದಿದ್ದಾರೆ. ಇದರ ಜೊತೆಗೆ ಟಿ20 ಕ್ರಿಕೆಟ್ನಲ್ಲಿ 58 ಪಂದ್ಯಗಳನ್ನಾಡಿರುವ ಯುವಿ 1177 ರನ್ಸ್ ಹಾಗೂ 28 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಟೀಮ್ ಇಂಡಿಯಾದ ಮಾಜಿ ಆಲ್ರೌಂಡರ್ ಯುವರಾಜ್ ಸಿಂಗ್ (Yuvraj Singh) ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಎಂದು ತಿಳಿಸಿದ್ದಾರೆ. ಇತ್ತೀಚೆಗೆ ಯುವರಾಜ್ ಸಿಂಗ್ ಕುಟುಂಬಸ್ಥರ ಜೊತೆ ಕೇಂದ್ರ ಸಾರಿಗೆ ಖಾತೆಯ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿದ್ದರು. ಈ ಭೇಟಿಯ ಬೆನ್ನಲ್ಲೇ ಸಿಕ್ಸರ್ ಸಿಂಗ್ ಬಿಜೆಪಿ ಪರ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿ ಹರಿದಾಡಿದ್ದವು.
ಪಂಜಾಬ್ನ ಗುರುದಾಸ್ಪುರ ಲೋಕಸಭಾ ಕ್ಷೇತ್ರದಿಂದ ಯುವರಾಜ್ ಸಿಂಗ್ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆಯಿದ್ದು, ಇದೇ ಕಾರಣದಿಂದಾಗಿ ಅವರು ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿದ್ದಾರೆ ಎನ್ನಲಾಗಿತ್ತು. ಇದೀಗ ಈ ಬಗ್ಗೆ ಸ್ಪಷ್ಟನೆ ನೀಡಿರುವ ಯುವರಾಜ್ ಸಿಂಗ್, ಮುಂಬರುವ ಚುನಾವಣೆಯಲ್ಲಿ ನಾನು ಕಣಕ್ಕಿಳಿಯುತ್ತಿಲ್ಲ ಎಂದು ತಿಳಿಸಿದ್ದಾರೆ.
ನಾನು ಗುರುದಾಸ್ಪುರದಿಂದ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ನಾನು ವಿವಿಧ ರೀತಿಯಲ್ಲಿ ಜನರನ್ನು ಬೆಂಬಲಿಸಲು ಮತ್ತು ಸಹಾಯ ಮಾಡಲು ಬಯಸುತ್ತೇನೆ. ಅದನ್ನು YOUWECAN ಫೌಂಡೇಷನ್ ಮೂಲಕ ಮುಂದುವರಿಸುತ್ತೇನೆ ಎಂದು ಯುವರಾಜ್ ಸಿಂಗ್ ತಿಳಿಸಿದ್ದಾರೆ.
ಇದರೊಂದಿಗೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಯುವರಾಜ್ ಸಿಂಗ್ ಬಿಜೆಪಿ ಪರ ಕಣಕ್ಕಿಳಿಯಲಿದ್ದಾರೆ ಎಂಬ ವದಂತಿಗೆ ತೆರೆ ಬಿದ್ದಂತಾಗಿದೆ. ಇದಾಗ್ಯೂ ಅವರು ಚುನಾವಣಾ ಪ್ರಚಾರಗಳಲ್ಲಿ ಕಾಣಿಸಿಕೊಳ್ಳಲಿದ್ದಾರಾ ಕಾದು ನೋಡಬೇಕಿದೆ.
ಯುವರಾಜ್ ಸಿಂಗ್ ವೃತ್ತಿಜೀವನ:
ಟೀಮ್ ಇಂಡಿಯಾ ಪರ 40 ಟೆಸ್ಟ್ ಪಂದ್ಯಗಳನ್ನಾಡಿರುವ ಯುವರಾಜ್ ಸಿಂಗ್ 1900 ರನ್ ಹಾಗೂ 9 ವಿಕೆಟ್ಗಳನ್ನು ಕಬಳಿಸಿದ್ದಾರೆ. ಹಾಗೆಯೇ 304 ಏಕದಿನ ಪಂದ್ಯಗಳಿಂದ 8701 ರನ್ಸ್ ಹಾಗೂ 111 ವಿಕೆಟ್ಗಳನ್ನು ಪಡೆದಿದ್ದಾರೆ. ಇದರ ಜೊತೆಗೆ ಟಿ20 ಕ್ರಿಕೆಟ್ನಲ್ಲಿ 58 ಪಂದ್ಯಗಳನ್ನಾಡಿರುವ ಯುವಿ 1177 ರನ್ಸ್ ಹಾಗೂ 28 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇವೆಲ್ಲಕ್ಕಿಂತ ಮುಖ್ಯವಾಗಿ 2007ರ ಟಿ20 ವಿಶ್ವಕಪ್ ಹಾಗೂ 2011 ರ ಏಕದಿನ ವಿಶ್ವಕಪ್ ಗೆಲ್ಲುವಲ್ಲಿ ಯುವರಾಜ್ ಸಿಂಗ್ ಮಹತ್ವದ ಪಾತ್ರವಹಿಸಿದ್ದರು.
ಸದ್ಯ ಟೀಮ್ ಇಂಡಿಯಾ ಮತ್ತು ಐಪಿಎಲ್ನಿಂದ ನಿವೃತ್ತರಾಗಿರುವ ಯುವರಾಜ್ ಸಿಂಗ್ ಲೆಜೆಂಡ್ಸ್ ಲೀಗ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಮುಂಬರುವ ಲೆಜೆಂಡ್ಸ್ ಲೀಗ್ ಟೂರ್ನಿಯಲ್ಲಿ ಯುವಿ ಮತ್ತೊಮ್ಮೆ ಮೈದಾನಕ್ಕಿಳಿಯುವುದು ಖಚಿತ ಎನ್ನಬಹುದು.